ಹಾಲಿನ ಉತ್ಪಾದನೆ 6 ಲಕ್ಷ ಲೀಟರ್‌ಗೆ ಹೆಚ್ಚಿಸಿ: ಡಾ. ಎಂ.ಎನ್. ರಾಜೇಂದ್ರ ಕುಮಾರ್

KannadaprabhaNewsNetwork |  
Published : Jul 27, 2025, 12:03 AM IST
26ಸನ್ಮಾನ | Kannada Prabha

ಸಾರಾಂಶ

ಉಡುಪಿ ಜಿಲ್ಲೆಯ ಹೈನುಗಾರರ ಪರಿವಾರ ಒಕ್ಕೂಟದ ಆಶ್ರಯದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನಿರ್ದೇಶಕರಿಗೆ ಅಭಿನಂದನಾ - ಸಂವಾದ ಸಮಾರಂಭ ನಗರದ ಪುರಭವನದಲ್ಲಿ ನಡೆಯಿತು.

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ನಿರ್ದೇಶಕರಿಗೆ ಅಭಿನಂದನೆಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ಜಿಲ್ಲೆಯ ಹೈನುಗಾರರ ಪರಿವಾರ ಒಕ್ಕೂಟದ ಆಶ್ರಯದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನಿರ್ದೇಶಕರಿಗೆ ಅಭಿನಂದನಾ - ಸಂವಾದ ಸಮಾರಂಭ ನಗರದ ಪುರಭವನದಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಸಹಕಾರಿ ಮಾರಾಟ ಮಹಾಮಂಡಲ ಮತ್ತು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಹೈನುಗಾರರಿಗೆ ಹಾಲು ಉತ್ಪಾದನಾ ವೆಚ್ಚ ಹೆಚ್ಚಾಗುತ್ತಿರುವುದರಿಂದ ಅವಿಭಜಿತ ದ.ಕ. ಜಿಲ್ಲೆಯ ಹೈನುಗಾರರಿಗೆ ವಿಶೇಷ ಅನುದಾನ ಕೊಡಬೇಕೆಂದು ಸಹಕಾರಿ ಸಚಿವರಲ್ಲಿ ಮನವಿ ಮಾಡಲಾಗಿದೆ ಎಂದರು‌.ಅವಿಭಜಿತ ದ.ಕ. ಜಿಲ್ಲೆಯಲ್ಲಿ ಈ ವರ್ಷ 70 ಸಾವಿರ ಲೀ. ಹಾಲು ಉತ್ಪಾದನೆ ಹೆಚ್ಚಾಗಿದೆ. 4 ಲಕ್ಷ ಲೀ. ವರೆಗೆ ಹಾಲು ಉತ್ಪಾದನೆ ಆಗುತ್ತಿದೆ. ಇದು 6 ಲಕ್ಷ ಲೀ. ಗೆ ತಲುಪಬೇಕು. ಈ ಮೂಲಕ ದ.ಕ. ಹಾಲು ಉತ್ಪಾದಕರ ಒಕ್ಕೂಟ ಇನ್ನಷ್ಟು ಬಲಾಢ್ಯವಾಗಬೇಕು. ಆಗ ಸರ್ಕಾರದಿಂದ ಹೆಚ್ಚಿನ ಅನುದಾನ ಕೂಡ ಸಿಗುತ್ತದೆ ಎಂದು ಹೇಳಿದರು.ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷ ವಿಠಲ ಶೆಟ್ಟಿ ಶೇಡಿಕೊಡ್ಲು ಅಧ್ಯಕ್ಷತೆ ವಹಿಸಿದ್ದರು. ಒಕ್ಕೂಟದ ಮಾಜಿ ಅಧ್ಯಕ್ಷ ಜಗದೀಶ ಕಾರಂತ ವೇದಿಕೆಯಲ್ಲಿದ್ದರು.

ಒಕ್ಕೂಟದ ನೂತನ ಅಧ್ಯಕ್ಷ ರವಿರಾಜ ಹೆಗ್ಡೆ, ಉಪಾಧ್ಯಕ್ಷ ಉದಯ್ ಕೋಟ್ಯಾನ್, ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ, ಸುಚರಿತ ಶೆಟ್ಟಿ, ಮಂಜಯ್ಯ ಶೆಟ್ಟಿ, ಪ್ರಕಾಶ್ ಚಂದ್ರ ಶೆಟ್ಟಿ, ಸುಧಾಕರ್ ಶೆಟ್ಟಿ, ಹದ್ದೂರು ಮಮತಾ ಶೆಟ್ಟಿ, ಪ್ರಾಥಮಿಕ ಹಾಲು ಉತ್ಪಾದಕರ ನೌಕರರ ಜಿಲ್ಲಾ ಒಕ್ಕೂಟದ ಅಧ್ಯಕ್ಷೆ ಸುಲೇಖಾ ಶೆಟ್ಟಿ ಕೈಲ್ಕೆರೆ ಅವರನ್ನು ಸನ್ಮಾನಿಸಲಾಯಿತು.

PREV

Recommended Stories

ನವೆಂಬರ್‌-ಡಿಸೆಂಬರ್‌ನಲ್ಲಿ 5 ಪಾಲಿಕೆ ಚುನಾವಣೆ: ಡಿಸಿಎಂ
ಹಿಪ್ಪರಗಿ ಜಲಾಶಯಕ್ಕೆ ೧,೧೯,೨೦೦ ಕ್ಯುಸೆಕ್‌ ಒಳಹರಿವು