ಕನ್ನಡಪ್ರಭ ವಾರ್ತೆ ಕುಶಾಲನಗರ
ಕುಶಾಲನಗರ ಪುರಸಭೆ ಕಚೇರಿ ಮುಂಭಾಗ ಸ್ಥಳೀಯ ಸಂಘದ ಅಧ್ಯಕ್ಷರಾದ ಎಸ್ ಆರ್ ಗಣೇಶ್ ಅವರ ನೇತೃತ್ವದಲ್ಲಿ ಸುಮಾರು ಐವತ್ತಕ್ಕೂ ಅಧಿಕ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ತಮ್ಮ ಬೇಡಿಕೆಯನ್ನು ತಕ್ಷಣ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಘೋಷಣೆ ಕೂಗಿದರು.ಈ ಸಂದರ್ಭ ಮಾತನಾಡಿದ ಅಧ್ಯಕ್ಷರಾದ ಎಸ್ ಆರ್ ಗಣೇಶ್, ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ನೀಡುವ ಪ್ರತಿಯೊಂದು ಸವಲತ್ತುಗಳನ್ನು ಪೌರಸೇವಾ ನೌಕರರಿಗೆ ಪ್ರತ್ಯೇಕ ಆದೇಶವಿಲ್ಲದೆ ವಿಸ್ತರಣೆ ಮಾಡಬೇಕು, ಸೇರಿದಂತೆ ಸುಮಾರು ಏಳು ಬೇಡಿಕೆಗಳನ್ನು ಸರಕಾರದ ಮಂದಿಡಲಾಗಿದೆ ಇದುವರೆಗೂ ಯಾವುದೇ ಸ್ಪಂದನೆ ನೀಡಿಲ್ಲ.
ಈ ಹಿನ್ನೆಲೆಯಲ್ಲಿ ರಾಜ್ಯ ಸಂಘದ ಕರೆಯಂತೆ ಕುಶಾಲನಗರ ಪುರಸಭೆ ವ್ಯಾಪ್ತಿಯ ನೌಕರರು ಅನಿರ್ಧಿಷ್ಟಾವಧಿ ಮುಷ್ಕರದಲ್ಲಿ ತೊಡಗಿದ್ದೇವೆ ಎಂದು ತಿಳಿಸಿದರು.ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ ಈ ಅವಧಿಯಲ್ಲಿ ಉಂಟಾಗುವ ಅನಾನುಕೂಲತೆ ಸಮಸ್ಯೆಗಳಿಗೆ ತಾವು ಕ್ಷಮೆ ಕೋರುವುದಾಗಿ ಅವರು ಹೇಳಿದರು.
ಎಲ್ಲರ ಬೆಂಬಲದೊಂದಿಗೆ ತಮ್ಮ ಬೇಡಿಕೆ ಈಡೇರುವ ತನಕ ಮುಷ್ಕರ ಮುಂದುವರೆಯಲಿದೆ ಎಂದು ಹೇಳಿದರು.ಈ ಸಂದರ್ಭ ಸಂಘದ ಉಪಾಧ್ಯಕ್ಷರಾದ ಕೆ ಎಸ್ ರಶ್ಮಿ ಕಾರ್ಯದರ್ಶಿ ಕೆ ನಂಜುಂಡ ಮತ್ತಿತರರು ಇದ್ದರು.