ಕನ್ನಡಪ್ರಭ ವಾರ್ತೆ ಬೀದರ್
ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಷನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆಗಳ ಬಗ್ಗೆ, ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಸುಮಾರು 17ಕ್ಕೂ ಅಧಿಕ ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು, ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್ ಸಾಧನ, ಹಾಗೂ ಲ್ಯಾಪ್‌ಟಾಪ್ ಹಾಗೂ ಅದಕ್ಕೆ ಅವಶ್ಯಕವಾಗಿರುವ ಇಂಟರ್ ನೆಟ್ ಹಾಗೂ ಸ್ಕ್ಯಾನರ್‌ಗಳನ್ನು ಒದಗಿಸದೆ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿರುವುದರಿಂದ ಕ್ಷೇತ್ರ ಮಟ್ಟದಲ್ಲಿ ಅಧಿಕ ಒತ್ತಡದೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳ ಸಾವು ನೋವುಗಳು ಆಗುತ್ತಿದ್ದು, ನಿರಂತರವಾಗಿ ಮಾರಣಾಂತಿಕ ಹಲ್ಲೆ ನಡೆಯುತ್ತಿರುತ್ತದೆ ಎಂದು ಆರೋಪಿಸಿದ್ದಾರೆ.
ಎಲ್ಲ ಮೊಬೈಲ್ ಆಪ್ ಗಳಲ್ಲಿ ಏಕಕಾಲದಲ್ಲಿ ಪ್ರಗತಿ ಸಾಧಿಸಲು ತೀವ್ರ ಒತ್ತಡ ಹೇರುತ್ತಿರುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ವ್ಯತಿರಿಕ್ತ ಪರಿಣಾಮಗಳು ಹೆಚ್ಚಾಗಿರುತ್ತದೆ. ಆದ್ದರಿಂದ ನಮಗೆ ಮೇಲ್ಕಂಡಂತೆ ವೃತ್ತಕ್ಕೆ ಒಂದರಂತೆ ಮೊಬೈಲ್, ಲ್ಯಾಪ್ ಟಾಪ್/ಗೂಗಲ್ ಕ್ರೋಮ್ ಮೊಬೈಲ್ ತಂತ್ರಾಂಶಗಳ ಕೆಲಸ ನಿರ್ವಹಿಸದಂತೆ ತಿರ್ಮಾನಿಸಲಾಗಿರುತ್ತದೆ ಎಂದು ಹೇಳಿದ್ದಾರೆ.ಬಗರ್ ಹುಕುಂ ಹಕ್ಕುಪತ್ರ ಮೂನೆ 1-5ರ ವೆಬ್ ಅಪ್ಲಿಕೇಷನ್, ಪೌತಿ ಆಂದೋಲನ ಆಪ್, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು, ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ಮತ್ತು ಅಲ್ಮರಾ, ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್, ಸಿಯುಜಿ ಸಿಮ್ ಮತ್ತು ಡೇಟಾ, ಗೂಗಲ್ ಕ್ರೋಮ್ ಬುಕ್, ಲ್ಯಾಪ್‌ಟಾಪ್ ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸಬೇಕು.
ಆಡಳಿತ ಅಧಿಕಾರಿ ಹುದ್ದೆಯನ್ನಾಗಿ ಮೇಲ್ದರ್ಜೆಗೇರಿಸಿ ರಾಜಸ್ವ ನಿರೀಕ್ಷಕರು, ಪ್ರಥಮ ದರ್ಜೆ ಸಹಾಯಕರು, ಗ್ರೇಡ್-1 ಗ್ರಾಮ ಆಡಳಿತ ಅಧಿಕಾರಿ ಹುದ್ದೆಯನ್ನಾಗಿ ಪರಿಷ್ಕರಿಸಿ ಮೇಲ್ದೆರ್ಜೆಗೇರಿಸಿ ಪದೋನ್ನತಿಯನ್ನು ನೀಡಬೇಕು ಎಂದು ಆಗ್ರಹಿಸಲಾಗಿದೆ.
ಕಂದಾಯ ಇಲಾಖೆಯ 3 ವರ್ಷಗಳ ಸೇವೆಯನ್ನು ಪರಿಗಣಿಸಿ ಅಂತರ್ ಜಿಲ್ಲಾ ವರ್ಗಾವಣೆಗಾಗಿ ಕಂದಾಯ ಇಲಾಖೆಯಲ್ಲಿ ಹೊಸ ಮಾರ್ಗಸೂಚಿಯನ್ನು ರಚಿಸಬೇಕು, ಆಯುಕ್ತಾಲಯದ ಅಡಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಜೇಷ್ಠತೆಯನ್ನು ಪರಿಗಣಿಸಬೇಕು, ಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರವಾಗಿ ಇದುವರೆಗೂ ಆಗಿರುವ ಎಲ್ಲಾ ಅಮಾನತ್ತುಗಳನ್ನು ತಕ್ಷಣವೇ ರದ್ದುಪಡಿಸಿ ಹಿಂಪಡೆಯಬೇಕು, ಪ್ರಯಾಣ ಭತ್ಯೆ ದರವನ್ನು 500 ರು. ಗಳಿಂದ 3000ರು.ಗೆ ಹೆಚ್ಚಿಸಬೇಕು ಎಂದು ಆಗ್ರಹಿಸಿದ್ದಾರೆ.