ಕನ್ನಡಪ್ರಭ ವಾರ್ತೆ ಶಿರಾ
ಅವರು ನಗರದ ಸೇವಾ ಸದನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಕಳೆದ ೧೨ ವರ್ಷಗಳಿಂದಲೂ ಜನರ ವಿಶ್ವಾಸ ಗಳಿಸಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಜನ ಉಪಯೋಗಿ ಯೋಜನೆಗಳನ್ನು ಜಾರಿ ತರುತ್ತ, ದೂರದೃಷ್ಟಿ ಇಟ್ಟುಕೊಂಡು ಅಭಿವೃದ್ಧಿ ಮಾಡಿದ್ದಾರೆ. ಭಾರತವು ವಿಶ್ವದ ಅತಿವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಗಳಲ್ಲಿ ಒಂದಾಗಿದೆ. ದೇಶದಲ್ಲಿ ಹೆದ್ದಾರಿಗಳು, ಬಂದರುಗಳು ಮತ್ತು ರೈಲ್ವೆ ಜಾಲಗಳಂತಹ ಬೃಹತ್ ಮೂಲಸೌಕರ್ಯಗಳ ನಿರ್ಮಾಣ ನಡೆಯುತ್ತಿದೆ. ಡಿಜಿಟಲ್ ಇಂಡಿಯಾ ಯುಪಿಐ ಪಾವತಿ ವ್ಯವಸ್ಥೆ ಮತ್ತು ಪ್ರಧಾನ ಮಂತ್ರಿ ಜನಧನ್ ಯೋಜನೆ ಮೂಲಕ ೩೨ ಕೋಟಿ ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವ ಮೂಲಕ ಆರ್ಥಿಕ ಸೇರ್ಪಡೆ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಿದೆ. ಉಜ್ವಲ ಯೋಜನೆ ಸ್ವಚ್ಛ ಭಾರತ್ ಅಭಿಯಾನ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆಗಳ ಮೂಲಕ ಮನೆಗಳ ನಿರ್ಮಾಣ ಮಾಡಿ ಬಡವರ ಜೀವನಮಟ್ಟವನ್ನು ಸುಧಾರಿಸಿದೆ.
ಪಿಎಂ ಕಿಸಾನ್ ಯೋಜನೆ ಮೂಲಕ ರೈತರಿಗೆ ವರ್ಷಕ್ಕೆ ೬೦೦೦ ರು. ನೇರ ನಗದು ವರ್ಗಾವಣೆಯಿಂದಾಗಿ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ ಸರಕಾರದ ಸವಲತ್ತುಗಳನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸಲಾಗುತ್ತಿದೆ. ಸಬ್ ಕಾ ಸಾತ್ ಸಬ್‌ಕಾ ವಿಕಾಸ್ ಯೋಜನೆ, ಆಯುಷ್ಮಾನ್ ಭಾರತ್ ಯೋಜನೆ, ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆ, ಜಲ್ ಜೀವನ್ ಮೀಷನ್ ಯೋಜನೆ, ಪಿಎಂ ಸ್ವನಿಧಿ ಯೋಜನೆ, ಪಿಎಂ ವಿಶ್ವಕರ್ಮ ಯೋಜನೆ, ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ, ಲಕ್‌ಪತಿ ದೀದಿ ಯೋಜನೆ, ಸುಕನ್ಯಾ ಸಮೃದ್ಧಿ ಯೋಜನೆ, ಗ್ರಾಮೀಣ ಸಡಕ್ ಯೋಜನೆ, ಅಮೃತ್ ಭಾರತ್ ಸ್ಟೇಷನ್ ಯೋಜನೆ, ಉಡಾನ್ ಯೋಜನೆ, ಪಂಚತೀರ್ಥ ಅಭಿಯಾನ್ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಕಳೆದ ೧೨ ವರ್ಷಗಳಲ್ಲಿ ಪ್ರಧಾನಮಂತ್ರಿ ಮೋದಿ ನೇತೃತ್ವದ ಎನ್‌ಡಿಎ ಸರಕಾರವು ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಶ್ರಮಿಸುತ್ತಿದೆ. ಮೋದಿಜೀ ಅವರ ಆಡಳಿತವನ್ನು ಬೇರೆ ದೇಶದವರು ಹೊಗಳುತ್ತಿದ್ದಾರೆ. ಮೋದಿಯವರು ಭಾರತ ದೇಶಕ್ಕೆ ಗೌರವ ತರುವ ಕೆಲಸ ಮಾಡುತ್ತಿದ್ದಾರೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಂಜಲಗೆರೆ ಮೂರ್ತಿ, ಉಪಾಧ್ಯಕ್ಷ ಹೊನ್ನಗೊಂಡನಹಳ್ಳಿ ಚಿಕ್ಕಣ್ಣ, ಕಾರ್ಯದರ್ಶಿ ಕುಮಾರ್ ಮಾಸ್ಟರ್, ತಾಲೂಕು ಪ್ರಧಾನ ಕಾರ್ಯದರ್ಶಿ ಭಾಸ್ಕರ್, ಮದ್ದಕನಹಳ್ಳಿ ರಂಗನಾಥ್, ಪದ್ಮ ಮಂಜುನಾಥ್, ನಾಗರತ್ನ, ಪುರುಷೋತ್ತಮ್, ಶಿವು ಸ್ನೇಹ ಪ್ರಿಯ, ಮೂಗನಹಳ್ಳಿ ರಾಮು ಸೇರಿದಂತೆ ಹಲವರು ಹಾಜರಿದ್ದರು.