ದೊಡ್ಡಬಳ್ಳಾಪುರ: ಕುಟುಂಬ ವ್ಯವಸ್ಥೆಯಲ್ಲಿ ಮಕ್ಕಳು ಸಂಸ್ಕಾರ ಕಲಿತರೆ, ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಲು ಸಾಧ್ಯ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳನಾಥ ಸ್ವಾಮೀಜಿ ಹೇಳಿದರು.
ಕರ್ನಾಟಕ ತೆಂಗು ನಾರಿನ ಮಂಡಳಿಯ ಅಧ್ಯಕ್ಷ ವೆಂಕಟೇಶ್‌ಬಾಬು ಮಾತನಾಡಿ, ಹಿಂದಿನ ಕಾಲದ ಗುರುಕುಲ ಪದ್ಧತಿಯಲ್ಲಿ ಶಿಕ್ಷಣದಲ್ಲಿ ಯಾವುದೇ ವ್ಯಾಪಾರಿಗಳ ದೃಷ್ಟಿ ಇರಲಿಲ್ಲ. ಅವರ ಬದುಕನ್ನು ಕಟ್ಟಿಕೊಳ್ಳಲು ಬೇಕಾದ ಸಾಮರ್ಥ್ಯವನ್ನು ಹೆಚ್ಚಿಸಲು ಶಿಕ್ಷಣದ ಮೂಲಕ ತಲುಪಿಸುವ ಕೆಲಸ ಮಾಡುತ್ತಿದ್ದರು. ವಿದ್ಯಾರ್ಥಿಗಳು ಆಧುನಿಕತೆಗೆ ತಕ್ಕಂತೆ ತಮ್ಮ ಶಿಕ್ಷಣದ ಜತೆ ಸ್ಪರ್ಧಾತ್ಮಕ ಚಟುವಟಿಕೆಗಳು ಆರೋಗ್ಯಕರ ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದರು.
ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಮಾತನಾಡಿ, ಇಂತಹ ಮಾತೃ ಭೋಜನ ಕಾರ್ಯಕ್ರಮಗಳಲ್ಲಿ ಎಲ್ಲಾ ವಿದ್ಯಾರ್ಥಿಗಳ ಪೋಷಕರು ಒಂದೆಡೆ ಸೇರಿ ಒಂದು ಕುಟುಂಬವೇ ನಿರ್ಮಾಣವಾಗುವುದು ಸಂತೋಷ ಸಂಗತಿ. ಇದನ್ನು ಎಲ್ಲಾ ಶಾಲಾ ಕಾಲೇಜುಗಳಲ್ಲಿ ಆಯೋಜನೆ ಮಾಡಬೇಕು ಎಂದರು.ನಂತರ ಮಕ್ಕಳಿಗೆ ತಾಯಂದಿರು ತಂದಿದ್ದ ಸಿಹಿ ತಿಂಡಿ ತಿನ್ನಿಸಿದರು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಹಾಡೋನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಎಚ್ ಎ ನಾಗರಾಜ್, ಬಿಜಿಎಸ್ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಡಾ. . ಶಿವರಾಮರೆಡ್ಡಿ, ಮುಖ್ಯ ಶಿಕ್ಷಕ ಎಚ್.ಎಲ್.ವಿಜಯಕುಮಾರ್ ಉಪಸ್ಥಿತರಿದ್ದರು.
1ಕೆಡಿಬಿಪಿ2-ದೊಡ್ಡಬಳ್ಳಾಪುರ ತಾಲೂಕಿನ ಮೆಳೇಕೋಟೆ ಕ್ರಾಸ್‌ನಲ್ಲಿರುವ ಸ್ವಾಮೀಜಿ ಶಾಲೆಯಲ್ಲಿ ಮಾತೃಭೋಜನ ಕಾರ್ಯಕ್ರಮದಲ್ಲಿ ಮಂಗಳಾನಂದನಾಥ ಸ್ವಾಮೀಜಿ ಮಾತನಾಡಿದರು.