೨ನೇದಿನಕ್ಕೆ ಕಾಲಿಟ್ಟ ಅನಿರ್ದಿಷ್ಟಾವಧಿ ಮುಷ್ಕರ

KannadaprabhaNewsNetwork |  
Published : May 29, 2025, 12:55 AM IST
ಪೌರ ನೌಕರರಿಂದ ೨ದಿನಕ್ಕೆ ಮುಂದುವರಿದ ಅನಿರ್ದಿಷ್ಟಾವಧಿ ಮುಷ್ಕರ | Kannada Prabha

ಸಾರಾಂಶ

ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಪೌರ ನೌಕರರ ಸಂಘ ಜಿಲ್ಲಾ ಶಾಖೆ ಆಶ್ರಯದಲ್ಲಿ ಪೌರ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗಿ ನಗರದ ನಗರಸಭಾ ಕಚೇರಿ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದು ೨ನೇ ದಿನಕ್ಕೆ ಕಾಲಿಟ್ಟಿದೆ.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಪೌರ ನೌಕರರ ಸಂಘ ಜಿಲ್ಲಾ ಶಾಖೆ ಆಶ್ರಯದಲ್ಲಿ ಪೌರ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗಿ ನಗರದ ನಗರಸಭಾ ಕಚೇರಿ ಮುಂಭಾಗದಲ್ಲಿ ಪ್ರಾರಂಭಿಸಿರುವ ಅನಿರ್ದಿಷ್ಟಾವಧಿ ಮುಷ್ಕರ ೨ನೇ ದಿನವೂ ನಡೆಯಿತು.ನಗರಸಭಾ ಕಚೇರಿ ಮುಂಭಾಗ ಟೆಂಟ್ ಹಾಕಿಕೊಂಡು ಕುಳಿತ ಪ್ರತಿಭಟನಾಕಾರರು ನಮ್ಮ ಬೇಡಿಕೆಗಳು ಈಡೇರುವವರೆಗೂ ಮುಷ್ಕರ ನಿಲ್ಲಿಸುವುದಿಲ್ಲ, ಕರ್ತವ್ಯಕ್ಕೂ ಹಾಜರಾಗುವುದಿಲ್ಲ ಎಂದು ಪ್ರತಿಭಟನೆ ಮುಂದುವರಿಸಿದ್ದಾರೆ.ನಗದು ರಹಿತ ಆರೋಗ್ಯ ಚಿಕಿತ್ಸಾ ಸೌಲಭ್ಯದ ಜ್ಯೋತಿ ಸಂಜೀವಿನಿ ಯೋಜನೆಯನ್ನು ಪೌರ ನೌಕರರಿಗೂ ವಿಸ್ತರಿಸಬೇಕು, ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆಯಡಿ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜುದಾರರು, ವಾಹನ ಚಾಲಕರು, ಲೋಡರ್‌ಗಳು, ಕ್ಲೀನರ್‌ಗಳು, ಸ್ವಚ್ಛತಾ ಮೇಲ್ವಿಚಾರಕರು, ಉದ್ಯಾನ ನಿರ್ವಹಣೆಗಾರರು ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ನೌಕರನ್ನು ನೇರ ಪಾವತಿಗೆ ಒಳಪಡಿಸಬೇಕು. ದಿನಗೂಲಿ ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಾಮಾನ್ಯ ವೇತನ ಟೈಮ್ ಸ್ಕೆಲ್ ನೌಕರರ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು, ವಾಹನ ಚಾಲಕರು, ನೀರು ಪೂರೈಕೆ ನೌಕರರು, ನೇರ ಪಾವತಿ ಪೌರ ಕಾರ್ಮಿಕರನ್ನು ಕಾಯಂಗೊಳಿಸಬೇಕು, ಪೌರಕಾರ್ಮಿಕರಿಗೆ ಎಸ್‌ಎಫ್‌ಸಿ ಮುಕ್ತ ನಿಧಿಯಿಂದ ವೇತನ ನೀಡಬೇಕು ಎಂದು ಆಗ್ರಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಿಂದ ಪುಣೆಗೆ ಹೊಸ ಹೈಸ್ಪೀಡ್‌ ರೈಲು ಘೋಷಣೆ?
ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಮೆಟ್ರೋ ಟಿಕೆಟ್‌ ಮತ್ತೆ ಏರಿಕೆ? ಯಾವ ಮಾರ್ಗದಲ್ಲಿ ಎಷ್ಟು ಹೆಚ್ಚಳ?