ಬಾಣಾವರ ಗ್ರಾಪಂ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

KannadaprabhaNewsNetwork | Updated : Aug 17 2024, 12:49 AM IST

ಸಾರಾಂಶ

ಅರಸೀಕೆರೆ ತಾಲೂಕಿನ ಬಾಣಾವರ ಗ್ರಾಮ ಪಂಚಾಯಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಗ್ರಾಪಂ ಅಧ್ಯಕ್ಷೆ ವೀಣಾ ವಿಶ್ವನಾಥ್, ಭಾರತವು ವಿವಿಧತೆಯಲ್ಲಿ ಏಕತೆಯನ್ನು ಕಂಡಂತಹ ರಾಷ್ಟ್ರವಾಗಿದ್ದು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಲವಾರು ಮಹನೀಯರು ಪ್ರಾಣವನ್ನು ತೆತ್ತಿದ್ದಾರೆ. ಹಲವಾರು ಜನರ ಹೋರಾಟದ ಸಂಕೇತವಾಗಿ ನಮಗೆ ಸ್ವಾತಂತ್ರ್ಯ ಲಭಿಸಿದ್ದು ಇಂದು ಭಾರತ ಎಲ್ಲಾ ರಂಗದಲ್ಲೂ ಸಹ ಉತ್ಕೃಷ್ಟತೆಯನ್ನು ಪಡೆದುಕೊಂಡಿದೆ ಹಾಗೂ ಸ್ವಾತಂತ್ರ್ಯವನ್ನು ಗೌರವಿಸುವುದು ಮತ್ತು ದೇಶದ ಏಳಿಗೆಗಾಗಿ ಶ್ರಮಿಸಬೇಕಾಗಿರುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ತಾಲೂಕಿನ ಬಾಣಾವರ ಗ್ರಾಮ ಪಂಚಾಯಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಗ್ರಾಪಂ ಅಧ್ಯಕ್ಷೆ ವೀಣಾ ವಿಶ್ವನಾಥ್, ಭಾರತವು ವಿವಿಧತೆಯಲ್ಲಿ ಏಕತೆಯನ್ನು ಕಂಡಂತಹ ರಾಷ್ಟ್ರವಾಗಿದ್ದು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಲವಾರು ಮಹನೀಯರು ಪ್ರಾಣವನ್ನು ತೆತ್ತಿದ್ದಾರೆ. ಹಲವಾರು ಜನರ ಹೋರಾಟದ ಸಂಕೇತವಾಗಿ ನಮಗೆ ಸ್ವಾತಂತ್ರ್ಯ ಲಭಿಸಿದ್ದು ಇಂದು ಭಾರತ ಎಲ್ಲಾ ರಂಗದಲ್ಲೂ ಸಹ ಉತ್ಕೃಷ್ಟತೆಯನ್ನು ಪಡೆದುಕೊಂಡಿದೆ ಹಾಗೂ ಸ್ವಾತಂತ್ರ್ಯವನ್ನು ಗೌರವಿಸುವುದು ಮತ್ತು ದೇಶದ ಏಳಿಗೆಗಾಗಿ ಶ್ರಮಿಸಬೇಕಾಗಿರುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು ನಂತರ ಮಾತನಾಡಿದ ಮಾಜಿ ಗ್ರಾ ಪಂ ಅಧ್ಯಕ್ಷ ಹಾಗೂ ಬಗರ್ ಹುಕುಂ ಕಮಿಟಿಯ ಸದಸ್ಯರಾದ ಬಿ ಎಂ ಜಯಣ್ಣ ಭಾರತವು ಎಲ್ಲಾ ಜಾತಿ ಮತ ಹಾಗೂ ಧರ್ಮೇರನ್ನು ಒಳಗೊಂಡಿದ್ದು ಇಲ್ಲಿ ಎಲ್ಲರೂ ಸಮಾನವಾಗಿದ್ದಾರೆ ಹಾಗೂ ಭಾರತ ಸ್ವಾತಂತ್ರ್ಯವಾಗಲೂ ಶ್ರಮಿಸಿರುವ ಪ್ರತಿಯೊಬ್ಬ ಮಹನೀಯರನ್ನು ಗೌರವಿಸುವ ಹಾಗೂ ಅವರ ತ್ಯಾಗ ಬಲಿದಾನವನ್ನು ಸ್ಮರಿಸುತ್ತಾ ಅಖಂಡ ಭಾರತದ ಭದ್ರತೆ ಹಾಗೂ ರಾಷ್ಟ್ರೀಯ ಐಕ್ಯತೆ ಮತ್ತು ಸಮಗ್ರತೆಯನ್ನು ಮನದಲ್ಲಿ ಇಟ್ಟುಕೊಂಡು ಪ್ರತಿಯೊಬ್ಬ ಭಾರತೀಯ ಪ್ರಜೆಯೂ ದೇಶದ ಅಭಿವೃದ್ಧಿಗಾಗಿ ಹಾಗೂ ದೇಶದ ಹಿತಕ್ಕಾಗಿ ಪರಸ್ಪರ ಪ್ರೀತಿ ವಿಶ್ವಾಸದಿಂದ ಬದುಕಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷ ಬಿ ಆರ್ ಶ್ರೀಧರ್, ಉಪಾಧ್ಯಕ್ಷರಾದ ಶಾರದಮ್ಮ, ಪಾಪು ಸ್ವಾಮಿ, ಸಯ್ಯದ್ ಆಸಿಫ್ ಸಂಜಯ್, ವೀಣಾ ಸುರೇಶ್, ದಿವ್ಯಾ, ಆಶಾ ಹರೀಶ್, ಮಲ್ಲಿಕಾರ್ಜುನ್ ರಾಜು, ಗೀತಾ ಕೃಷ್ಣಮೂರ್ತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಸಿ ಶ್ರೀನಿವಾಸ್ ಸರ್ಕಾರಿ ಉಪನ್ಯಾಸಕ ಕುಮಾರ್ ಸೇರಿದಂತೆ ಬಾಣಾವರ ಠಾಣೆಯ ಆರಕ್ಷಕ ಉಪನಿರೀಕ್ಷಕರಾದ ಸುರೇಶ್ ಹಾಗೂ ಇತರರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬಾಣವರ ಠಾಣೆಯ ಪಿಎಸ್ಐ ಸುರೇಶ್‌ರವರಿಗೆ ಮುಖ್ಯಮಂತ್ರಿಗಳ ಸ್ವರ್ಣ ಪದಕ ಬಂದಿದ್ದರಿಂದ ಅವರನ್ನು ಹಾಗೂ ಬಾಣಾವರ ಸರ್ಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ವೈದ್ಯಕೀಯ ಇಲಾಖೆಯ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದಾನಿಗಳ ಮೊಮ್ಮಗ ರವಿ ಅವರನ್ನು ಸನ್ಮಾನಿಸಲಾಯಿತು.

Share this article