ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನಗರದ ಎಂಜಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಢಳಿತ, ಜಿಲ್ಲಾ ಪಂಚಾಯತ್, ಪೋಲಿಸ್ ಇಲಾಖೆ. ಆರೋಗ್ಯ ಇಲಾಖೆ. ಜಿಲ್ಲಾ ವಕೀಲರ ಸಂಘ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಎನ್ ಎಸ್ ಎಸ್ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ "ವಿಶ್ವ ತಂಬಾಕು ನಿಷೇಧ ದಿನಾಚರಣೆ, ಹಾಗೂ ಸೈಬರ್ ಕ್ರೈಂ ಕಾನೂನು ಅರಿವು ನೆರವು ಕಾರ್ಯಕ್ರಮ'''''''' ಉದ್ಘಾಟಿಸಿ ಮಾತನಾಡಿದರು.
ತಂಬಾಕು ಸೇವನೆಯಿಂದ ಸಾವಿನ ಸಂಖ್ಯೆಯು ಗಣನೀಯವಾಗಿ ಹೆಚ್ಚುತ್ತಲೇ ಇದೆ. ಸಿಗರೇಟ್ ಸೇವನೆ ಮೂಲಕ ತಮಗೆ ಕಾಯಿಲೆಯನ್ನು ತಂದುಕೊಳ್ಳುವುದಲ್ಲದೆ, ತಮ್ಮ ಅಕ್ಕಪಕ್ಕದಲ್ಲಿರುವವರಿಗೂ ಕಾಯಿಲೆಗಳನ್ನು ಬರಿಸುತ್ತಾರೆ. ಹೀಗಾಗಿ ಬಹಳಷ್ಟು ಜನ ಸಾಯುತ್ತಿದ್ದಾರೆ.ಇದನ್ನು ತಡೆಯುವ ದಿನವನ್ನು ವಿಶ್ವ ತಂಬಾಕು ನಿಷೇಧ ದಿನವನ್ನಾಗಿ ಆಚರಿಸುತ್ತಾರೆಂದರು.ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಡಿ.ಎಲ್.ನಾಗೇಶ್ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮತ್ತು ಕೊಟ್ಪಾ ಕಾಯ್ದೆಯ ಉಲ್ಲಂಘನೆ ಮಾಡುವವರ ವಿರುದ್ಧ ದೂರು ದಾಖಲಿಸಲು ಸ್ಟಾಪ್ ಟ್ಯೊಬ್ಯಾಕೊ ಮೊಬೈಲ್ ಆ್ಯಪ್ ಅನ್ನು ಸಾರ್ವಜನಿಕರು ಡೌನ್‌ಲೋಡ್ ಮಾಡಿಕೊಂಡು ಅದರಲ್ಲಿದೂರುಗಳನ್ನು ದಾಖಲಿಸಬಹುದಾಗಿದೆ ಎಂದರು.
ಜೆ.ಎಂ.ಎಫ್.ಸಿ ಮತ್ತು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಮೊಹಮ್ಮದ್ ರೋಷನ್ ಶಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಭ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್, ಜಿಲ್ಲಾ ಅಪರ ಪೋಲಿಸ್ ವರಿಷ್ಠಾಧಿಕಾರಿ ರಾಜಾ ಇಮಾಂಖಾಸೀಂ, ಪ್ರಾಂಶುಪಾಲ.ಡಾ.ಮುನಿರಾಜು, ವಕೀಲರ ಸಂಘದ ಜಿಲ್ಲಾಧ್ಯಕ್ಷ ಆರ್.ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಮುರುಳಿ ಮೋಹನ್ ಮತ್ತಿತರರು ಇದ್ದರು.