ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಮುಷ್ಕರ

KannadaprabhaNewsNetwork |  
Published : Sep 28, 2024, 01:18 AM IST
26ಕೆಕೆಡಿಯು3 | Kannada Prabha

ಸಾರಾಂಶ

ಕಡೂರು, ವೇತನ ಹೆಚ್ಚಳ, ಮೂಲಭೂತ ಸೌಕರ್ಯಗಳು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಸಂಘದಿಂದ ಗುರುವಾರ ತಾಲೂಕು ಕಚೇರಿ ಆವರಣದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರದ ನಡೆಸಿದರು.

ಕನ್ನಡಪ್ರಭ ವಾರ್ತೆ ಕಡೂರು

ವೇತನ ಹೆಚ್ಚಳ, ಮೂಲಭೂತ ಸೌಕರ್ಯಗಳು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಸಂಘದಿಂದ ಗುರುವಾರ ತಾಲೂಕು ಕಚೇರಿ ಆವರಣದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರದ ನಡೆಸಿದರು.

ಕೇಂದ್ರ ಸಂಘದ ಕರೆಯ ಮೇರೆಗೆ ಮೊದಲ ದಿನ ಗುರುವಾರ ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ತಾಲೂಕು ಘಟಕದ ಅಧ್ಯಕ್ಷ ಲಿಂಗರಾಜು ಮಾತನಾಡಿ, ಈಗಾಗಲೇ ಕಂದಾಯ ಇಲಾಖೆಯಿಂದ ಅಭಿವೃದ್ಧಿ ಪಡಿಸಿರುವ ಸುಮಾರು 17ಕ್ಕೂ ಅಧಿಕ ಮೊಬೈಲ್ ವೆಬ್ ತಂತ್ರಾಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರಲಾಗುತ್ತಿದೆ. ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕ ವಾದ ಇಂಟರ್ ನೆಟ್ , ಸ್ಕ್ಯಾನರ್ ಗಳನ್ನು ಒದಗಿಸದೆ ಕರ್ತವ್ಯ ನಿರ್ವಹಿಸಲು ಒತ್ತಡ ಮಾಡುತ್ತಿರುವುದರಿಂದ ಕ್ಷೇತ್ರ ಮಟ್ಟದಲ್ಲಿ ಅಧಿಕ ಒತ್ತಡದೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳ ಸಾವು ನೋವುಗಳು ಆಗುತ್ತಿದೆ‌. ಅಲ್ಲದೆ ಮಾರಣಾಂತಿಕ ಹಲ್ಲೆ ನಡೆಯುತ್ತಿವೆ ಎಂದರು.

ಈ ನಿಟ್ಟಿನಲ್ಲಿ ಅಗತ್ಯ ಸೇವೆ ಒದಗಿಸಲು ಮೊಬೈಲ್, ಲ್ಯಾಪ್ ಟ್ಯಾಪ್ ಹಾಗೂ ಪ್ರಿಂಟರ್ ಸೌಲಭ್ಯ ಒದಗಿಸಿಕೊಡಬೇಕು. ಜೊತೆಯಲ್ಲಿ ಸೇವಾ ಭದ್ರತೆಯೊಂದಿಗೆ ಆಯುಕ್ತಾಲಯದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಜೇಷ್ಠತೆಯನ್ನು ರಾಜ್ಯ ಮಟ್ಟದ ಜೇಷ್ಠತೆಯನ್ನಾಗಿ ಪರಿಗಣಿಸಬೇಕು. ಕಂದಾಯ ಇಲಾಖೆ 3ವರ್ಷಗಳ ಸೇವೆ ಪರಿಗಣಿಸಿ ಅಂತರ್ ಜಿಲ್ಲಾ ವರ್ಗಾವಣೆ ಗಾಗಿ ಕಂದಾಯ ಇಲಾಖೆಯಲ್ಲಿ ಹೊಸ ಮಾರ್ಗಸೂಚಿ ರಚಿಸು ವಂತೆ ಒತ್ತಾಯಿಸಿ ತಹಸೀಲ್ದಾರ್ ಸಿ.ಎಸ್. ಪೂರ್ಣಿಮಾ ಅವರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹನುಮಂತಪ್ಪ, ತಾಲೂಕು ಘಟಕದ ಪದಾಧಿಕಾರಿಗಳಾದ ವೀರೇಶ್, ಮೋಹನ್, ಗಿರೀಶ್, ಓಂಕಾರ್, ಕುಮಾರ್, ಸಿದ್ದಪ್ಪ, ಸತೀಶ್, ರವೀಂದ್ರ, ದೀಪಾ, ನಿರ್ಮಲ, ಜಯಲಕ್ಷ್ಮೀ ಮತ್ತಿತರಿದ್ದರು.26ಕೆಕೆಡಿಯು3.

ಕಡೂರು ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದಿಂದ ಸಿ.ಎಸ್. ಪೂರ್ಣಿಮಾ ಅವರಿಗೆ ಮನವಿ ಸಲ್ಲಿಸಲಾಯಿತು.

PREV

Recommended Stories

ಟಿಕೆಟ್ ಆಯ್ತು, ಮಲ್ಟಿಪ್ಲೆಕ್ಸ್‌ಗಳಲ್ಲಿ ತಿಂಡಿ ದರ ಇಳಿಸಿ : ಸಿನಿ ಪ್ರಿಯರು
ಮಂಗಳಮುಖಿಯರು, ಮಹಿಳೆಯರಿಗೆ ಸರ್ಕಾರದಿಂದಲೇ ಉಚಿತ ಆಟೋ