ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಕೆಸ್ತೂರು ಗ್ರಾಮದ ಶ್ರೀವಿವೇಕಾನಂದ ಶಾಲೆಯಲ್ಲಿ ನಡೆದ ವಿವೇಕ ಸಂಭ್ರಮ ಶಾಲಾ ವಾರ್ಷಿಕೋತ್ಸವದಲ್ಲಿ ಮಾತನಾಡಿ, ವಿದ್ಯೆ ಯಾರು ಕದಿಯಲಾಗದ ಆಸ್ತಿ. ಇದಕ್ಕೆ ಯಾವುದು ಸರಿಸಾಟಿಯಲ್ಲ ಎಂಬುವುದನ್ನು ತಿಳಿದು ವಿದ್ಯಾರ್ಥಿಗಳು ಕಠಿಣ ಪರಿಶ್ರಮಪಟ್ಟು ವ್ಯಾಸಂಗ ಮಾಡಿ ಉನ್ನತ ಸ್ಥಾನಗಳನ್ನು ಗಳಿಸಿ ರಾಷ್ಟ್ರ ಮತ್ತು ಅಂತಾರಾಷ್ಟ್ರಿಯ ಮಟ್ಟದಲ್ಲಿ ಸಾಧನೆ ಮಾಡಬೇಕೆಂದು ತಿಳಿಸಿದರು.
ಗ್ರಾಮಾಂತರ ಪ್ರದೇಶದಲ್ಲಿ ಸಿ.ನಾಗೇಗೌಡ ಶೋಭಾ ದಂಪತಿ ಶಿಕ್ಷಣ ಸಂಸ್ಥೆ ಆರಂಭಿಸಿ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಜತೆಗೆ ಮಾನವೀಯ ಮೌಲ್ಯ ಕಲಿಸುತ್ತಿರುವುದು ಪ್ರಶಂಸನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ನನಗೆ ಪೋಲಿಯೋದಿಂದಾಗಿ ಬಾಲ್ಯದಲ್ಲೇ ಕೈ-ಕಾಲುಗಳನ್ನು ಕಳೆದುಕೊಂಡರೂ, ಅಚಲ ಆತ್ಮವಿಶ್ವಾಸ ಹಾಗೂ ನಿಮ್ಮೆಲ್ಲರ ಸಹಕಾರದಿಂದ 2024ರ ಸಾಲಿನಲ್ಲಿ ದೇಶದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ಭಾರತ ಸರ್ಕಾರ ನೀಡಿ ಗೌರವಿಸಿದೆ. ಇದಕ್ಕೆ ನನ್ನೋಳಗಿನ ಛಲ, ಶಿಸ್ತು ಮತ್ತು ಸಂಯಮವನ್ನು ಮೈಗೂಡಿಸಿಕೊಂಡಿರುವುದಕ್ಕೆ ಈ ಸಾಧನೆ ಮಾಡುವುದಕ್ಕೆ ಸಾಧ್ಯವಾಯಿತು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಧನಂಜಯ ಮಾತನಾಡಿದರು. ಕ್ರೀಡೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ಗಣ್ಯರು ಬಹುಮಾನ ವಿತರಿಸಲಾಯಿತು. ಸಂಸ್ಥೆ ಅಧ್ಯಕ್ಷ ಸಿ.ನಾಗೇಗೌಡ, ಕಾರ್ಯದರ್ಶಿ ಎ.ಆರ್.ಶೋಭಾ, ಆರಕ್ಷಕ ಉಪ ನಿರೀಕ್ಷಕ ಶ್ರವಣ್‌ಎಸ್.ದಾಸರೆಡ್ಡಿ, ಇಸಿಒ ರಮೇಶ್, ಸಿಆರ್‌ಪಿ ಮಹದೇವು, ಎಸ್‌ಎಸ್‌ಐ ರಾಜು, ಯೋಗಣ್ಣ, ಶಾಲೆಯ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಇದ್ದರು.