ನಗರಸಭೆಯಾಗಿ ಮೇಲ್ದರ್ಜೆಗೇರಿದ ಇಂಡಿ ಪುರಸಭೆ

KannadaprabhaNewsNetwork |  
Published : Aug 08, 2025, 02:00 AM IST
ಇಂಡಿ | Kannada Prabha

ಸಾರಾಂಶ

ಶಾಸಕ ಯಶವಂತರಾಯಗೌಡ ಪಾಟೀಲ ಪರಿಶ್ರಮದಿಂದ ಇಂಡಿ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಪಟ್ಟಣದ ಗುರುವಾರ ನಡೆದ ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದೆ.

ಕನ್ನಡಪ್ರಭ ವಾರ್ತೆ ಇಂಡಿ

ಶಾಸಕ ಯಶವಂತರಾಯಗೌಡ ಪಾಟೀಲ ಪರಿಶ್ರಮದಿಂದ ಇಂಡಿ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಪಟ್ಟಣದ ಗುರುವಾರ ನಡೆದ ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದೆ. ಈ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.

ಪಟ್ಟಣದ ಮುಖ್ಯ ರಸ್ತೆಯ ಜಗಜ್ಯೋತಿ ಬಸವೇಶ್ವರ ವೃತ್ತದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಸಂಭ್ರಮಾಚರಣೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೇದ ಮೋಮಿನ ಮಾತನಾಡಿ, ಪಟ್ಟಣದ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದಕ್ಕಾಗಿ ಶಾಸಕ ಯಶವಂತರಾಯಗೌಡ ಪಾಟೀಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರಿಗೆ ಪಟ್ಟಣದ ಜನತೆ ಹಾಗೂ ಪುರಸಭೆಯಿಂದ ಅಭಿನಂದಿಸುವುದಾಗಿ ಹೇಳಿದರು.

ಇಂಡಿ ಇತಿಹಾಸದಲ್ಲಿ ಸುವರ್ಣ ಅಕ್ಷರಗಳಲ್ಲಿ ಬರೆದಿಡಬಹುದಾದ ದಿನವಾಗಿದೆ. ಶಾಸಕರ ಸತತ ಪರಿಶ್ರಮ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಹಕಾರದಿಂದ ನಗರಸಭೆಯಾಗಿ ಮೇಲ್ದರ್ಜೆಗೆ ಏರಿದೆ. ಇದುವರೆಗೂ ಪಟ್ಟಣ ಎಂದು ಕರೆಯುತ್ತಿದ್ದ ನಾವು ಇಂದಿನಿಂದ ಇಂಡಿ ನಗರವಾಗಿದೆ ಎಂದರು.

ಇಂಡಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಮಿತಿ ಅಧ್ಯಕ್ಷ ಪ್ರಶಾಂತ ಕಾಳೆ ಮಾತನಾಡಿ, ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಶಾಸಕರ ಅಭಿವೃದ್ಧಿಯನ್ನು ಪ್ರಶ್ನಿಸಿರುವ ವಿರೋಧ ಪಕ್ಷದವರಿಗೆ ಇದು ಎಚ್ಚರಿಕೆ ಗಂಟೆಯಾಗಿದೆ ಎಂದರು. ಎರಡ್ಮೂರು ವರ್ಷಗಳಿಂದ ನಗರಸಭೆಯಾಗಿ ಮೇಲ್ದರ್ಜೆಗೇರಿಸಲು ಸರ್ಕಾರಕ್ಕೆ ಶಾಸಕರ ಬೇಡಿಕೆಯಿತ್ತು. ಪುರಸಭೆ ಸಾಮಾನ್ಯ ಸಭೆಗಳಲ್ಲಿ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಶಾಸಕರಾದ ಯಶವಂತರಾಯಗೌಡ ಪಾಟೀಲ ಅವರು ಸರ್ಕಾರದ ಗಮನ ಸೆಳೆದು, ನಗರಸಭೆಯಾಗಿ ಮೇಲ್ದರ್ಜೆಗೇರಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ ಮಾತನಾಡಿ, 2011ರ ಜನಸಂಖ್ಯೆಯಂತೆ ಪಟ್ಟಣದಲ್ಲಿ 38217 ಜನಸಂಖ್ಯೆಯಿತ್ತು. ಈಗ 59302 ದಾಟಿದೆ. 27.38 ಚದರ ಕಿ.ಮೀ. ಪ್ರದೇಶ ಹೊಂದಿದ್ದು, ರಾಜಸ್ವ ಸ್ವೀಕೃತಿ, ವರಮಾನ, ಜನಸಂಖ್ಯೆ ಸೇರಿ ಹಲವು ಅಂಶಗಳನ್ನು ಪರಿಗಣಿಸಿ ಸರ್ಕಾರ ಮೇಲ್ದರ್ಜೆಗೇರಿಸಲು ನಿರ್ಧರಿಸಿದೆ ಎಂದರು.

ಸಂಭ್ರಮಾಚರಣೆಯಲ್ಲಿ ಪುರಸಭೆ ಉಪಾಧ್ಯಕ್ಷ ಜಹಾಂಗೀರ ಸೌದಾಗರ, ಭೀಮಾಶಂಕರ ಮೂರಮನ, ಜಟ್ಟೆಪ್ಪ ರವಳಿ, ಭೀಮಣ್ಣ ಕವಲಗಿ, ಸದಾಶಿವ ಪ್ಯಾಟಿ, ಶಬ್ಬಿರ ಖಾಜಿ, ಅಸ್ಲಮ ಕಡಣಿ, ಶ್ರೀಕಾಂತ ಕುಡಿಗನೂರ, ಅನೀಲಗೌಡ ಬಿರಾದಾರ, ಸಂತೋಷ ಪರಸೆನವರ, ಶ್ರೀಶೈಲ ಪೂಜಾರಿ, ಸುಧೀರ ಕರಕಟ್ಟಿ, ಅಯೂಬ ಬಾಗವಾನ, ಲಕ್ಕಪ್ಪ ಪೂಜಾರಿ, ಉಸ್ಮಾನಗಣಿ ಶೇಖ, ಸತೀಶ ಕುಂಬಾರ, ಮಹೇಶ ಕುಂಬಾರ, ಭೀಮು ಮಸಳಿ, ರವಿಗೌಡ ಪಾಟೀಲ, ಇಮ್ರಾನ ಮಕಂದಾರ, ಸುಭಾಷ ಬಾಬರ ಮೊದಲಾದವರಿದ್ದರು.

PREV

Recommended Stories

3ನೇ ಮಹಡಿಯಿಂದ ಆಯತಪ್ಪಿಬಿದ್ದು ಪಿಯು ವಿದ್ಯಾರ್ಥಿನಿ ಸಾವು
ಜೈಲೊಳಗೆ ಡ್ರಗ್ಸ್ ಸಾಗಿಸಲುಯತ್ನ: ವಾರ್ಡನ್ ಬಂಧನ