೧೯ರಿಂದ ಗುತ್ತಿಗೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

KannadaprabhaNewsNetwork |  
Published : Feb 18, 2024, 01:30 AM IST
ಫೆ. ೧೯ರಿಂದ ಬೆಂಗಳೂರಿನಲ್ಲಿ ಏಡ್ಸ್ ಪ್ರಿವೆನ್ನನ್ ಸೊಸೈಟಿ ಗುತ್ತಿಗೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ-ಬೆಂಬಲ | Kannada Prabha

ಸಾರಾಂಶ

ಖಾಯಂ ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಗುತ್ತಿಗೆ ನೌಕರರು ಫೆ.೧೯ಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕೆಲಸ ಸ್ಥಗಿತಗೊಳಿಸಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರ ನ್ಯಾಯಯುತವಾಗಿದ್ದು, ಅವರಿಗೆ ನಮ್ಮ ಸಂಪೂರ್ಣ ಬೆಂಬಲವಿದ್ದು, ಅವರ ಬೇಡಿಕೆಗಳನ್ನು ಈಡೇರಿಸುವಂತೆ ಸಮತಾ ಸೂಸೈಟಿಯ ಚಂದ್ರಶೇಖರ ಪಾಟೀಲ್ ಹೇಳಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರಖಾಯಂ ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಗುತ್ತಿಗೆ ನೌಕರರು ಫೆ.೧೯ಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕೆಲಸ ಸ್ಥಗಿತಗೊಳಿಸಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರ ನ್ಯಾಯಯುತವಾಗಿದ್ದು, ಅವರಿಗೆ ನಮ್ಮ ಸಂಪೂರ್ಣ ಬೆಂಬಲವಿದ್ದು, ಅವರ ಬೇಡಿಕೆಗಳನ್ನು ಈಡೇರಿಸುವಂತೆ ಸಮತಾ ಸೂಸೈಟಿಯ ಚಂದ್ರಶೇಖರ ಪಾಟೀಲ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಎಚ್‌ಐವಿ ರಕ್ತ ಪರೀಕ್ಷೆ, ರೋಗಿಗಳಿಗೆ ಮಾತ್ರೆಗಳಿಂದ ಹಿಡಿದು ಆಪ್ತ ಸಮಾಲೋಚನೆ ನಡೆಸಿ, ಅವರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಮಹತ್ತರ ಕರ್ತವ್ಯ ನಿರ್ವಹಿಸುವ ಇವರ ಕೆಲಸಕ್ಕೆ ಸಮಾನ ವೇತನ ನೀಡುವುದು ಅತ್ಯಗತ್ಯವಾಗಿದೆ ಎಂದರು. ರಾಜ್ಯದ ೩೧ ಜಿಲ್ಲಾ ಆಸ್ಪತ್ರೆ, ಜಿಲ್ಲಾ ಡ್ಯಾಪ್ಕೋ ಕಚೇರಿ, ಮೆಡಿಕಲ್ ಕಾಲೇಜುಗಳು ತಾಲೂಕು ಆಸ್ಪತ್ರೆ, ಸಮುದಾಯ ಅರೋಗ್ಯ ಕೇಂದ್ರಗಳು, ಬೆಂಗಳೂರು ಕೇಂದ್ರ ಕಚೇರಿಯಲ್ಲಿ ಸುಮಾರು ೧೮೦೦ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಏಡ್ಸ್ ನಿಯಂತ್ರಣದಲ್ಲಿ ಇವರದು ಪ್ರಮುಖ ಪಾತ್ರವಿದೆ ಎಂದರು.ಚೈತನ್ಯ ನೆಟ್ ವರ್ಕ್‌ನ ಭಾಗ್ಯಮ್ಮ ಮಾತನಾಡಿ ಏಡ್ಸ್ ಪ್ರಿವೆನ್ಷನ್ ಸೊಸೈಟಿಯ ಐಸಿಟಿಸಿ, ಎಆರ್‌ಟಿಯಲ್ಲಿ ಕರ್ತವ್ಯ ನಿರ್ವಹಿಸುವ ಇವರು ಗುತ್ತಿಗೆ ಆಧಾರದಲ್ಲಿ ಸುಮಾರು ೨೦ ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದಾರೆ, ಜಿಲ್ಲೆಯಲ್ಲೂ ೩೦ ರಿಂದ ೪೦ ಮಂದಿ ನೌಕರಿದ್ದಾರೆ, ಇವರು ಕೆಲಸ ಸ್ಥಗಿತಗೊಳಿಸಿ, ಮುಷ್ಕರ ಕುಳಿತರೆ ಎಚ್‌ಐವಿ ಸೋಂಕಿತರ ಮೇಲೆ ತೀವ್ರತೆರನಾದ ಪರಿಣಾಮ ಬೀರಲಿದ್ದು ಸರ್ಕಾರ ಇವರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.

ಆರೋಗ್ಯ ಇಲಾಖೆಯ ಸಮನಾಂತರ ಹುದ್ದೆಗಳಿಗೆ ವಿಲೀನಗೊಳಿಸುವುದು, ಖಾಯಂ, ಸಮಾನ ಕೆಲಸಕ್ಕೆ ಸಮಾನ ವೇತನ, ತರ್ಕಬದ್ಧಗೊಳಿಸುವಿಕೆ ರದ್ದುಗೊಳಿಸುವುದು, ಸರ್ಕಾರದಿಂದ ಪ್ರೋತ್ಸಾಹ ಧನ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಈ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಚೈತನ್ಯ ನೆಟ್ ವರ್ಕ್‌ನ ಸಿದ್ದು, ಶಿವಮಲ್ಲು, ಸಮತಾ ಸೊಸೈಟಿಯ ಉಮೇಶ್, ಕೂರ್ ಸಂಸ್ಥೆಯ ಮಹೇಶ್, ಮಹದೇವಸ್ವಾಮಿ ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ