ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಕಲ್ಯಾಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪೋಷಕರಿಗೆ ಮಕ್ಕಳೇ ಸರ್ವಸ್ವತಾಯಿ-ತಂದೆಗಳಿಗೆ ತಮ್ಮ ಮಕ್ಕಳೇ ಸರ್ವಸ್ವ ವಾಗಿರುತ್ತಾರೆ. ಅದೇ ರೀತಿ ಮಕ್ಕಳು ಸಹಾ ತಾಯಿ-ತಂದೆಯೇ ನಮ್ಮ ಸರ್ವಸ್ವ ಎಂದು ಎಲ್ಲರೂ ಭಾವಿಸಿದರೆ ಶಾಂತಿಯುತ ಮತ್ತು ನೆಮ್ಮದಿಯುತ ಸಮಾಜವು ನಿರ್ಮಾಣವಾಗುತ್ತದೆ. ಹಿರಿಯ ನಾಗರೀಕರನ್ನು ಗೌರವಯುತವಾಗಿ ನಡೆಸಿಕೊಂಡಾಗ ಮಾತ್ರ ಅಂತಹ ಸಮಾಜ ಪರಿಪೂರ್ಣ ಸಮಾಜವಾಗುತ್ತದೆ. ಆಧುನಿಕತೆಯ ಜೀವನ ಶೈಲಿ ಕುಟುಂಬಗಳು ಮತ್ತು ಸಂಬಂಧಗಳ ನಡುವೆ ಬಿರುಕುಂಟು ಮಾಡುತ್ತಿದೆ. ತಂದೆತಾಯಿಗಳಿಂದ ಪಡೆದದ್ದನ್ನು ಅವರ ಸಂಧ್ಯಾಕಾಲದಲ್ಲಿ ವಾಪಸ್ ನೀಡುವ ಕೆಲಸವನ್ನು ಮಕ್ಕಳು ಮಾಡಬೇಕು ಎಂದು ತಿಳಿಸಿದರು.
ಬಾಲ್ಯ , ಯೌವ್ವನ, ವೃದ್ಧಾಪ್ಯ, ಮಾನವನ ಜೀವನದ ಸಹಜ ಘಟ್ಟಗಳು. ಹಿರಿಯ ನಾಗರಿಕರ ಸಾಧನೆಗಳು ಯುವಜನರಿಗೆ ಸ್ಪೂರ್ತಿ ನೀಡಲೆಂಬ ಸದುದ್ಧೇಶದಿಂದ ಹಿರಿಯ ನಾಗರಿಕನ್ನು ಗೌರವಿಸಿ ಸನ್ಮಾನಿಸಲಾಗುತ್ತದೆ. ನಮ್ಮ ಆತ್ಮಸಾಕ್ಷಿಯೇ ನ್ಯಾಯಾಲಯವಿದ್ದಂತೆ ಎಂದು ಮಹಾತ್ಮಾಗಾಂಧೀಜಿಯವರು ಹೇಳಿದ್ದರು. ಸಮಾಜದಲ್ಲಿ ಇಂದೂ ಮೌಢ್ಯಗಳು, ಕಂದಾಚಾರಗಳಿವೆ. ಇವುಗಳಿಗೆ ಜೋತುಬೀಳದೇ ವೈಚಾರಿಕತೆಯನ್ನು ಬೆಳೆಸಿಕೊಳ್ಳುವ ಅಗತ್ಯವಿದೆ ಎಂದರು.
ಸರ್ಕಾರಿ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿ
ಹಿರಿಯ ನಾಗರೀಕರಿಗೆ ನಡೆದ ಕ್ರೀಡಾ ಕೂಟದಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ನೀಡಲಾಯಿತು. ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದಶಕ ವೆಂಕಟೇಶರೆಡ್ಡಿ, ಜಿ.ಪಂ.ಲೆಕ್ಕಾಧಿಕಾರಿ ಈಶ್ವರಪ್ಪ, ಸಿಡಿಪಿಓ ಗಂಗಾಧರ್,ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ಬಿ.ವಿ.ಕೃಷ್ಣಪ್ಪ, ನಿವೃತ್ತ ಅಧಿಕಾರಿ ಶಾಂತರಸು, ಸಾಯಿ ಇಂಟರ್ನಾ ನ್ಯಾಷನಲ್ ಚಾರಿಟಬಲ್ ಟ್ರಸ್ಟ್ ನ ನಾರಾಯಣಮೂರ್ತಿ ದ್ವಾರಕಮಾಯಿ ವೃದ್ದಾಶ್ರಮದ ಮುರಳಿ ಮತ್ತಿತರರು ಇದ್ದರು.