ಹೆಚ್ಚಿದ ಕಾಡಾನೆ ಹಾವಳಿ ಕಾರ್ಮಿಕರಲ್ಲಿ ಆತಂಕ : ಇಲಾಖೆ ವಿರುದ್ಧ ಆಕ್ರೋಶ

KannadaprabhaNewsNetwork |  
Published : May 21, 2026, 02:45 AM IST
ಆಕ್ರೋಶ | Kannada Prabha

ಸಾರಾಂಶ

ಸಿದ್ದಾಪುರ ಸಮೀಪದ ಪಳ್ಳಕೆರೆ ವ್ಯಾಪ್ತಿಯಲ್ಲಿ ಬುಧವಾರ ಬೆಳ್ಳಂ ಬೆಳಗ್ಗೆ ಬೃಹತ್ ಒಂಟಿ ಸಲಗವೊಂದು ಪ್ರತ್ಯಕ್ಷವಾಗುವ ಮೂಲಕ ಕಾರ್ಮಿಕರ ಆತಂಕಕ್ಕೆ ಕಾರಣವಾಗಿತ್ತು.

ಮಡಿಕೇರಿ: ಸಿದ್ದಾಪುರ ಸಮೀಪದ ಪಳ್ಳಕೆರೆ ವ್ಯಾಪ್ತಿಯಲ್ಲಿ ಬುಧವಾರ ಬೆಳ್ಳಂ ಬೆಳಗ್ಗೆ ಬೃಹತ್ ಒಂಟಿ ಸಲಗವೊಂದು ಪ್ರತ್ಯಕ್ಷವಾಗುವ ಮೂಲಕ ಕಾರ್ಮಿಕರ ಆತಂಕಕ್ಕೆ ಕಾರಣವಾಗಿತ್ತು. ಅದರ ಬೆನ್ನಲ್ಲೇ ಅರೆಕಾಡು ವ್ಯಾಪ್ತಿಯಿಂದ ಮತ್ತೆರಡು ಆನೆಗಳು ಕಾವೇರಿ ನದಿ ದಾಟಿ ಬಂದಿದ್ದು, ಸಾರ್ವಜನಿಕರಲ್ಲಿ ಭೀತಿ ಮತ್ತಷ್ಟು ಹೆಚ್ಚಿಸಿದೆ.

ಕಳೆದ ಕೆಲ ದಿನಗಳಿಂದ ಸುಮಾರು 25ಕ್ಕೂ ಹೆಚ್ಚಿನ ಆನೆಗಳು ಇಲ್ಲಿನ ಕಾಫಿ ತೋಟದಲ್ಲಿ ಪ್ರತ್ಯಕ್ಷವಾಗಿದ್ದು, ಸ್ಥಳೀಯರು ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.ದಿನೇ ದಿನೇ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿರುವುದರ ಬಗ್ಗೆ ಮಾಹಿತಿ ಇದ್ದರೂ ಕೂಡ ಇಲಾಖೆ ಯಾವುದಕ್ಕೂ ಕ್ಯಾರೆ ಎನ್ನದೇ ಕೈಕಟ್ಟಿಕುಳಿತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು ಕೂಡಲೇ ಕಾಡಾನೆಗಳನ್ನು ಅರಣ್ಯಕ್ಕಟಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

----------------------------------------------------------

ದುಬಾರೆ ಸಾಕಾನೆ ಶಿಬಿರಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ ಮುಂದುವರಿಕೆ

ಕುಶಾಲನಗರ: ರಾಜ್ಯ ಅರಣ್ಯ ಸಚಿವರು ಮತ್ತು ಅರಣ್ಯ ಇಲಾಖೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಆದೇಶದಂತೆ ದುಬಾರೆ ಸಾಕಾನೆ ಶಿಬಿರಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಮುಂದುವರಿಸಲಾಗಿದೆ. ಆನೆ ಶಿಬಿರದಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್ಓಪಿ) ರೂಪಿಸುವ ತನಕ ನಿರ್ಬಂಧ ಮುಂದುವರೆಯಲಿದೆ. ಹಾರಂಗಿ ವೃಕ್ಷೋದ್ಯಾನದಲ್ಲಿ ಉದ್ಯಾನ ಮಾತ್ರ ಪ್ರವಾಸಿಗರಿಗೆ ತೆರೆದಿದ್ದು ಉಳಿದಂತೆ ಆನೆ ಶಿಬಿರ ಭೇಟಿ ನಿರ್ಬಂಧಿಸಲಾಗಿದೆ ಎಂದು ಕುಶಾಲನಗರ ಅರಣ್ಯ ವಲಯ ಅಧಿಕಾರಿ ರಕ್ಷಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಕಲಿ ಜಾತಿ ಪ್ರಮಾಣಪತ್ರ ಪ್ರಕರಣ: ಪ್ರತಿಭಟನೆ
ಆಟ್ ಪಾಟ್ ಶಿಬಿರ ಕೊಡವ ಸಂಸ್ಕೃತಿ ಪ್ರತೀಕ: ಮಹೇಶ್ ನಾಚಯ್ಯ