ಯಾದಗಿರಿಯಲ್ಲಿಂದು ಸ್ವಾತಂತ್ರ್ಯ ದಿನಾಚರಣೆ

KannadaprabhaNewsNetwork |  
Published : Aug 15, 2026, 03:00 AM IST
ಸಚಿವ ರಾಜೂಗೌಡ ಅವರು ಶುಕ್ರವಾರ ಅಬ್ಬೆತುಮಕೂರು ಶ್ರೀಗಳ ಆಶೀರ್ವಾದ ಪಡೆದರು. | Kannada Prabha

ಸಾರಾಂಶ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಭಾವೈಕ್ಯತಾ ಸಮಿತಿ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 15ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣ ಯಾದಗಿರಿ ಯಲ್ಲಿ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ರುದ್ರಪ್ಪ ಪಾಟೀಲ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಭಾವೈಕ್ಯತಾ ಸಮಿತಿ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 15ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣ ಯಾದಗಿರಿ ಯಲ್ಲಿ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ರುದ್ರಪ್ಪ ಪಾಟೀಲ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ಟಿ. ನಾರಾಯಣ ಸ್ವಾಮಿ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಾಬುರಾವ್‌ ಚಿಂಚನಸೂರ ಅವರುಗಳು ಉಪಸ್ಥಿತಿ ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಯಾದಗಿರಿ ಶಾಸಕರಾದ ಚನ್ನಾರೆಡ್ಡಿ ಪಾಟೀಲ್ ತುನ್ನೂರ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಯಚೂರು ಸಂಸದರಾದ ಜಿ.ಕುಮಾರ ನಾಯಕ, ಕಲಬುರಗಿ ಸಂಸದ ರಾದ ರಾಧಾಕೃಷ್ಣ ದೊಡ್ಡಮನಿ ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರಾದ ಶರಣಪ್ಪ ಸಲಾದಪೂರ, ಇನ್ನಿತರ ರಾಜಕೀಯ ಗಣ್ಯರು, ಅಧಿಕಾರಿಗಳು ಭಾಗವಹಿಸಲಿದ್ದಾರೆ. ---000---

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮೀರ್ ಮೊಬೈಲಲ್ಲಿ ಭಾರತ ವಿರೋಧಿ ಮ್ಯಾಪ್‌!
ಗ್ರಾಪಂ ವ್ಯಾಪ್ತಿಗೆ ಒಳಪಡದ ಕೆಲಸ ವಹಿಸದಂತೆ ಸಿಬ್ಬಂದಿ ಮನವಿ