ಜಿಲ್ಲೆಯಲ್ಲಿ ಮಾದರ ಮಹಾಸಭಾದ ಸದಸ್ಯತ್ವ ಹೆಚ್ಚು ಮಾಡಿಸಿ: ಸಚಿವ ಕೆ.ಎಚ್.ಮುನಿಯಪ್ಪ

KannadaprabhaNewsNetwork |  
Published : May 25, 2026, 01:30 AM IST
24ಸಿಎಚ್‌ಎನ್53ಬೆಂಗಳೂರಿನಲ್ಲಿ  ಕರ್ನಾಟಕ ಮಾದರ ಮಹಾಸಭಾದ ಕಚೇರಿಯಲ್ಲಿ ಚಾಮರಾಜನಗರ ಜಿಲ್ಲೆ  ಮತ್ತು ಜಿಲ್ಲೆಯ ಎಲ್ಲ ತಾಲೂಕು ಸಮಿತಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶಪತ್ರ ವಿತರಿಸಿ ಮಾತನಾಡಿದರು. | Kannada Prabha

ಸಾರಾಂಶ

ಚಾಮರಾಜನಗರ ಜಿಲ್ಲೆಯ ಚಾಮರಾಜನಗರ, ಗುಂಡ್ಲುಪೇಟೆ, ಯಳಂದೂರು, ಹನೂರು ಹಾಗೂ ಕೊಳ್ಳೇಗಾಲ ತಾಲೂಕು ಸಮಿತಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಿಸಲಾಗಿದೆ. ನಿಮಗೆಲ್ಲ ಜವಾಬ್ದಾರಿ ನೀಡಲಾಗಿದೆ. ನೂತನ ಪದಾಧಿಕಾರಿಗಳು ಜಿಲ್ಲೆಯಲ್ಲಿ ಸಂಘಟನೆ ಬಲಪಡಿಸಿ, ಉತ್ತಮವಾಗಿ ಕೆಲಸ ನಿರ್ವಹಿಸುವ ಮೂಲಕ ಸದಸ್ಯತ್ವ ಹೆಚ್ಚು ಮಾಡಿ ಸಂಘಟನೆ ಸದೃಢಗೊಳಿಸಿ ಸಮುದಾಯದ ಏಳಿಗೆಗಾಗಿ ಶ್ರಮಿಸಬೇಕು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಕರ್ನಾಟಕ ಮಾದರ ಮಹಾಸಭಾಕ್ಕೆ ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚಿನ ಸದಸ್ಯತ್ವ ಮಾಡಿಸಿ ಸಂಘಟನೆ ಬಲಪಡಿಸಬೇಕು ಎಂದು ಮಾದರ ಮಹಾಸಭಾದ ಸಂಸ್ಥಾಪಕ, ರಾಜ್ಯ ಅಧ್ಯಕ್ಷರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ. ಎಚ್. ಮುನಿಯಪ್ಪ ಹೇಳಿದರು.

ಬೆಂಗಳೂರಿನಲ್ಲಿ ಕರ್ನಾಟಕ ಮಾದರ ಮಹಾಸಭಾದ ಕಚೇರಿಯಲ್ಲಿ ಚಾಮರಾಜನಗರ ಜಿಲ್ಲೆ ಮತ್ತು ಜಿಲ್ಲೆಯ ಎಲ್ಲ ತಾಲೂಕು ಸಮಿತಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶಪತ್ರ ವಿತರಿಸಿ ಮಾತನಾಡಿದರು.

ಚಾಮರಾಜನಗರ ಜಿಲ್ಲೆಯ ಚಾಮರಾಜನಗರ, ಗುಂಡ್ಲುಪೇಟೆ, ಯಳಂದೂರು, ಹನೂರು ಹಾಗೂ ಕೊಳ್ಳೇಗಾಲ ತಾಲೂಕು ಸಮಿತಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಿಸಲಾಗಿದೆ. ನಿಮಗೆಲ್ಲ ಜವಾಬ್ದಾರಿ ನೀಡಲಾಗಿದೆ. ನೂತನ ಪದಾಧಿಕಾರಿಗಳು ಜಿಲ್ಲೆಯಲ್ಲಿ ಸಂಘಟನೆ ಬಲಪಡಿಸಿ, ಉತ್ತಮವಾಗಿ ಕೆಲಸ ನಿರ್ವಹಿಸುವ ಮೂಲಕ ಸದಸ್ಯತ್ವ ಹೆಚ್ಚು ಮಾಡಿ ಸಂಘಟನೆ ಸದೃಢಗೊಳಿಸಿ ಸಮುದಾಯದ ಏಳಿಗೆಗಾಗಿ ಶ್ರಮಿಸಬೇಕು ಎಂದು ತಿಳಿಸಿದರು.

ಕರ್ನಾಟಕ ಮಾದಾರ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಪ್ಪ, ಜಿಲ್ಲಾಧ್ಯಕ್ಷ ಎಂ. ಶಿವಮೂರ್ತಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾನುಬಾಳಿನಲ್ಲಿ ಎರಡು ದಿನಗಳ ಕಾರ್‌ ರೇಸ್ ಸ್ಪರ್ಧೆ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಸೇವೆ ಮಾದರಿ ಕಾರ್ಯ