ಭಾರತ ಅತ್ಯಂತ‌ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಬೆಳೆದಿದೆ: ಎಸಿ ಕೆ. ಮಹೇಶ್ಚಂದ್ರ

KannadaprabhaNewsNetwork |  
Published : Aug 16, 2024, 12:47 AM IST
ಪಥಸಂಚಲನದಲ್ಲಿ ಕುಂದಾಪುರ ಪುರಸಭೆಯ ಪೌರಕಾರ್ಮಿಕ ತಂಡ ಭಾಗವಹಿಸಿ ಸಾರ್ವಜನಿಕರ ಗಮನ ಸೆಳೆಯಿತು. | Kannada Prabha

ಸಾರಾಂಶ

ಕುಂದಾಪುರ ತಾಲೂಕು ಆಡಳಿತದ ವತಿಯಿಂದ ಗಾಂಧಿ ಮೈದಾನದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಕೆ. ಮಹೇಶ್ಚಂದ್ರ ಧ್ವಜಾರೋಹಣ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಕುಂದಾಪುರ

ಬ್ರಿಟಿಷರು ತಮ್ಮ ಅರ್ಥಹೀನ ಆದರ್ಶವನ್ನು ಪಾಲಿಸುವ ಸಲುವಾಗಿ ಭಾರತೀಯರನ್ನು ಗುಲಾಮರಿಗಿಂತ‌ ಅತ್ಯಂತ‌ ಕೀಳಾಗಿ‌ ನಡೆಸಿಕೊಂಡಿದ್ದರು. ಹಲವಾರು ಹೋರಾಟಗಾರರ ತ್ಯಾಗ-ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಇಂದು ನಮ್ಮ ದೇಶ ಸರಿಯಾದ ಅಭಿವೃದ್ಧಿಯ ಹಾದಿಯಲ್ಲಿದ್ದು, ವಿಶ್ವದಲ್ಲೇ ಅತ್ಯಂತ‌ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಬೆಳೆದು ನಿಂತಿದೆ ಎಂದು ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಕೆ. ಮಹೇಶ್ಚಂದ್ರ ಹೇಳಿದರು.ಅವರು ತಾಲೂಕು ಆಡಳಿತದ ವತಿಯಿಂದ ಗುರುವಾರ ಇಲ್ಲಿನ ಗಾಂಧಿ ಮೈದಾನದಲ್ಲಿ ಜರುಗಿದ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ಸಂದೇಶ ಸಾರಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಸ್ವಾತಂತ್ರ್ಯ ಪೂರ್ವದಲ್ಲಿ ದೇಶದ ಪರಿಸ್ಥಿತಿ ಹೇಗಿತ್ತು, ಬಳಿಕ ಹೇಗೆ ಅಭಿವೃದ್ದಿಯಾಗಿದೆ ಎಂಬುವುದನ್ನು ಇಂದಿನ‌ ಯುವಕರು, ವಿದ್ಯಾರ್ಥಿಗಳು ತಿಳಿಯುವುದು ಅವಶ್ಯಕ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅನೇಕ ಮಹಾನ್ ಚೇತನಗಳನ್ನು ಸ್ಮರಿಸಿಕೊಳ್ಳಬೇಕು. ಹೊಂದಾಣಿಕೆಯ ಮೂಲಕ ನಾವೆಲ್ಲರೂ ಒಗ್ಗಟ್ಟಾದಾಗ ನಮ್ಮ‌ ದೇಶ ಪ್ರಗತಿಯ ಪಥದತ್ತ ಸಾಗುತ್ತದೆ ಎಂದರು.2023 ನೇ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ತಾಲೂಕಿಗೆ ಗರಿಷ್ಠ ಅಂಕ ಪಡೆದ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್, ಬೆಳೆ ಯೋಜನೆಯಡಿ ರೈತರಿಗೆ ತಾಳೆ ಗಿಡಗಳನ್ನು ವಿತರಿಸಲಾಯಿತು. ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ‌ ವಿತರಿಸಲಾಗುವ ಟಾಕಿಂಗ್‌ ಲ್ಯಾಪ್ ಟಾಪ್, ಹೊಲಿಗೆ ಯಂತ್ರ ಹಾಗೂ ಶ್ರವಣ ಸಾಧನಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು.ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು., ತಾ.ಪಂ. ಇಒ ಶಶಿಧರ ಕೆ.ಜಿ, ಪುರಸಭೆ ಮುಖ್ಯಾಧಿಕಾರಿ ಆನಂದ ಜೆ., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಘವೇಂದ್ರ ವರ್ಣೇಕರ್, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ, ಮೀನುಗಾರಿಕಾ ಇಲಾಖೆಯ ಸಹಾಯಕ‌ ನಿರ್ದೇಶಕಿ ಸುಮಲತಾ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ರೂಪಾ ಮಾಡ, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ನಿಧೀಶ್, ಶಿಶು ಅಭಿವೃದ್ದಿ ಯೋಜನಾಧಿಕಾರಿ ಉಮೇಶ್ ಕೋಟ್ಯಾನ್, ಪುರಸಭಾ ಸದಸ್ಯರಾದ ದೇವಕಿ ಸಣ್ಣಯ್ಯ, ಚಂದ್ರಶೇಖರ ಖಾರ್ವಿ, ಸಂದೀಪ್ ಖಾರ್ವಿ, ಸಂತೋಷ್ ಶೆಟ್ಟಿ, ಪ್ರಭಾಕರ ವಿ, ಶ್ರೀಧರ ಶೇರಿಗಾರ್, ನಿತ್ಯಾನಂದ ಕೆ.ಜಿ, ವೀಣಾ ಭಾಸ್ಕರ್, ಪ್ರಭಾವತಿ ಶೆಟ್ಟಿ, ಶ್ವೇತಾ ಸಂತೋಷ್, ವನಿತಾ ಬಿಲ್ಲವ, ತಾಲೂಕು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಕುಸುಮಾಕರ್ ಶೆಟ್ಟಿ ಉಪಸ್ಥಿತರಿದ್ದರು.ತಹಸೀಲ್ದಾರ್ ಶೋಭಾಲಕ್ಷ್ಮೀ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಶೋಭಾ ಶೆಟ್ಟಿ ವಂದಿಸಿದರು. ಪತ್ರಕರ್ತ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.ಆಕರ್ಷಕ ಪಥಸಂಚಲನ:ಪೊಲೀಸ್ ತಂಡ, ಗೃಹ ರಕ್ಷಕದಳ, ಕುಂದಾಪುರದ ವಿವಿಧ ಶಾಲೆಗಳ ಎನ್.ಸಿ.ಸಿ, ಸ್ಕೌಟ್-ಗೈಡ್ಸ್ ತಂಡಗಳು ಹಾಗೂ ಪೌರ ಕಾರ್ಮಿಕರ ತಂಡ ಪಥಸಂಚಲನದಲ್ಲಿ ಪಾಲ್ಗೊಂಡರು. ಗಂಗೊಳ್ಳಿ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಬಸವರಾಜ್ ಕನಶೆಟ್ಟಿ ಪಥಸಂಚಲನದ ನೇತೃತ್ವ ವಹಿಸಿದರು. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

PREV

Recommended Stories

ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ
ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ