ಶಾಂತಿ ಹೋರಾಟದಿಂದ ಭಾರತ ದೇಶಕ್ಕೆ ಸ್ವಾತಂತ್ರ್ಯ: ಶಾಸಕ ಬಸವರಾಜು ವಿ.ಶಿವಗಂಗಾ

KannadaprabhaNewsNetwork |  
Published : Oct 03, 2025, 01:07 AM IST
ಪಟ್ಟಣದ ತಾಲೂಕು ಕಛೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಮಹಾತ್ಮಗಾಂಧಿಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತ್ಯೋತ್ಸವದ ನಿಮಿತ್ತವಾಗಿ ಗಾಂಧಿಜಿ ಮತ್ತು ಶಾಸ್ತ್ರಿಜಿ ಅವರ ಭಾವಚಿತ್ರಕ್ಕೆ ಪುಪ್ಪ ನಮನ ಸಲ್ಲಿಸಿದ ಶಾಸಕ ಬಸವರಾಜು ವಿ.ಶಿವಗಂಗಾ | Kannada Prabha

ಸಾರಾಂಶ

ಸರ್ಕಾರದ ವತಿಯಿಂದ ಆಚರಣೆ ಮಾಡುವ ಪ್ರತಿಯೊಂದು ಜಯಂತಿಗಳಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕಾಗಿದ್ದು ಯಾರಾದರೂ ಅಧಿಕಾರಿಗಳು ಗೈರು ಹಾಜರಾದರೆ ಅವರಿಗೆ ತಹಸೀಲ್ದಾರರು ಕಾರಣ ಕೇಳಿ ನೋಟಿಸ್ ನೀಡಬೇಕು ಎಂದು ಶಾಸಕ ಬಸವರಾಜು ವಿ.ಶಿವಗಂಗಾ ಹೇಳಿದರು.

ಕನ್ನಡಪ್ರಭ ವಾರ್ತೆ ಚನ್ನಗಿರಿ

ಸರ್ಕಾರದ ವತಿಯಿಂದ ಆಚರಣೆ ಮಾಡುವ ಪ್ರತಿಯೊಂದು ಜಯಂತಿಗಳಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕಾಗಿದ್ದು ಯಾರಾದರೂ ಅಧಿಕಾರಿಗಳು ಗೈರು ಹಾಜರಾದರೆ ಅವರಿಗೆ ತಹಸೀಲ್ದಾರರು ಕಾರಣ ಕೇಳಿ ನೋಟಿಸ್ ನೀಡಬೇಕು ಎಂದು ಶಾಸಕ ಬಸವರಾಜು ವಿ.ಶಿವಗಂಗಾ ಹೇಳಿದರು.

ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರೀಜಿ ಜಯಂತಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಮಹಾತ್ಮಗಾಂಧೀಜಿ ಶಿಸ್ತು, ಶಾಂತಿ ಸಮಯ ಪ್ರಜ್ಞೆ ಪಾಲಿಸುತ್ತಿದ್ದರು. ಆದರೆ ಅವರ ಹುಟ್ಟು ಹಬ್ಬದ ಆಚರಣೆಗೆ ಅಧಿಕಾರಿಗಳೇ ಸಮಯಕ್ಕೆ ಸರಿಯಾಗಿ ಬರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಮ್ಮ ದೇಶಕ್ಕೆ ಬಂದೂಕು, ಪಿಸ್ತೂಲು, ಬಾಂಬ್ ಗಳಿಂದ ಸ್ವಾತಂತ್ರ ಸಿಕ್ಕಿಲ್ಲ ನಮಗೆ ಸ್ವಾತಂತ್ರ್ಯ ಸಿಕ್ಕಿರುವುದು ಶಾಂತಿಯ ಹೋರಾಟದಿಂದ. ನಾನು ಶಾಸಕ ನಾದ ಮೇಲೆ ಚನ್ನಗಿರಿ ತಾಲೂಕು ಶಾಂತಿಯುತವಾಗಿದ್ದು ಸರ್ವ ಧರ್ಮದ ಜನರನ್ನು ಪ್ರೀತಿಸುತ್ತ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತಿದ್ದೇನೆ ಎಂದರು.

ತಹಸೀಲ್ದಾರ್ ಎನ್.ಜೆ.ನಾಗರಾಜ್ ಮಾತನಾಡಿ, ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಸರಳ ವ್ಯಕ್ತಿತ್ವ ಹೊಂದಿದ ಮಹಾನ್ ನಾಯಕರಾಗಿದ್ದು ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಮುನ್ನಡೆಯಬೇಕು ಎಂದರು.

ಸಮಾರಂಭಕ್ಕೂ ಮುನ್ನ ಮಹಾತ್ಮ ಗಾಂಧಿಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಭಾವಚಿತ್ರಕ್ಕೆ ಪುಪ್ಪ ನಮನ ಸಲ್ಲಿಸಲಾಯಿತು.

ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಪ್ಪ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗಣೇಶ್, ತಾ.ಪಂ ಕಾರ್ಯನಿರ್ವಾಣಾಧಿಕಾರಿ ಪ್ರಕಾಶ್, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀಕಾಂತ್, ಹಿಂದುಳಿದ ವರ್ಗಗಳ ಅಧಿಕಾರಿ ರವೀಂದ್ರಕುಮಾರ್ ಅಥರ್ಗಾ, ಪುರಸಭೆಯ ಮುಖ್ಯಾಧಿಕಾರಿ ಕೃಷ್ಣ ಡಿ.ಕಟ್ಟಿಮನಿ, ಹಿರಿಯ ಆರೋಗ್ಯ ನಿರೀಕ್ಷಕ ಶಿವರುದ್ರಪ್ಪ ಮೊದಲಾದವರು ಹಾಜರಿದ್ದರು.

PREV

Recommended Stories

ಸರ್ಕಾರಿ ನೌಕರರ ಸೊಸೈಟಿಗೆ 50.58 ಲಕ್ಷ ಲಾಭ
ಡಿಸಿಸಿ ಬ್ಯಾಂಕ್‌ಗೆ ಅಣ್ಣಾಸಾಹೇಬ್ ಜೊಲ್ಲೆ ಆಯ್ಕೆ ನಿಶ್ಚಿತ