ಯಲಬುರ್ಗಾ-ಕುಕನೂರು ಅವಳಿ ತಾಲೂಕಾ ಮಟ್ಟದ ಪ್ರಾಥಮಿಕ, ಪ್ರೌಢಶಾಲೆಗಳ ಕ್ರೀಡಾಕೂಟ
ಕನ್ನಡಪ್ರಭ ವಾರ್ತೆ ಯಲಬುರ್ಗಾ
ತಾಲೂಕಿನ ಹಿರೇಮ್ಯಾಗೇರಿ ಗ್ರಾಮದಲ್ಲಿ ಮಂಗಳವಾರ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ನಡೆದ ಯಲಬುರ್ಗಾ-ಕುಕನೂರು ಅವಳಿ ತಾಲೂಕಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಕ್ರೀಡಾಕೂಟದಲ್ಲಿ ನಿರ್ಣಾಯಕರು ನೀಡುವ ತೀರ್ಪುಗಳನ್ನು ಕ್ರೀಡಾಪಟುಗಳು ಶ್ರದ್ಧೆಯಿಂದ ಸ್ವೀಕರಿಸಿ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.
ತಹಸೀಲ್ದಾರ ಬಸವರಾಜ ತೆನ್ನಳ್ಳಿ ಕ್ರೀಡಾಜ್ಯೋತಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳ ಮಾನಸಿಕ, ದೈಹಿಕ ಬೆಳವಣಿಗೆಗೆ ಕ್ರೀಡೆ ಅತ್ಯವಶ್ಯಕವಾಗಿದೆ ಎಂದರು.
ಗ್ರಾಪಂ ಅಧ್ಯಕ್ಷ ಕಳಕಪ್ಪ ವೀರಾಪೂರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಗ್ರಾಮದ ಮುಖಂಡರಾದ ಅಂದಪ್ಪ ಸುಬೇದಾರ, ರಾಯಪ್ಪ ಮಾಡ್ಲಗೇರಿ, ಗುರಪ್ಪ ಅಂಗಡಿ, ಶಂಕ್ರಪ್ಪ ಹೊಟ್ಟಿನ್, ಮಹಾಂತೇಶ ಗಾಣಿಗೇರ, ಉಭಯ ಶಾಲೆ ಎಸ್‌ಡಿಎಂಸಿ ಅಧ್ಯಕ್ಷರಾದ ನಿಂಗಪ್ಪ ದೇವರಗುಡಿ, ಬಸವರಾಜ ರಾಮಶೆಟ್ಟಿ, ಬಿಸಿಯೂಟ ಅಧಿಕಾರಿ ಟಿ.ಜೆ. ದಾನಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ವೈ.ಜಿ.ಪಾಟೀಲ, ಮಹೇಶ ಸಬರದ, ಎಸ್.ವ್ಹಿ. ಧರಣಾ, ಮಾರುತಿ ತಳವಾರ, ಅಶೋಕ ಮಾಲಿಪಾಟೀಲ, ವೀರಭದ್ರಪ್ಪ ಅಂಗಡಿ ಹಾಗೂ ಗ್ರಾಪಂ ಸರ್ವಸದಸ್ಯರು ಮತ್ತಿತರರು ಇದ್ದರು.