ಪೌರ ನೌಕರರ ಸಂಘ ವತಿಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಅನಿರ್ದಿಷ್ಟಾವಧಿ ಮುಷ್ಕರ

KannadaprabhaNewsNetwork |  
Published : May 27, 2025, 11:54 PM ISTUpdated : May 27, 2025, 11:55 PM IST
ಮಾಗಡಿ ಪಟ್ಟಣದ ಪುರಸಭೆ ಮುಂಭಾಗದಲ್ಲಿ ಪೌರ ನೌಕರರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. | Kannada Prabha

ಸಾರಾಂಶ

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಪೌರ ನೌಕರರು ಮಂಗಳವಾರ ಕರ್ತವ್ಯಕ್ಕೆ ಗೈರು ಹಾಜರಾದರು. ಕಸ ಸಂಗ್ರಹ, ವಿಲೇವಾರಿ, ಸ್ವಚ್ಛತೆ, ನೀರು ಪೂರೈಕೆ, ಒಳಚರಂಡಿ ನಿರ್ವಹಣೆ ಸ್ಥಗಿತಗೊಳಿಸಿ, ಪುರಸಭೆ ಮುಂಭಾಗದಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೂ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಮಾಗಡಿ

ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪುರಸಭಾ ಪೌರ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗಿ ಬೇಡಿಕೆ ಈಡೇರಿಸುವಂತೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು.

ಪೌರ ನೌಕರ ಸಂಘದ ಮಾಗಡಿ ಶಾಖೆಯ ಅಧ್ಯಕ್ಷ ರವಿಕುಮಾರ್ ಮಾತನಾಡಿ, ಈ ಹಿಂದೆ ಕೂಡ ಪ್ರತಿಭಟನೆ ಮೂಲಕ ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು, ಜ್ಯೋತಿ ಸಂಜೀವಿನಿ ಯೋಜನೆ ಜಾರಿ ಮಾಡಬೇಕು. ನೀರು ಸರಬರಾಜು ಮಾಡುವ ಹೊರ ಗುತ್ತಿಗೆ ನೌಕರರನ್ನು ನೇರ ಪಾವತಿ ಅಥವಾ ಕಾಯಂಗೊಳಿಸುವಂತೆ ಆಗ್ರಹ ಮಾಡಿದ್ದರೂ ಕೂಡ ರಾಜ್ಯ ಸರ್ಕಾರ ನಮ್ಮ ಬೇಡಿಕೆಯನ್ನು ಈಡೇರಿಸಿಲ್ಲ. ಈ ಹಿನ್ನೆಲೆ ರಾಜ್ಯಾದ್ಯಂತ ನಮ್ಮ ಸಂಘದ ರಾಜ್ಯಾಧ್ಯಕ್ಷರು ಪ್ರಭಾಕರ್ ಹಾಗೂ ರಾಜ್ಯ ಉಪಾಧ್ಯಕ್ಷರಾದ ಆರ್. ನಾಗರಾಜು ನೇತೃತ್ವದಲ್ಲಿ ಮಂಗಳವಾರ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದ್ದು, ಬುಧವಾರ ಕೂಡ ಬೇಡಿಕೆ ಈಡೇರಿಕೆಗಾಗಿ ಹೋರಾಟ ಮುಂದುವರಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕರ್ತವ್ಯಕ್ಕೆ ಗೈರು:

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಪೌರ ನೌಕರರು ಮಂಗಳವಾರ ಕರ್ತವ್ಯಕ್ಕೆ ಗೈರು ಹಾಜರಾದರು. ಕಸ ಸಂಗ್ರಹ, ವಿಲೇವಾರಿ, ಸ್ವಚ್ಛತೆ, ನೀರು ಪೂರೈಕೆ, ಒಳಚರಂಡಿ ನಿರ್ವಹಣೆ ಸ್ಥಗಿತಗೊಳಿಸಿ, ಪುರಸಭೆ ಮುಂಭಾಗದಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೂ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಂಘದ ಬೇಡಿಕೆಗಳೇನು?:

ರಾಜ್ಯದ ಎಲ್ಲಾ ನಗರ, ಸ್ಥಳೀಯ ಸಂಸ್ಥೆ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಿ ಜ್ಯೋತಿ ಸಂಜೀವಿನಿ, ಕೆಜಿಐಡಿ, ಸೇರಿದಂತೆ ಸರ್ಕಾರಿ ನೌಕರ ಪಡೆಯುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು.

ರಾಜ್ಯದ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆಯಡಿ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜು, ಚಾಲಕರು, ಲೋಡರ್ಸ್ ಕ್ಲೀನರ್ಸ್, ಗಾರ್ಡನರ್, ಸ್ಯಾನಿಟರಿ ಸೂಪರ್ವೈಸರ್, ಯುಜಿಡಿ ಸಹಾಯಕರು ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸುವುದು. ದಿನಗೂಲಿ, ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಾಮಾನ್ಯ ವೇತನ ನೌಕರರನ್ನು ಕಾಯಂ ಮಾಡುವುದು. ಎಲ್ಲಾ ನೌಕರರಿಗೆ ಎಸ್ಎಫ್‌ಸಿ ಮುಕ್ತ ನಿಧಿಯಿಂದ ವೇತನ ನೀಡುವುದು. ಹೊರಗುತ್ತಿಗೆ ನೀರು ನೌಕರರನ್ನು ನೇರ ಪಾವತಿ ಅಥವಾ ಕಾಯಂ ಗೊಳಿಸುವಂತೆ ಪ್ರತಿಭಟನೆ ನಡೆಸಲಾಯಿತು.

ಇದೇ ವೇಳೆ ಬಿಲ್ ಕಲೆಕ್ಟರ್ ನಾಗರಾಜು, ವಾಟರ್ ಮ್ಯಾನ್ ಗಳಾದ ಮಂಜು, ಅಜಮ್, ದೇವರಾಜ್, ಗಿರೀಶ್, ರಂಗಪ್ಪ ,ರಮೇಶ್ ಸೇರಿದಂತೆ ಹಲವು ಪೌರ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV

Recommended Stories

ತೋಪಿನಕಟ್ಟಿ ಮಹಾಲಕ್ಷ್ಮೀ ಸೊಸೈಟಿಗೆ 68 ಲಕ್ಷ ಲಾಭ
114 ಹಳ್ಳಿಗಳನ್ನೂ ಅಭಿವೃದ್ಧಿಪಡಿಸುವುದೇ ನನ್ನ ಗುರಿ