ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಹಾಗನಹಳ್ಳಿಯ ಅಮ್ಮನ ಆಸರೆ ಚಾರಿಟಬಲ್ ಸೇವಾ ಟ್ರಸ್ಟ್ ಉಚಿತ ವೃದ್ಧಾಶ್ರಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ 77ನೇ ಹುಟ್ಟುಹಬ್ಬದ ಪ್ರಯುಕ್ತ ದಿನಸಿ ಸಾಮಗ್ರಿಗಳು ಹಾಗೂ ಹಣ್ಣು ಹಂಪಲು ವಿತರಿಸಿ ಮಾತನಾಡಿದರು. ಇತ್ತೀಚೆಗೆ ಮಕ್ಕಳು ತಮ್ಮನ್ನು ಸಾಕಿ ಸಲುಹಿದ ತಂದೆ- ತಾಯಂದಿರನ್ನು ಗೌರವಿಸುವುದಿರಲಿ ಅವರನ್ನು ನೋಡಿಕೊಳ್ಳದೇ ನಿರ್ಲಕ್ಷ್ಯ ವಹಿಸಿದ್ದಾರೆ. ಹೀಗಾಗಿ ಇಂತಹ ವೃದ್ಧಾಶ್ರಮಗಳು ಹೆಚ್ಚಾಗಲು ಪ್ರಮುಖ ಕಾರಣ. ಮಕ್ಕಳು ವಯಸ್ಸಾದ ತಮ್ಮ ತಂದೆ- ತಾಯಂದಿರನ್ನು ಕಡೆಗಣಿಸದೇ ಬಹಳ ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದರು. ಯೋಜನೆ ತಾಲೂಕು ಯೋಜನಾಧಿಕಾರಿ ಯಶವಂತ್ ಮಾತನಾಡಿದರು. ಈ ವೇಳೆ ಜಿ.ಪಂ ಮಾಜಿ ಸದಸ್ಯೆ ಶಾಂತಲಾ ರಾಮಕೃಷ್ಣೇಗೌಡ, ಪ್ರಗತಿ ಸೇವಾ ಟ್ರಸ್ಟ್ ಅಧ್ಯಕ್ಷ ರಾಗಿಮುದ್ದನಹಳ್ಳಿ ನಾಗೇಶ್, ಅಮ್ಮನ ಆಸರೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಪ್ರಭುಸ್ವಾಮಿ ಮಾತನಾಡಿದರು. ಟ್ರಸ್ಟ್ ಕಾರ್ಯದರ್ಶಿ ಪುಷ್ಪ, ಪತ್ರಕರ್ತ ಎನ್.ಕೃಷ್ಣೇಗೌಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜೆವಿಕೆ ಸಮನ್ವಯಾಧಿಕಾರಿ ತೇಜಸ್ವಿನಿ ಸೇರಿ ಧರ್ಮಸ್ಥಳ ಸಂಸ್ಥೆ ಅನೇಕ ಪದಾಧಿಕಾರಿಗಳು ಉಪಸ್ಥಿತರಿದ್ದರು.