ಬ್ರಹ್ಮಾವರ ಜಿಎಂ ಸಮೂಹ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

KannadaprabhaNewsNetwork |  
Published : Aug 18, 2026, 03:00 AM IST
16ಜಿಎಂ | Kannada Prabha

ಸಾರಾಂಶ

ಇಲ್ಲಿನ ಜಿಎಂ ಸಮೂಹ ವಿದ್ಯಾಸಂಸ್ಥೆ 80ನೇ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಿತು. ಜಿಎಂ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ ಪ್ರಾಂಶುಪಾಲ ಜಾರ್ಜ್ ಕುರಿಯನ್ ಧ್ವಜಾರೋಹಣ ನೆರವೇರಿಸಿದರು.

ಬ್ರಹ್ಮಾವರ: ಇಲ್ಲಿನ ಜಿಎಂ ಸಮೂಹ ವಿದ್ಯಾಸಂಸ್ಥೆ 80ನೇ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಿತು. ಜಿಎಂ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ ಪ್ರಾಂಶುಪಾಲ ಜಾರ್ಜ್ ಕುರಿಯನ್ ಧ್ವಜಾರೋಹಣ ನೆರವೇರಿಸಿದರು.

ಮುಖ್ಯ ಅತಿಥಿಯಾಗಿದ್ದ ಭಾರತೀಯ ಸೇನೆಯ ನಿವೃತ್ತ ಹವಾಲ್ದಾರ್ ಹರ್ಷ ಶೆಟ್ಟಿ ವಿದ್ಯಾರ್ಥಿಗಳ ಪಥಸಂಚಲನದ ಗೌರವ ವಂದನೆ ಸ್ವೀಕರಿಸಿ, ಸ್ವಾತಂತ್ರ್ಯದ ಸಂಭ್ರಮ ಒಂದು ದಿನಕ್ಕೆ ಸೀಮಿತವಾಗಿರದೆ ಪ್ರತಿ ನಿತ್ಯವೂ ದೇಶದ ಕುರಿತು ಚಿಂತಿಸಬೇಕು, ರಾಷ್ಟ್ರ ಧ್ವಜವನ್ನು ಗೌರವಿಸಬೇಕು. ವಿದ್ಯಾರ್ಥಿಗಳು ಮೊಬೈಲ್‌ನ ದಾಸರಾಗದೆ ಪುಸ್ತಕವನ್ನು ಹೆಚ್ಚು ಓದಬೇಕು ಎಂದರು.

ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ, ಸೈನಿಕರನ್ನು ಸದಾ ನಾವು ಸ್ಮರಿಸಬೇಕು. ಸ್ವಾತಂತ್ರ್ಯವೆಂದರೆ ನಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸುವುದು. ರಾಷ್ಟ್ರನಾಯಕರ ಆದರ್ಶಗಳನ್ನು ನಾವು ಪಾಲಿಸಬೇಕು. ಜಾಗತಿಕ ಮಟ್ಟದಲ್ಲಿ ಭಾರತವನ್ನು ಆರ್ಥಿಕವಾಗಿ ಮೊದಲ ಸ್ಥಾನಕ್ಕೆ ಕೊಂಡೊಯ್ಯುವ ಜವಾಬ್ದಾರಿ ನಿಮ್ಮೆಲ್ಲರ ಮೇಲಿದೆ ಎಂದರು.

ಗೌರವ ಅತಿಥಿ ಉಡುಪಿಯ ಅಲಯನ್ಸ್ ಕ್ಲಬ್ ಇಂಟರ್‌ನ್ಯಾಷನಲ್‌ನ ಜಿಲ್ಲಾ ಗವರ್ನರ್ ಅಲಿ ಸುನಿಲ್ ಕುಮಾರ್ ಶೆಟ್ಟಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಜಿಎಂ ಗ್ಲೋಬಲ್ ಸ್ಕೂಲ್‌ನ ಟ್ರಸ್ಟಿ ಪ್ರಣವ್ ಶೆಟ್ಟಿ ಮತ್ತು ಶಾಲೆಯ ಪ್ರಾಂಶುಪಾಲರಾದ ದೀಪ್ತಿ ಶೆಟ್ಟಿ ಶುಭ ಹಾರೈಸಿದರು. ಮುಂಜಾನೆ ಶಾಲಾ ವಿದ್ಯಾರ್ಥಿಗಳಿಗೆ ಇಂಟರ್ ಹೌಸ್ ಮ್ಯಾರಥಾನ್ ಸ್ಪರ್ಧೆ ಆಯೋಜಿಸಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳ ಅತ್ಯಾಕರ್ಷಕ ಪಥಸಂಚಲನ, ಸಾಂಸ್ಕೃತಿಕ ವೈಭವ, ರಾಷ್ಟ್ರ ಪ್ರೇಮದ ದ್ಯೋತಕವಾಗಿದ್ದವು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯೆ ತಾರಾ ಪ್ರಕಾಶ್ಚಂದ್ರ ಶೆಟ್ಟಿ, ಶ್ರೀನಿವಾಸ್ ರಾವ್, ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಡಾ. ಅನುಷಾ ಸುಬ್ರಹ್ಮಣ್ಯಂ, ಉಪಾಧ್ಯಕ್ಷೆ ರೇವತಿ ಕೆ., ಶ್ರೀಮಾ ಪ್ರಣವ್ ಶೆಟ್ಟಿ, ತ್ಯಾಗೀಶ್ಚಂದ್ರ ಶೆಟ್ಟಿ, ಶಾಲೆಯ ಶಿಕ್ಷಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಚಿವ ಬಿ.ನಾಗೇಂದ್ರ ವಜಾಕ್ಕೆ ಆಗ್ರಹ
ರೋಗ ನಿರೋಧಕ ಶಕ್ತಿ ವೃದ್ಧಿಗೆ ಇಮ್ಯೂನಿಟಿ ಬೂಸ್ಟರ್ ಕಿಟ್‌ ಬಳಸಿ