ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟ ಮುಷ್ಕರ

KannadaprabhaNewsNetwork |  
Published : Feb 11, 2025, 12:48 AM IST
ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲ ಸೌಲಭ್ಯ, ಸೇವಾ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ೨ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು. | Kannada Prabha

ಸಾರಾಂಶ

ಮೂಲಸೌಲಭ್ಯ, ಸೇವಾ ಸೌಲಭ್ಯ ಒದಗಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ತಾಲೂಕು ಗ್ರಾಮ ಆಡಳಿತಾಧಿಕಾರಿಗಳು ನಗರದ ತಹಸೀಲ್ದಾರ ಕಾರ್ಯಾಲಯದ ಆವರಣದಲ್ಲಿ ಸೋಮವಾರ ೨ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.

ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ

ಮೂಲಸೌಲಭ್ಯ, ಸೇವಾ ಸೌಲಭ್ಯ ಒದಗಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ತಾಲೂಕು ಗ್ರಾಮ ಆಡಳಿತಾಧಿಕಾರಿಗಳು ನಗರದ ತಹಸೀಲ್ದಾರ ಕಾರ್ಯಾಲಯದ ಆವರಣದಲ್ಲಿ ಸೋಮವಾರ ೨ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.

ಗ್ರಾಮ ಆಡಳಿತಾಧಿಕಾರಿಗಳ ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಖವಟಕೊಪ್ಪ ಮಾತನಾಡಿ, ಸರ್ಕಾರದ ಹೊಸ ಹೊಸ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಸರಿಯಾದ ಮೂಲ ಸೌಲಭ್ಯ ನೀಡುತ್ತಿಲ್ಲ. ಹಲವಾರು ಬಾರಿ ಬೇಡಿಕೆ ಬಗ್ಗೆ ಮನವಿ ಸಲ್ಲಿಸಿದ್ದೇವೆ. ಸರ್ಕಾರ ಸ್ಪಂದಿಸುತ್ತಿಲ್ಲ. ಬೇಡಿಕೆ ಈಡೇರುವವರೆಗೆ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರಿಯಲಿದೆ. ಬೇಡಿಕೆ ಈಡೇರುವವರೆಗೆ ಹಿಂದೆ ಸರಿಯುವ ಮಾತೇ ಇಲ್ಲ ಎಂದರು.

ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಹನಗಂಡಿ ಇವರ ಮುಷ್ಕರಕ್ಕೆ ಬೆಂಬಲ ಸೂಚಿಸಿದರು. ಸದಾಶಿವ ಕುಂಬಾರ, ಅರಬಾಜ ಜಮಖಂಡಿ, ಬಸವರಾಜ ಗುಂಡಿ, ಮಂಜುನಾಥ ನೀಲನ್ನವರ, ರಾಚಯ್ಯ ಮಠಪತಿ, ಅಮಸಿದ್ದ ಬಿರಾದಾರ, ಈರೇಶ ಗೋಕಾಕ, ಸೌರಭ ಮೇತ್ರಿ, ರೇವಣಸಿದ್ದಪ್ಪ ಕಾಮಟೆ, ಚಂದ್ರಕಾಂತ ಹೊಸಮನಿ, ರವಿ ಈಟಿ, ಶಬಾನಾ ಜಮಾದಾರ, ತ್ರೀವೇಣಿ ದೇವರಮನಿ, ದೀಪಾ ಮೇತ್ರಿ, ಸಂಗೀತಾ ವಾಲಿಕರ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮ ಆಡಳಿತಾಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!