ಸಮಾಜ ಸೇವೆಯಲ್ಲಿ ಮಹಿಳೆಯರ ಪಾತ್ರ ಹೆಚ್ಚಲಿ: ಬಿ. ಶಿವಜ್ಯೋತಿ

KannadaprabhaNewsNetwork |  
Published : Mar 27, 2026, 02:15 AM IST
ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನಡೆದ ಬ್ಯಾಡಗಿ ಇನ್ನರ್ ವೀಲ್ ಕ್ಲಬ್‌ನ 5 ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಹಲವರನ್ನ ಸನ್ಮಾನಿಸಿ ಗೌರವಿಸಲಾಯಿತು.. | Kannada Prabha

ಸಾರಾಂಶ

ಮಹಿಳೆಯರು ಕೇವಲ ಅಡುಗೆ ಮನೆಗೆ ಸೀಮಿತವಾಗದೆ, ಸಮಾಜದ ಮುಖ್ಯ ವಾಹಿನಿಯಲ್ಲಿ ಸಕ್ರಿಯವಾಗಿ ಭಾಗವಹಿಸಿ ದೇಶದ ಅಭಿವೃದ್ಧಿಗೆ ಪೂರಕವಾಗುವ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕಿದೆ ಎಂದು ನವ ಚೈತನ್ಯ ಶಿಕ್ಷಣ ಸಂಸ್ಥೆಯ ಪ್ರಾಚಾರ್ಯೆ ಬಿ.ಶಿವಜ್ಯೋತಿ ಅಭಿಪ್ರಾಯಪಟ್ಟರು.

ಬ್ಯಾಡಗಿ: ಮಹಿಳೆಯರು ಕೇವಲ ಅಡುಗೆ ಮನೆಗೆ ಸೀಮಿತವಾಗದೆ, ಸಮಾಜದ ಮುಖ್ಯ ವಾಹಿನಿಯಲ್ಲಿ ಸಕ್ರಿಯವಾಗಿ ಭಾಗವಹಿಸಿ ದೇಶದ ಅಭಿವೃದ್ಧಿಗೆ ಪೂರಕವಾಗುವ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕಿದೆ ಎಂದು ನವ ಚೈತನ್ಯ ಶಿಕ್ಷಣ ಸಂಸ್ಥೆಯ ಪ್ರಾಚಾರ್ಯೆ ಬಿ.ಶಿವಜ್ಯೋತಿ ಅಭಿಪ್ರಾಯಪಟ್ಟರು. ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನಡೆದ ಬ್ಯಾಡಗಿ ಇನ್ನರ್ ವೀಲ್ ಕ್ಲಬ್‌ನ 5 ನೇ ವರ್ಷದ ಸಂ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ಸಮಾಜ ಸೇವೆಯತ್ತ ಮುಖ ಮಾಡುವ ಮೂಲಕ ಇಂತಹ ಸಂಘಟನೆಗಳ ಮೂಲಕ ಬಡ ಜನರ ಸೇವೆಯಲ್ಲಿ ತೊಡಗುತ್ತಿರುವುದು ಶ್ಲಾಘ ನೀಯ ಕಾರ್ಯವಾಗಿದೆ ಎಂದು ಹೇಳಿದರು. ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ಪ್ರತಿಭಾ ಮೇಲಗಿರಿ ಮಾತನಾಡಿ, ಕ್ಲಬ್ ಪಟ್ಟಣ ಹಾಗೂ ತಾಲೂಕು ಮಟ್ಟದಲ್ಲಿ ಶಿಕ್ಷಣ, ಆರೋಗ್ಯ, ಪರಿಸರ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಮಹತ್ವದ ಸೇವಾ ಕಾರ್ಯಗಳನ್ನು ನಡೆಸುತ್ತಿದೆ ಇದು ನಿರಂತರವಾಗಿ ಮುಂದುವರೆಯುತ್ತದೆ ಎಂದರು. ಕಾರ್ಯಕ್ರಮದಲ್ಲಿ ಸಮಾಜ ಸೇವೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಶಿಕ್ಷಕಿ ಸುಷ್ಮಾ ಉಪಾಸಿ, ಕಬಡ್ಡಿ ಕೋಚ್ ಮಂಜುಳಾ ಭಜಂತ್ರಿ, ಕೆಎಸ್‌ಆರ್‌ಟಿಸಿ ನಿರ್ವಾಹಕಿ ಪದ್ಮಾವತಿ, ಅಂಚೆ ಇಲಾಖೆ ಸಿಬ್ಬಂದಿ ನಾಗವೀಣಾ ಸಂಕಣ್ಣನವರ, ಕೆಇಬಿ ಮೀಟರ್ ರೀಡರ್, ಶೈಲಾ ಬನ್ನಿಮಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಕಾರ‍್ಯಕ್ರಮದಲ್ಲಿ ಕ್ಲಬ್ ಕಾರ್ಯದರ್ಶಿ ಲಕ್ಷ್ಮೀ ಉಪ್ಪಾರ ಪದಾಧಿಕಾರಿಗಳಾದ ಪುಷ್ಪಾ ಇಂಡಿಮಠ, ವಿಜಯಲಕ್ಷ್ಮಿ ಗೌಡರ, ಗೀತಾ ಎಲಿ, ಸಂಧ್ಯಾರಾಣಿ ದೇಶಪಾಂಡೆ, ಮಹೇಶ್ವರಿ ಪಾಸಾರದ, ಕವಿತಾ ಸೊಪ್ಪಿನಮಠ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಳಿ ಸಂರಕ್ಷಣೆ, ಕೃಷಿ ಉತ್ತೇಜನಕ್ಕೆ ಬೀಜ ಬ್ಯಾಂಕ್ ಸ್ಥಾಪನೆ: ಕಾಜಾ ಶ್ವಾರ್ಮ
ಒಳಮೀಸಲಾತಿ ಜಾರಿ ಬಳಿಕವೇ ನೇಮಕಾತಿಗೆ ಆಗ್ರಹಿಸಿ ರಕ್ತದಲ್ಲಿ ಮನವಿ