ಎಂಜಿಎಂ ಕಾಲೇಜ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ: ಸಾಮಾಜಿಕ ಜಾಗೃತಿ ನಾಟಕ

KannadaprabhaNewsNetwork |  
Published : Aug 21, 2025, 02:00 AM IST
16ಎಂಜಿಎಂ | Kannada Prabha

ಸಾರಾಂಶ

ಎಂ.ಜಿ.ಎಂ. ಪದವಿ ಕಾಲೇಜಿನ ಪ್ರಾಂಶುಪಾಲೆ ಪ್ರೊ.ವನಿತಾ ಮಯ್ಯ, ಎಂ.ಜಿ.ಎಂ. ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ಎಸ್. ನಾಯಕ್, ಎಂ.ಜಿ.ಎಂ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ ಎ ಹಾಗೂ ಎಂ.ಜಿ.ಎಂ. ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಶ್ವನಾಥ್ ಎಂ. ಪೈ ಅವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ಮಹಾತ್ಮಾ ಗಾಂಧಿ ಮೆಮೋರಿಯಲ್ (ಎಂ.ಜಿ.ಎಂ.) ಕಾಲೇಜು ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ಎಂ.ಜಿ.ಎಂ. ಪದವಿ ಕಾಲೇಜಿನ ಪ್ರಾಂಶುಪಾಲೆ ಪ್ರೊ.ವನಿತಾ ಮಯ್ಯ, ಎಂ.ಜಿ.ಎಂ. ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ಎಸ್. ನಾಯಕ್, ಎಂ.ಜಿ.ಎಂ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ ಎ ಹಾಗೂ ಎಂ.ಜಿ.ಎಂ. ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಶ್ವನಾಥ್ ಎಂ. ಪೈ ಅವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ನಂತರ ಕಾಲೇಜಿನ ವಿದ್ಯಾರ್ಥಿಗಳ ವಿವಿಧ ತಂಡಗಳು ಪಥಸಂಚಲನ ನಡೆಸಿದವು. ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳು ‘ಮಾದಕ ವಸ್ತುಗಳ ಬಳಕೆ ಮತ್ತು ಅದರ ವಿನಾಶಕಾರಿ ಪರಿಣಾಮ’ ಎಂಬ ವಿಷಯದ ಮೇಲೆ ಬೀದಿ ನಾಟಕ ಪ್ರದರ್ಶಿಸಿದರು. ಇದು ಮಾದಕ ವಸ್ತುಗಳ ದುಷ್ಪರಿಣಾಮಗಳು, ಯುವಕರ ಮೇಲೆ ಬೀರುವ ಕೆಟ್ಟ ಪರಿಣಾಮಗಳು ಮತ್ತು ಸಕಾರಾತ್ಮಕ ಜೀವನ ಆಯ್ಕೆಗಳ ಮಹತ್ವವನ್ನು ಸಾರಿತು. ಕಾರ್ಯಕ್ರಮದ ನಂತರ ಎನ್‌ಎಸ್‌ಎಸ್, ರೆಡ್ ಕ್ರಾಸ್ ಹಾಗೂ ರೇಂಜರ್ಸ್ ಮತ್ತು ರೋವರ್ಸ್ ಘಟಕದ ಸ್ವಯಂಸೇವಕರು ಆವರಣ ಸ್ವಚ್ಛತಾ ಅಭಿಯಾನವನ್ನು ಕೈಗೊಂಡರು. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು, ಕಸ ತೆರವುಗೊಳಿಸಿ, ಪರಿಸರ ಸ್ವಚ್ಛಗೊಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ