ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿ ಆರಂಭ

KannadaprabhaNewsNetwork |  
Published : Dec 13, 2023, 01:00 AM IST
ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ನೇತೃತ್ವದಲ್ಲಿ ಬಳ್ಳಾರಿಯ ಸರಳಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎದುರು ಅತಿಥಿ ಉಪನ್ಯಾಸಕರು, ತರಗತಿ ಬಹಿಷ್ಕರಿಸಿ ವೇತನ ರಹಿತ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.  | Kannada Prabha

ಸಾರಾಂಶ

ಬೆಳಗಾವಿ ಅಧಿವೇಶನದಲ್ಲಿ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬ ನಿರೀಕ್ಷೆಯಲ್ಲಿದ್ದೆವು. ಆದರೆ, ಈವರೆಗೆ ಯಾವುದೇ ಕ್ರಮ ವಹಿಸಿಲ್ಲ. ಹೀಗಾಗಿ ಈ ಹಿಂದೆ ಕೈಗೊಂಡಿದ್ದ ಅನಿದಿಷ್ಟಾವಧಿ ಧರಣಿಯನ್ನು ಮುಂದುವರಿಸಿದ್ದೇವೆ. ಸರ್ಕಾರ ಉಪನ್ಯಾಸಕರ ಹಿತ ಕಾಯದೇ ಹೋದರೆ ಹೋರಾಟವನ್ನು ತೀವ್ರಗೊಳಿಸುತ್ತೇವೆ

ಕನ್ನಡಪ್ರಭ ವಾರ್ತೆ ಬಳ್ಳಾರಿ

ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ನೇತೃತ್ವದಲ್ಲಿ ಇಲ್ಲಿನ ಸರಳಾದೇವಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ಎದುರು ಅತಿಥಿ ಉಪನ್ಯಾಸಕರು, ತರಗತಿ ಬಹಿಷ್ಕರಿಸಿ ವೇತನರಹಿತ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.

ಕಳೆದ ಹದಿನೈದು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವವರನ್ನು

ಸರ್ಕಾರ ಸೇವೆ ಕಾಯಂಗೊಳಿಸುವ ಕಾಳಜಿ ತೆಗೆದುಕೊಂಡಿಲ್ಲ. ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ, ಕೇರಳ, ತಮಿಳುನಾಡು ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಅತಿಥಿ ಉಪನ್ಯಾಸಕರ ಸೇವೆಯನ್ನು ಕಾಯಂಗೊಳಿಸಿ, ಸೇವಾ ಭದ್ರತೆ ನೀಡಲಾಗಿದ್ದು, ನೆರೆಯ ರಾಜ್ಯಗಳ ಮಾದರಿಯಲ್ಲಿಯೇ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕ ಸೇವೆ ಕಾಯಂಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕಳೆದ ಸರ್ಕಾರದಲ್ಲಿ ಪ್ರತಿಪಕ್ಷದ ನಾಯಕರಾಗಿದ್ದ ಹಾಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅತಿಥಿ ಉಪನ್ಯಾಸಕ ಸೇವೆ ಕಾಯಂಗೊಳಿಸುವ ಕುರಿತು ಸದನದಲ್ಲಿ ಧ್ವನಿ ಎತ್ತಿದ್ದರು. ಇದೀಗ ಕಾಂಗ್ರೆಸ್ ಸರ್ಕಾರವೇ ರಾಜ್ಯದಲ್ಲಿ ಅಧಿಕಾರದಲ್ಲಿದೆ. ಚುನಾವಣೆ ಮುನ್ನದ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸಹ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸುವ ಭರವಸೆ ನೀಡಿದ್ದು, ಈ ಹಿಂದೆ ನೀಡಿದ ಭರವಸೆಯಂತೆಯೇ ರಾಜ್ಯ ಸರ್ಕಾರ ಕೂಡಲೇ ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ಕ್ರಮ ವಹಿಸಬೇಕು. ಮುಖ್ಯಮಂತ್ರಿಗಳು ತಾವು ನೀಡಿದ ವಾಗ್ದಾದನಂತೆಯೇ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಸೇವಾ ಭದ್ರತೆಗೆ ಸಂಬಂಧಿಸಿದಂತೆ ವಿಶೇಷ ನಿಯಮಾವಳಿ ರೂಪಿಸಿ, ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಡಾ. ಟಿ. ದುರುಗಪ್ಪ, ಬೆಳಗಾವಿ ಅಧಿವೇಶನದಲ್ಲಿ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬ ನಿರೀಕ್ಷೆಯಲ್ಲಿದ್ದೆವು. ಆದರೆ, ಈವರೆಗೆ ಯಾವುದೇ ಕ್ರಮ ವಹಿಸಿಲ್ಲ. ಹೀಗಾಗಿ ಈ ಹಿಂದೆ ಕೈಗೊಂಡಿದ್ದ ಅನಿದಿಷ್ಟಾವಧಿ ಧರಣಿಯನ್ನು ಮುಂದುವರಿಸಿದ್ದೇವೆ. ಸರ್ಕಾರ ಉಪನ್ಯಾಸಕರ ಹಿತ ಕಾಯದೇ ಹೋದರೆ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಸಿದರು.

ಸಂಘದ ಉಪಾಧ್ಯಕ್ಷ ಡಾ. ಎಚ್. ಹನುಮೇಶ್, ಕಾರ್ಯದರ್ಶಿ ಡಿ. ಸಿದ್ದೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಕೆ. ಬಸಪ್ಪ, ರುದ್ರಮುನಿ, ಗುರುರಾಜ್, ರುದ್ರಗೌಡ, ರಫೀಕ್, ಎಸ್.ಎಂ. ರಮೇಶ್, ಮಹಿಳಾ ಘಟಕದ ಅಧ್ಯಕ್ಷೆ ಫರೀದಾ, ಸಂಧ್ಯಾ, ರಾಜಲಕ್ಷ್ಮಿ, ಡಾ. ಬಸವರಾಜ್ ಸೇರಿದಂತೆ ಸಂಘದ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ