ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ 110ನೇ ಜಯಂತಿ ಮಹೋತ್ಸವದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅಭಿಮತ । ಸಮಾಜಕ್ಕೆ ಕೊಡುಗೆ ನೀಡುವಂತರಾಗಿ
ಭಾರತ ಸಾಧು ಸಂತರ ಭವ್ಯ ಪರಂಪರೆಯನ್ನು ಹೊಂದಿರುವ, ಆಧ್ಯಾತ್ಮಿಕತೆ ತುಂಬಿರುವ ದೇಶವಾಗಿದೆ ಎಂದು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ತಿಳಿಸಿದರು.
ಪಟ್ಟಣದ ಶ್ರೀ ಮಲೆ ಮಹದೇಶ್ವರ ಕ್ರೀಡಾoಗಣದಲ್ಲಿ ಹಮ್ಮಿಕೊಂಡಿದ್ದ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 110ನೇ ಜಯಂತಿ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ ಮಾಡಿ ನಂತರ ಮಾತನಾಡಿದರು.ಈ ದೇಶದ ಪ್ರತಿಯೊಬ್ಬ ಪ್ರಜೆಯಲ್ಲೂ ಸಹ ಧಾರ್ಮಿಕತೆ ತುಂಬಿ ತುಳುಕುತ್ತಿದೆ. ಜಗತ್ತನ್ನು ಸೃಷ್ಟಿ ಮಾಡಿದ ಭಗವಂತನ ಮೇಲೆ ಅಪಾರವಾದ ಭಕ್ತಿ ಇದೆ. ಇಡೀ ದೇಶದಲ್ಲಿ ಕಣ್ಣಿಗೆ ಕಾಣುವ ಅನೇಕ ವೈಜ್ಞಾನಿಕ ಸಂಶೋಧನೆಗಳನ್ನು ವಿಜ್ಞಾನಿಗಳು ಮಾಡಿದರೆ ಅಂತರಂಗದ ಸಂಶೋಧನೆಯನ್ನು ಸಾಧು ಸಂತರು ಮಾಡಿದ್ದಾರೆ.
ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಮಾತನಾಡಿ, ಮಹಾತ್ಮರ ನೀಡಿರುವ ಮಾರ್ಗ ನಮ್ಮ ಬದುಕಿಗೆ ಯಾವಾಗಲು ಬೆಳಕಾಗಿದೆ ಎಂದರೆ ತಪ್ಪಾಗಲಾರದು. ಧಾರ್ಮಿಕ ಸಾಮಾಜಿಕ ಶೈಕ್ಷಣಿಕ ಕ್ರಾಂತಿ ಉಂಟು ಮಾಡಿದ ಸಂಸ್ಥೆ ಗಳಲ್ಲಿ ಜೆ ಎಸ್ ಎಸ್ ಸಂಸ್ಥೆ ಮೊದಲ ಸಾಲಿನಲ್ಲಿ ಇರುತ್ತದೆ.ಡಾ ರಾಜೇಂದ್ರ ಮಹಾಸ್ವಾಮಿಗಳು ಅತ್ಯಂತ ಮೃದು ಸ್ವಭಾವಿ ಈ ನಾಡಿಗೆ ಕಷ್ಟದ ಹಾದಿಯಲ್ಲಿ ಬೆಳಕನ್ನು ಕೊಟ್ಟವರು ಸುತ್ತೂರು ಶ್ರೀ ಗಳು. ಮಹಾತ್ಮರು ಪರೋಪಕಾರಕ್ಕಾಗಿ ಹುಟ್ಟಿದವರು. ಇವರು ಹಾಕಿ ಕೊಟ್ಟಂತಹ ಮಾರ್ಗದಲ್ಲಿ ನಾವೆಲ್ಲರೂ ಸಹ ನಡೆದುಕೊಂಡು ಹೋಗಬೇಕಾಗಿದೆ ಎಂದರು.
ಬಹಳ ಮುಖ್ಯವಾಗಿ ಹನೂರು ತಾಲೂಕಿನ ಜೀವನಾಡಿ ಕಾವೇರಿ ನದಿಯಿಂದ ನೀರು ತರಲು ನಾನು ಸಹ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಹಾಗಾಗಿ ರೈತರು ನಡೆಸುತ್ತಿರುವ ಧರಣಿ ಕೈಬಿಡಬೇಕು ಎಂದರು. ಮಾಜಿ ಶಾಸಕ ನರೇಂದ್ರ ಮಾತನಾಡಿ, ತಾಲೂಕಿನಲ್ಲಿ ರಾಜೇಂದ್ರ ಮಹಾಸ್ವಾಮಿಗಳ ನೂರತ್ತನೆ ದಶಮಾನೋತ್ಸವ ಕಾರ್ಯಕ್ರಮ ನಡೆಸುತ್ತಿರುವುದು ನಮ್ಮೆಲ್ಲರ ಸೌಭಾಗ್ಯ. ಸಮಾಜದ ಸೇವೆಗೆ ತಮ್ಮನ್ನು ತಾವು ಮುಡಿಪಾಗಿದ್ದರು. ಈ ಸಮಾಜಕ್ಕೆ ಉತ್ತಮ ಸೇವೆಗಳನ್ನು ನೀಡಿದ್ದಾರೆ ಎಂದು ತಿಳಿಸಿದರು.
-----
ಹನೂರಿನಲ್ಲಿ ಶಿವರಾತ್ರಿ ರಾಜೇಂದ್ರ ಶ್ರೀ ದಶಮಾನೋತ್ಸವ ಕಾರ್ಯಕ್ರಮವನ್ನು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಜಿ ಸೇರಿದಂತೆ ಗಣ್ಯರು ಉದ್ಘಾಟನೆ ಮಾಡಿದರು.