ಭಟ್ಕಳ: ತಾಲೂಕು ಆಡಳಿತ, ತಾಪಂ, ಪುರಸಭೆ, ಜಾಲಿ ಪಪಂ, ಸಮಾಜ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ೧೩೪ನೇ ಜನ್ಮ ದಿನಾಚರಣೆ ಹಾಗೂ ಡಾ. ಬಾಬು ಜಗಜೀವನರಾಂ ೧೧೮ನೇ ಜನ್ಮ ದಿನಾಚರಣೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ತಾಪಂ ಪ್ರಭಾರ ಇಒ ವೆಂಕಟೇಶ ನಾಯಕ ಉದ್ಘಾಟಿಸಿದರು.
ವಕೀಲ ರವೀಂದ್ರ ಎಸ್.ಎಂ. ಡಾ. ಅಂಬೇಡ್ಕರ್ ಕುರಿತು ಉಪನ್ಯಾಸ ನೀಡುತ್ತಾ, ಸಮಾಜದಲ್ಲಿ ಎಲ್ಲರೂ ಸಮಾನರಾಗಿ ಬದುಕುವ ಹಕ್ಕನ್ನು ಖಾತರಿಪಡಿಸಿದ ಬಾಬಾಸಾಹೇಬರು ನಮ್ಮೆಲ್ಲರಿಗೂ ಮಾರ್ಗದರ್ಶಕರಾಗಿದ್ದಾರೆ ಎಂದರು.
ಆರ್.ಎನ್.ಎಸ್. ರೂರಲ್ ಪಾಲಿಟೆಕ್ನಿಕ್ ಕಾಲೇಜಿನ ಉಪಪ್ರಾಂಶುಪಾಲ ಡಾ. ಮರಿಸ್ವಾಮಿ ಮಾತನಾಡಿದರು.ವೇದಿಕೆಯಲ್ಲಿ ಪುರಸಭಾ ಮುಖ್ಯಾಧಿಕಾರಿ ವೆಂಕಟೇಶ ನಾವುಡ, ನೌಕರರ ಸಂಘದ ಅಧ್ಯಕ್ಷ ಎಂ.ಎನ್. ನಾಯ್ಕ, ದಲಿತ ಮುಖಂಡ ಮಾರುತಿ ಪಾವಸ್ಕರ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.
ಕ್ಷೇತ್ರ ಸಂಪನ್ಮೂಲಾಧಿಕಾರಿ ವನಿತಾ ಎಚ್. ಡಾ. ಬಾಬು ಜಗಜೀವನರಾಂ ಕುರಿತು ಉಪನ್ಯಾಸ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ಗೀತಾ ಹೆಡಗೆ ಸ್ವಾಗತಿಸಿದರು. ಶಿಕ್ಷಕ ಸುರೇಶ ಮುರುಡೇಶ್ವರ ನಿರೂಪಿಸಿದರು. ತಹಸಿಲ್ದಾರ್ ಕಚೇರಿಯ ತಿಪ್ಪಣ್ಣ ಕೊಡತಗೇರಿ ವಂದಿಸಿದರು.