ಮತದಾನ ಪ್ರಮಾಣ ಹೆಚ್ಚಿಸಿ: ಸಿಇಒ ಶಿಂಧೆ

KannadaprabhaNewsNetwork |  
Published : Mar 12, 2024, 02:02 AM ISTUpdated : Mar 12, 2024, 02:03 AM IST
ಅಅಅ | Kannada Prabha

ಸಾರಾಂಶ

ಬೆಳಗಾವಿ: ಲೋಕಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವುದು, 2019ರ ಲೋಕಸಭಾ ಚುಣಾವಣೆಯಲ್ಲಿ ಕಡಿಮೆ ಮತದಾನದ ಮತಗಟ್ಟೆಗಳನ್ನು ಗುರುತಿಸಿ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಬೇಕು. ಅದಕ್ಕೆ ಕಾರಣಗಳನ್ನು ಹುಡುಕಿ ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರ ಚುನಾವಣಾಧಿಕಾರಿ ಆಗಿರುವ ಜಿಪಂ ಸಿಇಒ ರಾಹುಲ್ ಶಿಂಧೆ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಲೋಕಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವುದು, 2019ರ ಲೋಕಸಭಾ ಚುಣಾವಣೆಯಲ್ಲಿ ಕಡಿಮೆ ಮತದಾನದ ಮತಗಟ್ಟೆಗಳನ್ನು ಗುರುತಿಸಿ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಬೇಕು. ಅದಕ್ಕೆ ಕಾರಣಗಳನ್ನು ಹುಡುಕಿ ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರ ಚುನಾವಣಾಧಿಕಾರಿ ಆಗಿರುವ ಜಿಪಂ ಸಿಇಒ ರಾಹುಲ್ ಶಿಂಧೆ ತಿಳಿಸಿದರು.

ನಗರದ ಹಳೆ ಜಿಪಂ ಸಭಾಭವನದಲ್ಲಿ ಸೋಮವಾರ ಸಾರ್ವತ್ರಿಕ ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಪೂರ್ವ ತಯಾರಿ ಕುರಿತು ಜರುಗಿದ ಸಭೆಯಲ್ಲಿ ಅವರು ಮಾತನಾಡಿದರು. ಹಿರಿಯ ನಾಗರಿಕರು, ವಿಶೇಷಚೇತನರಿಗೆ ಆದ್ಯತೆ ಮೇಲೆ ಮತದಾನದ ಜಾಗೃತಿ ಮೂಡಿಸುವುದು. ಸ್ವೀಪ್ ಚಟುವಟಿಕೆಗಳನ್ನು ಕಾಟಾಚಾರಕ್ಕೆ ಮಾಡದೇ, ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ವಾರದ ಹಾಗೂ ತಿಂಗಳ ಯೋಜನೆ ಮಾಡಿಕೊಂಡು ಜಿಲ್ಲೆಯಾದ್ಯಂತ ಸ್ವೀಪ್ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.

ತಾಲೂಕುವಾರು ಹಮ್ಮಿಕೊಳ್ಳುವ ಸ್ವೀಪ್ ಚಟುವಟಿಕೆಗಳ ಕ್ರಿಯಾ ಯೋಜನೆಗಳನ್ನು ಎರಡು ದಿನದೊಳಗಾಗಿ ಸಲ್ಲಿಸಲು ತಿಳಿಸಿದರು. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛ ವಾಹಿನಿಯ ಧ್ವನಿವರ್ಧಕಗಳ ಮೂಲಕ ಪ್ರತಿದಿನ ಬೆಳಗ್ಗೆ ಮತದಾನದ ಜಾಗೃತಿ ಮೂಡಿಸಬೇಕು. 80, 90 ಹಾಗೂ 100 ವರ್ಷ ವಯಸ್ಸಿನ ಮೇಲಿನ ಮತದಾರರನ್ನು ಗುರುತಿಸಬೇಕು. ಪೋಸ್ಟಲ್ ಬ್ಯಾಲೆಟ್‌ಗೆ ಸಂಬಂಧಿಸಿದಂತೆ ಮತಗಟ್ಟೆಗಳಿಗೆ ಬಂದು ಮತದಾನ ಮಾಡಲು ಆಗದೇ ಇರುವ 85 ವರ್ಷ ಮೇಲ್ಪಟ್ಟ ಮತದಾರರನ್ನು ಖುದ್ದಾಗಿ ಅಧಿಕಾರಿಗಳು ಭೇಟಿ ನೀಡಿ ಪಟ್ಟಿ ಸಿದ್ಧಪಡಿಸಬೇಕು. ಎಎಂಎಫ್‌ಗೆ ಸಂಬಂಧಿಸಿದಂತೆ ಸಣ್ಣ ಪುಟ್ಟ ರಿಪೇರಿಗಳಿದ್ದು, ಅವುಗಳನ್ನು ಎರಡು ದಿನದೊಳಗಾಗಿ ಪೂರ್ಣಗೊಳಿಸುವುದು. ಕ್ರಿಟಿಕಲ್ ಮತ್ತು ವಲ್ನರೇಬಲ್ ಮತಗಟ್ಟೆಗಳಿಗೆ ಭೇಟಿ ನೀಡಬೇಕು. ತಾಲೂಕುವಾರು ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಸ್ಥಳ ಪರಿಶೀಲನೆ ನಡೆಸಿ, ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಲೋಕೇಶ ಪಿ.ಎನ್. ಸ್ಮಾರ್ಟ್‌ ಸಿ.ಟಿ ಎಂಡಿ ಸೋಮಲಿಂಗ ಗೆಣ್ಣೂರ, ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಸತ್ಯನಾರಾಯಣ ಭಟ್, ಜಿಪಂ ಉಪಕಾರ್ಯದರ್ಶಿಗಳಾದ ರೇಖಾ ಡೊಳ್ಳಿನವರ, ಬಸವರಾಜ ಅಡವಿಮಠ, ಯೋಜನಾ ನಿರ್ದೇಶಕ ಗಂಗಾಧರ ದಿವಟರ್, ಡಿಯುಡಿಸಿ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಉಪ ವಿಭಾಗಾಧಿಕಾರಿ ಚಿಕ್ಕೋಡಿ, ಬೆಳಗಾವಿ, ತಹಶೀಲ್ದಾರರು ಚಿಕ್ಕೋಡಿ, ರಾಯಬಾಗ, ಅಥಣಿ, ನಿಪ್ಪಾಣಿ, ಕಾಗವಾಡ ಹಾಗೂ ಹುಕ್ಕೇರಿ ತಾಲ್ಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ