ಸ್ವಾತಂತ್ರ್ಯೋತ್ಸವ: ಕೃಷಿ ಸಚಿವರಿಂದ 6500ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ

KannadaprabhaNewsNetwork |  
Published : Aug 16, 2026, 03:00 AM IST
15ಕೆಎಂಎನ್ ಡಿ41 | Kannada Prabha

ಸಾರಾಂಶ

ಮಳವಳ್ಳಿ ಕ್ಷೇತ್ರದ ಶಾಸಕ, ಕೃಷಿ ಸಚಿವ ಹಾಗೂ ಕೊಡಗು ಜಿಲ್ಲೆಯ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಅವರಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹಲಗೂರು ಹೋಬಳಿಯ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 6500 ವಿದ್ಯಾರ್ಥಿಗಳಿಗೆ ಸಹಿ ವಿತರಣೆ.

ಹಲಗೂರು:

ಮಳವಳ್ಳಿ ಕ್ಷೇತ್ರದ ಶಾಸಕ, ಕೃಷಿ ಸಚಿವ ಹಾಗೂ ಕೊಡಗು ಜಿಲ್ಲೆಯ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಅವರು 80ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹಲಗೂರು ಹೋಬಳಿಯ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 6500 ವಿದ್ಯಾರ್ಥಿಗಳು ಸೇರಿದಂತೆ ತಾಲೂಕಿನ ಎಲ್ಲಾ ಶಾಲಾ ಅನುದಾನಿತ ಹಾಗೂ ಅನುದಾನ ರಹಿತ ಮತ್ತು ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಒಟ್ಟು 40,000 ವಿದ್ಯಾರ್ಥಿಗಳು ಮತ್ತು ಅಂಗನವಾಡಿ ವಿದ್ಯಾರ್ಥಿಗಳಿಗೂ ಸಹ ಸಿಹಿ ವಿತರಿಸಿದರು.

ಉಳಿದಂತೆ ಕೆಪಿಎಸ್ ಶಾಲೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ, ಪೊಲೀಸ್ ಠಾಣೆ, ಸೆಸ್ಕಾಂ ಕಚೇರಿ, ಪಶು ಆಸ್ಪತ್ರೆ, ನಾಡ ಕಚೇರಿ, ಗ್ರಾಪಂ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳ ಆವರಣದಲ್ಲಿ ಹಸಿರು ಬಾಳೆ ಕಂಬ ಮತ್ತು ಹಸಿರು ತೋರಣಗಳಿಂದ ಶೃಂಗರಿಸಿ ವಿದ್ಯುತ್ ದೀಪಾಲಂಕಾರ ಮಾಡಿ ಹಬ್ಬದ ರೀತಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಹಾತ್ಮ ಗಾಂಧಿ ,ಅಂಬೇಡ್ಕರ್, ತಾಯಿ ಭುವನೇಶ್ವರಿ, ಒನಕೆ ಓಬವ್ವ ಅವರ ವೇಷಭೂಷಣಗಳನ್ನು ತೊಟ್ಟು, ಹಲಗೂರಿನ ಪ್ರಮುಖ ಬೀದಿಗಳಲ್ಲಿ ವಂದೇ ಮಾತರಂ ಎಂಬ ಘೋಷಣೆಗಳನ್ನು ಕೂಗುತ್ತಾ, ಜೈ ಜವಾನ್ ಜೈ ಕಿಸಾನ್ ಹಾಡುತ್ತ ಮೆರವಣಿಗೆ ನಡೆಸಿದರು.ಪೊಲೀಸ್ ಠಾಣೆಯಲ್ಲಿ ಸ್ವಾತಂತ್ರ್ಯ ದಿನ ಆಚರಣೆ

ಹಲಗೂರು: ಪೊಲೀಸ್ ಠಾಣೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಸಬ್ ಇನ್ಸ್ ಪೆಕ್ಟರ್ ಲೋಕೇಶ್ ಗಣ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿದ ನಂತರ ಎಲ್ಲರಿಗೂ ಸಿಹಿ ಹಂಚಿ ಮಾತನಾಡಿ, ಪೊಲೀಸ್ ಠಾಣೆಗೆ ದೂರು ನೀಡಲು ಬರುವವರ ಜೊತೆ ಸೌಜನ್ಯದಿಂದ ವರ್ತಿಸಬೇಕು. ಈ ಮೂಲಕ ಪೊಲೀಸ್ ಠಾಣೆಗೆ ಹೆಸರು ತರುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿ ಎಂದು ತಮ್ಮ ಸಿಬ್ಬಂದಿ ವರೆಗೆ ಕಿವಿಮಾತು ಹೇಳಿದರು.

ಠಾಣೆ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಾಪರ್ಟಿ ಎಕ್ಸ್‌ಪೋಗೆ ಭರ್ಜರಿ ಜನ ಬೆಂಬಲ
ಡೆಂಘೀ ನಿಯಂತ್ರಣಕ್ಕೆ ಮುಂಜಾಗೃತ ಕ್ರಮ ಕೈಗೊಳ್ಳಿ: ಮದನಿ