ಸ್ವಾತಂತ್ರೋತ್ಸವ ಹಬ್ಬದಂತೆ ಆಚರಿಸುತ್ತಿಲ್ಲ

KannadaprabhaNewsNetwork | Published : Aug 17, 2024 12:57 AM

ಸಾರಾಂಶ

ಯಾವುದೇ ಧಾರ್ಮಿಕ ಹಬ್ಬಗಳಿಗಿಂತ ದೇಶಕ್ಕೆ ಸ್ವಾತಂತ್ರ್ಯ ದಿನವನ್ನು ವಿಶೇಷವಾಗಿ ಆಚರಣೆ ಮಾಡಬೇಕು. ಆದರೆ ಇದು ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿಗಳಿಗೆ ಮಾತ್ರ ಸೀಮಿತವಾಗಿದೆ. ಬಹುತೇಕರಿಗೆ ಸ್ವಾತಂತ್ರ್ಯದಿನಾಚರಣೆ ಬೇಕೋ ಬೇಡವೋ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ

ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ

ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಇಂತಹ ಮಹನೀಯರ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಬೇಕಾಗದ ಅಗತ್ಯವಿದೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.

ಪಟ್ಟಣದ ಸರ್ಕಾರಿ ಬಾಲಕಿಯರ ಶಾಲಾ ಸಂರ್ಕೀಣದಲ್ಲಿ ಆಯೋಜಿಸಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ನಮ್ಮ ದೇಶಕ್ಕೆ ಸುಖಾಸುಮ್ಮನೆ ಸ್ವಾತಂತ್ರ್ಯ ಬಂದಿಲ್ಲ. ಇದಕ್ಕಾಗಿ ಲಕ್ಷಾಂತರ ಜನರು ಪ್ರಾಣ ತೆತ್ತಿದ್ದಾರೆ ಎಂದರು.

ಹಬ್ಬದಂತೆ ಆಚರಿಸಬೇಕು

ಯಾವುದೇ ಧಾರ್ಮಿಕ ಹಬ್ಬಗಳಗಿಂತ ದೇಶಕ್ಕೆ ಸ್ವಾತಂತ್ರ್ಯ ಬಂದ ದಿನವನ್ನು ವಿಶೇಷವಾಗಿ ಆಚರಣೆ ಮಾಡಬೇಕಾಗಿದೆ ಆದರೆ ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿಗಳಿಗೆ ಮಾತ್ರ ಸೀಮಿತವಾಗಿದೆ. ಬಹುತೇಕರಿಗೆ ಸ್ವಾತಂತ್ರ್ಯದಿನಾಚರಣೆ ಬೇಕೋ ಬೇಡವೋ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೊಸವರ್ಷ ಆಚರಣೆಯನ್ನು ವಿಜೃಂಭಣೆಯಿಂದ ಆಚರಣೆ ಮಾಡುವ ನಾವು ದೇಶಕ್ಕೆ ಸ್ವಾತಂತ್ರ್ಯಬಂದಿರುವ ದಿನವನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡುವುದಕ್ಕೆ ಆಸಕ್ತಿ ತೋರಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು ಮುಂದಿನ ದಿನಗಳಲ್ಲಿ ನಮ್ಮ ಮನೆ ಹಬ್ಬದ ರೀತಿಯಲ್ಲಿ ಆಚರಣೆ ಮಾಡುವಂತೆ ಮನವಿ ಮಾಡಿದರು.

ಕ್ಷೇತ್ರಾಭಿವೃದ್ಧಿಗೆ ₹150 ಕೋಟಿ

ಕ್ಷೇತ್ರದಲ್ಲಿ ರಸ್ತೆ, ಶಿಕ್ಷಣ ಸೇರಿದಂತೆ ಕ್ಷೇತ್ರದ ಅಭಿವೃದ್ದಿಪಡಿಸುವುದೇ ನನ್ನ ಮುಖ್ಯ ಗುರಿಯಾಗಿದೆ. ಕ್ಷೇತ್ರದ ಅಭಿವೃದ್ದಿಗಾಗಿ 150ಕ್ಕೂ ಕೋಟಿಗೂ ಹೆಚ್ಚಿನ ಅನುದಾನ ತಂದಿದ್ದೇನೆ. ನನ್ನ ಅಧಿಕಾರದ ಅವಧಿಯಲ್ಲಿ ಬಾಗೇಪಲ್ಲಿ ವಿಧಾನ ಸಭಾ ಕ್ಷೇತ್ರಕ್ಕೆ ಶಾಶ್ವತ ನೀರಾವರಿ ಮತ್ತು ಕೈಗಾರಿಕೆಗಳನ್ನು ಸ್ಥಾಪನೆ ಕಲ್ಪಿಸಲು ಸಾಧ್ಯವಾಗದಿದ್ದರೆ ಮುಂದಿನ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಮನಿಷಾ.ಎನ್., ತಾ.ಪಂ ಇಒ ರಮೇಶ್, ಬಿಇಒ ವೆಂಕಟೇಶಪ್ಪ, ಪೊಲೀಸ್ ಇನ್ಸ್‌ಪೆಕ್ಟರ್‌ ಪ್ರಶಾಂತ್ ವರ್ಣಿ, ಪುರಸಭೆ ಮುಖ್ಯಾಧಿಕಾರಿ ಎ.ಶ್ರೀನಿವಾಸ್, ಪುರಸಭೆ ಸದಸ್ಯರಾದ ಗಡ್ಡಂ ರಮೇಶ್, ಶ್ರೀನಿವಾಸರೆಡ್ಡಿ, ನಂಜುಂಡಪ್ಪ, ಶಭಾನಾ ಮತ್ತಿತರರು ಇದ್ದರು.

Share this article