ಉದ್ಯಾವರ ಎಸ್‌ಡಿಎಂ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

KannadaprabhaNewsNetwork |  
Published : Aug 17, 2026, 03:00 AM IST
15ಎಸ್‌ಡಿಎಂ | Kannada Prabha

ಸಾರಾಂಶ

ಉಡುಪಿ: ಇಲ್ಲಿನ ಉದ್ಯಾವರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಉಡುಪಿ: ಇಲ್ಲಿನ ಉದ್ಯಾವರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಲೆಫ್ಟಿನೆಂಟ್ ಕಮಾಂಡರ್ ಮಹ್‌ಮ್ಮದ್ ಯಾಸಿನ್ ಅಪ್ಪಸಾಬ್ ಮುಲ್ತಾನಿ ಉಡುಪಿ, ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು. ಅವರು ತಮ್ಮ ಭಾಷಣದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಆಡಳಿತಾತ್ಮಕ ಹುದ್ದೆಗಳಲ್ಲಿ ನೇಮಕ ಕುರಿತು ನೆರೆದಿದ್ದ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾಲೇಜಿನ ನಿವೃತ್ತ ವೈದ್ಯಕೀಯ ಅಧೀಕ್ಷಕ ಡಾ. ಮುರಳೀಧರ ಶರ್ಮ ಅವರು ಸ್ವಾತಂತ್ರ್ಯವು ಸ್ವೇಚ್ಛಾಚಾರವಾಗದೆ ವಿದ್ಯಾರ್ಥಿಗಳಲ್ಲಿ ಶಿಸ್ತನ್ನು ಬೆಳೆಸುವ ಮೂಲಕ ಅಭಿವೃದ್ಧಿಗೆ ಪೂರಕವಾಗಿರಬೇಕು ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲೆ ಡಾ. ಮಮತಾ ಕೆ.ವಿ.ಯವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಸ್ವರಾಜ್ಯವು 2047 ಕ್ಕೆ ಸುರಾಜ್ಯವಾಗಲೆಂದು ಶುಭ ಹಾರೈಸಿದರು. ದೈಹಿಕ ಶಿಕ್ಷಕ ಅನೀಶ್ ಕೆ. ಅವರು ಧ್ವಜಾರೋಹಣ ಮತ್ತು ಧ್ವಜವಂದನಾ ಕಾರ್ಯಕ್ರಮ ನಿರ್ವಹಿಸಿದರು.

ಕ್ಲಿನಿಕಲ್ ವಿಭಾಗದ ಉಪಪ್ರಾಂಶುಪಾಲ ಡಾ. ನಿರಂಜನ್ ರಾವ್, ಶೈಕ್ಷಣಿಕ ವಿಭಾಗದ ಉಪಪ್ರಾಂಶುಪಾಲ ಡಾ. ನಾಗರಾಜ್ ಎಸ್., ವೈದ್ಯಕೀಯ ಅಧೀಕ್ಷಕ ಡಾ. ಜಯಕೃಷ್ಣ ನಾಯಕ್, ಆಯುರ್ವೇದ ಫಾರ್ಮಸಿಯ ಮುಖ್ಯ ವ್ವಸ್ಥಾಪಕ ಡಾ. ಮುರಳೀಧರ ಆರ್. ಬಲ್ಲಾಳ್, ಸ್ನಾತಕ ವಿಭಾಗದ ಡೀನ್ ಡಾ. ಪ್ರಥ್ವಿರಾಜ್ ಪುರಾಣಿಕ್, ಸಮುದಾಯ ಸೇವಾ ವಿಭಾಗದ ಮುಖ್ಯಸ್ಥೆ ಡಾ. ವಿದ್ಯಾಲಕ್ಷ್ಮಿ ಕೆ., ಎನ್.ಎಸ್.ಎಸ್. ಅಧಿಕಾರಿ ಡಾ. ಶ್ರೀನಿಧಿ ಧನ್ಯ, ಬೋಧಕ, ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅಭಿಷೇಕ್ ಸ್ವಾಗತಿಸಿ, ಮೊನಿಷಾ ವಂದಿಸಿ, ರಕ್ಷಿತಾ ಪ್ರಭು ಕಾರ್ಯಕ್ರಮವನ್ನು ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾಹೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ
ಸಿದ್ದಾಪುರದ ವಿವಿಧೆಡೆ ಸ್ವಾತಂತ್ರ್ಯ ದಿನಾಚರಣೆ