4ನೇ ದಿನಕ್ಕೆ ಗ್ರಾಪಂ ನೌಕರರ ಅನಿರ್ದಿಷ್ಟಾವಧಿ ಧರಣಿ

KannadaprabhaNewsNetwork |  
Published : Oct 11, 2024, 11:45 PM IST
10ಕೆಆರ್ ಎಂಎನ್ 1.ಜೆಪಿಜಿರಾಮನಗರ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ಪದಾಧಿಕಾರಿಗಳು ಭಾಗವಹಿಸಿರುವುದು. | Kannada Prabha

ಸಾರಾಂಶ

ರಾಮನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಮತ್ತು ನೌಕರರ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ಪದಾಧಿಕಾರಿಗಳು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ರಾಮನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಮತ್ತು ನೌಕರರ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ಪದಾಧಿಕಾರಿಗಳು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಯ ಪಿಡಿಒಗಳು, ದ್ವಿತೀಯ ದರ್ಜೆ ಸಹಾಯಕರು, ಡೇಟಾ ಎಂಟ್ರಿ ಅಪರೇಟರ್ಸ್‌ಗಳು, ಕರವಸೂಲಿಗಾರರು, ನೀರಘಂಟಿಗಳು, ಸ್ವಚ್ಛತಾಗಾರರು ತಮ್ಮ ಕೆಲಸ ಕಾರ್ಯ ಸ್ಥಗಿತಗೊಳಿಸಿ ಭಾಗವಹಿಸಿದ್ದರು.

ಈ ವೇಳೆ ಧರಣಿನಿರತರನ್ನು ಉದ್ದೇಶಿಸಿ ಮಾತನಾಡಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಬೆಟ್ಟಸ್ವಾಮಿಗೌಡ ಮಾತನಾಡಿ, ಹತ್ತಾರು ಬಾರಿ ಮನವಿ ಕೊಟ್ಟರು ನಮ್ಮ ಬೇಡಿಕೆಗಳು ಈಡೇರುತ್ತಿಲ್ಲ.

ಈಗ ಗ್ರಾಪಂ ನೌಕಕರಿಂದ ಹಿಡಿದು ಪತ್ರಾಂಕಿತರು ಶಾಂತಿಯುತ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಸರ್ಕಾರ ಈಗಲೂ ಬೇಡಿಕೆಗಳನ್ನು ಈಡೇರಿಸದಿದ್ದರೆ ಪ್ರತಿಭಟನೆ ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಗ್ರಾಪಂ ಅಧಿಕಾರಿಗಳು ಹಾಗೂ ಸಿಬ್ಬಂದಿ ಗ್ರಾಮಗಳಲ್ಲಿ ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಮೂಲ ಸೌಕರ್ಯಕ್ಕೆ ತೊಂದರೆ ಆಗದಂತೆ ಸೇವೆ ಸಲ್ಲಿಸಿ ನ್ಯಾಯಯುತವಾಗಿ ಹೋರಾಟ ಮಾಡುತ್ತಿದ್ದೇವೆ. ರಾಜ್ಯಸಂಘ ಹೋರಾಟ ಮುಂದುವರೆಸಲು ಕರೆ ನೀಡಿದರೆ ಮುಂದುವರೆಸುವುದು ಅನಿವಾರ್ಯ ಆಗಲಿದೆ. ಪ್ರತಿಭಟನೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಪಂಚಾಯಿತಿಗಳಲ್ಲಿ ಹತ್ತಾರು ವರ್ಷಗಳಿಂದ ಸೇವೆ ಸಲ್ಲಿಸಿದವರು ಹಾಗೂ ಹೊಸದಾಗಿ ಸೇರುವವರಿಗೆ ಒಂದೇ ವೇತನ ನೀಡಲಾಗುತ್ತಿದೆ. ಸಿಬ್ಬಂದಿಗಳಿಗೆ ಸೇವಾ ಹಿರಿತನದ ಆಧಾರದ ಮೇಲೆ ವೇತನ ಶ್ರೇಣಿ ನಿಗದಿ ಪಡಿಸಬೇಕು. ಜೊತೆಗೆ ನಮ್ಮೆಲ್ಲ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಬೆಟ್ಟಸ್ವಾಮಿಗೌಡ ಆಗ್ರಹಿಸಿದರು.

ಮಾಗಡಿ ತಾಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕ ಪುರುಷೋತ್ತಮ್ ಮಾತನಾಡಿ, ಸಿಬ್ಬಂದಿ ಮಾದರಿಯಲ್ಲಿ ಬೀದಿ ದೀಪ ನಿರ್ವಹಣೆ ಮಾಡುವವರಿಗೆ ಗ್ರಾಪಂ ನಿಧಿಯಿಂದ ವೇತನ ಪಾವತಿ ಮಾಡಲಾಗುತ್ತಿದೆ. ಟೆಂಡರ್ ನೀಡಿ ಕೆಲಸ ಮಾಡಲು ಆಗದು. ಆ ಹುದ್ದೆ ಸೃಜನೆ ಮಾಡಿಕೊಡಬೇಕು. 20ತಿಂಗಳ ವೇತನ ಕ್ಕಿಂತಲೂ ಹೆಚ್ಚಿನ ನಿವೃತ್ತಿ ಉಪಧನ ಕೊಡಬೇಕು ಎಂದು ಒತ್ತಾಯಿಸಿದರು.

ಪಿಡಿಒಗಳ ಬೇಡಿಕೆಗಳೇನು:

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಯನ್ನು ಗೆಜೆಟೆಡ್ ಗ್ರೂಪ್ ಬಿ ದರ್ಜೆಗೆ ಉನ್ನತೀಕರಿಸಬೇಕು. ಜೇಷ್ಠತಾ ಪಟ್ಟಿಯ್ನು ಕೂಡಲೇ ಅಂತಿಮಗೊಳಿಸಿ ಬಡ್ತಿ ನೀಡಲು ಕ್ರಮಕೈಗೊಳ್ಳಬೇಕು. ಕುಂದುಕೊರತೆ ಪ್ರಾಧಿಕಾರವನ್ನು ಪೊಲೀಸ್ ಇಲಾಖೆಯ ಮಾದರಿಯಲ್ಲಿ ಸದೃಢಗೊಳಿಸಬೇಕು. ಮತ್ತು ತಜ್ಞರ ಸಮಿತಿ ನೇಮಿಸಬೇಕು. ಜತೆಗೆ ಏಕ ರೂಪದಲ್ಲಿ ಆಡಿಟ್ ಪದ್ಧತಿಯಲ್ಲಿ ಜಾರಿಗೊಳಿಸಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇತರೆ ಇಲಾಖೆಯಲ್ಲಿರುವ ಸಮಾನಾಂತರ ಹುದ್ದೆಗಳಿಗೆ ನಿಯೋಜನೆ ಮೇಲೆ ಹೋಗಲು ಒಟ್ಟು ಮಂಜೂರಾದ ಹುದ್ದೆಗಳಲ್ಲಿ 25ರಷ್ಟು ಹುದ್ದೆಗಳಿಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿದರು.

ಪಂಚಾಯಿತಿ ನೌಕರರ ಒತ್ತಾಯ:

ಕರವಸೂಲಿಗಾರು, ಕ್ಲರ್ಕ್ ಡಾಟಾ ಎಂಟ್ರಿ ಅಪರೇಟರ್, ನೀರಗಂಟಿ, ಜವಾನರು, ಸ್ವಚ್ಛತಾಗಾರರ ವೃಂದಕ್ಕೆ ಗ್ರಾಮ ಪಂಚಾಯಿತಿ ನೌಕರಿಗೆ ಕಾರ್ಮಿಕ ಇಲಾಖೆ ವೇತನವನ್ನು ಹೊರತುಪಡಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ವೇತನ ನಿಗದಿಪಡಿಸಿ ನೌಕರರ ಖಾತೆಗಳಿಗೆ ಜಮಾ ಮಾಡಬೇಕು. ಇಎಸ್ಐ ಮತ್ತು ಪಿಎಫ್ ಜಾರಿ ಮಾಡಬೇಕು. ಆರೋಗ್ಯ ವಿಮೆ 50ಸಾವಿರ ಬದಲಿಗೆ 5 ಲಕ್ಷ ಆರೋಗ್ಯ ವಿಮೆಯನ್ನು ಜಾರಿ ಮಾಡಬೇಕು.ಪ್ರತಿಭಟನೆಯಲ್ಲಿ ರಾಜು, ಹನುಮಂತರಾಜು, ಕೆ.ಸಿ.ರಘು, ಮಹೇಶ್ ,ನರಸಿಂಹಮೂರ್ತಿ, ನಾಗರಾಜು, ಪ್ರದೀಪ್ , ಶೋಭಾ, ಭಾಗ್ಯಲಕ್ಷ್ಮಮ್ಮ, ರಾಜೇಗೌಡ, ಲೋಕೇಶ್ , ಸವಿತಾ, ಜಯಶಂಕರ್ , ಸುರೇಶ್ , ರಾಜೇಶ್ , ಕೃಷ್ಣಮೂರ್ತಿ, ಜಯಲಿಂಗು, ಖಮ್ರುದ್ದೀನ್ ಪಾಷ, ಪ್ರಸಾದ್ , ದೇವರಾಜು, ರೇಣುಕಪ್ಪ, ವೈರಮುಡಿ ಮತ್ತಿತರರು ಭಾಗವಹಿಸಿದ್ದರು.

ಬಾಕ್ಸ್‌..............

ಕಾರ್ಯದರ್ಶಿಗಳ ಬೇಡಿಕೆಗಳೇನು:

ವೃಂದದ ಜೇಷ್ಠತಾ ಪಟ್ಟಿಯನ್ನು ತುರ್ತಾಗಿ ಪ್ರಕಟಣೆ ಮಾಡಿ ಪಿಡಿಒ ವೃಂದಕ್ಕೆ ಮುಂಬಡ್ತಿ ನೀಡಬೇಕು. 7 ವರ್ಷದಿಂದ ಒಂದೇ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರನ್ನು ಜಿಲ್ಲೆಯ ಬೇರೆ ತಾಲೂಕಿಗೆ ವರ್ಗಾಯಿಸುವ ಅಧಿಸೂಚನೆಯನ್ನು ಹಿಂಪಡೆಯಬೇಕು.

ಗ್ರೇಡ್-2 ಹುದ್ದೆಯಿಂದ ಗ್ರೇಡ್-1 ಕಾರ್ಯದರ್ಶಿಗಳ ಹುದ್ದೆಗೆ ಕಳೆದ ಹಲವು ವರ್ಷಗಳಿಂದ ಮುಂಬಡ್ತಿ ಇಲ್ಲ. ಜತೆಗೆ, ನೇರ ನೇಮಕಾತಿ ಕೋಟಾದಡಿಯಲ್ಲಿ ಒಂದು ಬಾರಿ ಏಕ ಕಾಲಕಾಲದಲ್ಲಿ ಬಡ್ತಿ ನೀಡಬೇಕು. ರಾಜ್ಯ ಮಟ್ಟದ ಜೇಷ್ಠತಾ ಪಟ್ಟಿಯನ್ನು ಕೈಬಿಟ್ಟು ಜಿಲ್ಲಾ ಮಟ್ಟ ಜೇಷ್ಠತಾ ಪಟ್ಟಿಂನ್ನು ಮಾಡಬೇಕು. ಗ್ರೇಡ್-1 ಕಾರ್ಯದರ್ಶಿಗೆ ಹುದ್ದೆಎ ಬಡ್ತಿ ಶೇ.33ರಷ್ಟಿದ್ದು ಅದನ್ನು ಶೇ.80ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಬಾಕ್ಸ್‌...............

ದ್ವಿತೀಯ ದರ್ಜೆ ಸಹಾಯಕರ ಬೇಡಿಕೆಗಳು:

ಗ್ರೇಡ್-2 ಗ್ರಾಪಂಗಳಿಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆ ಸೃಜಿಸಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಗ್ರೇಡ್ -1 ಗ್ರಾಪಂಗಳಿಗೆ ಪ್ರಥಮ ದರ್ಜೆ ಲೆಕ್ಕ ಸಹಾಯಕ ಹುದ್ದೆಯನ್ನು ಸೃಷ್ಟಿಸಿ ಮುಂಬಡ್ತಿ ನೀಡಬೇಕು. ಕಳೆದ 10 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಒಂದೇ ಬಾರಿಗೆ ಶೇ.100ರಷ್ಟು ಬಡ್ತಿ ನೀಡಿ ಗ್ರೇಡ್- ಕಾರ್ಯದರ್ಶಿ ಹುದ್ದೆಗೆ ಪರಿಗಣಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

10ಕೆಆರ್ ಎಂಎನ್ 1.ಜೆಪಿಜಿ

ರಾಮನಗರ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ಪದಾಧಿಕಾರಿಗಳು ಭಾಗವಹಿಸಿರುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂಬಾಕು ದರ ಕುಸಿತ ಪ್ರತಿಭಟನೆ
ಕಾಡಾನೆ ದಾಳಿಗೆ ಬಹಿರ್ದೆಸೆಗೆ ತೆರಳಿದ್ದ ರೈತ ಸಾವು