ಭಾರತ ದೇಶ ಆರ್ಥಿಕವಾಗಿ ಅತೀ ವೇಗವಾಗಿ ಬೆಳೆಯುತ್ತಿದೆ-ಶಾಸಕ ಸಿ.ಸಿ. ಪಾಟೀಲ

KannadaprabhaNewsNetwork |  
Published : Aug 16, 2025, 12:00 AM IST
(15ಎನ್.ಆರ್.ಡಿ1 ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಸಿ.ಸಿ.ಪಾಟೀಲ ಮಾತನಾಡುತ್ತಿದ್ದಾರೆ.)  | Kannada Prabha

ಸಾರಾಂಶ

ವಿಶ್ವವೇ ಭಾರತದತ್ತ ತಿರುಗಿ ನೋಡುವಷ್ಟು ಭಾರತ ವೈಭವದಿಂದ ಬೆಳೆಯುತ್ತಿದೆ. ರಾಷ್ಟ್ರಧ್ವಜ ಮತ್ತು ರಾಷ್ಟ್ರ ಲಾಂಛನಗಳು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿವೆ. ಸ್ವಾತಂತ್ರ್ಯಕ್ಕಾಗಿ ವೀರ ಮರಣವನ್ನಪ್ಪಿದ ಕ್ರಾಂತಿಕಾರಿ ಹೋರಾಟಗಾರರ ಸ್ಮರಣೆ ಅವಶ್ಯವಿದೆ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.

ನರಗುಂದ: ವಿಶ್ವವೇ ಭಾರತದತ್ತ ತಿರುಗಿ ನೋಡುವಷ್ಟು ಭಾರತ ವೈಭವದಿಂದ ಬೆಳೆಯುತ್ತಿದೆ. ರಾಷ್ಟ್ರಧ್ವಜ ಮತ್ತು ರಾಷ್ಟ್ರ ಲಾಂಛನಗಳು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿವೆ. ಸ್ವಾತಂತ್ರ್ಯಕ್ಕಾಗಿ ವೀರ ಮರಣವನ್ನಪ್ಪಿದ ಕ್ರಾಂತಿಕಾರಿ ಹೋರಾಟಗಾರರ ಸ್ಮರಣೆ ಅವಶ್ಯವಿದೆ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಅವರು ಶುಕ್ರವಾರ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ, ತಾಪಂ ಹಾಗೂ ಪುರಸಭೆ ಸಹಯೋಗದಲ್ಲಿ ನಡೆದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿ, ಆರ್ಥಿಕತೆಯಲ್ಲಿ ಭಾರತ ಜಗತ್ತಿನ ಮೂರನೇ ಅಭಿವೃದ್ಧಿ ಹೊಂದುತ್ತಿರುವ ಶಕ್ತಿಶಾಲಿ ರಾಷ್ಟ್ರವಾಗಿ ಬೆಳೆಯುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳು ಜನರ ಬದುಕನ್ನು ಅಭಿವೃದ್ಧಿ ಪಡಿಸುತ್ತಿವೆ. ಆಪರೇಷನ್ ಸಿಂಧೂರ ಮೂಲಕ ಶತ್ರು ರಾಷ್ಟ್ರ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ ಮಾಡಿದ ವೀರ ಯೋಧರಿಗೆ ಅಭಿನಂದನೆ ಸಲ್ಲಿಸಿದರು. ದೇಶದ ಪ್ರತಿ ಮನೆ ಮನೆ ಮೇಲೂ ತಿರಂಗಾ ಧ್ವಜ ಹಾರಾಡುತ್ತಿರುವುದು ಸಂತಸ ತಂದಿದೆ ಎಂದರು. ತಹಸೀಲ್ದಾರ್‌ ಶ್ರೀಶೈಲ ತಳವಾರ ಮಾತನಾಡಿ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಅಪ್ರತಿಮ ಸಾಧನೆ ಮಾಡುತ್ತಿದೆ. ರಕ್ಷಣಾ ಉಪಕರಣಗಳನ್ನು ಭಾರತ ವಿದೇಶಿಗಳಿಗೆ ರಪ್ತು ಮಾಡುತ್ತಿದೆ. ಸರ್ಕಾರಗಳ ಜನಪರ ಯೋಜನೆಗಳ ಸದುಪಯೋಗ ಪಡೆದುಕೊಂಡು ದೇಶದ ಉತ್ತಮ ಪ್ರಜೆಗಳಾಗಿ, ನೆಲದ ಸಂಸ್ಕೃತಿ ಮರೆಯದೇ ಸಾಗಬೇಕು ಎಂದರು. ಎಸ್ಎಸ್ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ವಿಕಲಚೇತನ ಹಾಗೂ ಹಿರಿಯ ನಾಗರೀಕರಿಗೆ ತ್ರಿಚಕ್ರ ವಾಹನಗಳನ್ನು ವಿತರಣೆ ಮಾಡಲಾಯಿತು. ವಿಕಲಚೇತನ ಐದು ವಿದ್ಯಾರ್ಥಿಗಳಿಗೆ ಸಾಧನಾ ಸಲಕರಣೆ ವಿತರಣೆ ಮಾಡಲಾಯಿತು.ಇದೇ ಸಂದರ್ಭದಲ್ಲಿ ಶೈಕ್ಷಣಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಸೇವೆಗೈದ ಕಲಬುರ್ಗಿಯ ಶ್ರೀ ಶರಣಬಸವೇಶ್ವರರ ಅಪ್ಪನವರ ನಿಧನಕ್ಕೆ ಶ್ರದ್ಧಾಂಜಲಿ ಹಾಗೂ ಮೌನಾಚರಣೆ ಸಲ್ಲಿಸಲಾಯಿತು. ಸಮಾರಂಭದಲ್ಲಿ ಪುರಸಭೆ ಅಧ್ಯಕ್ಷೆ ನೀಲವ್ವ ವಡ್ಡಿಗೇರಿ, ಉಪಾಧ್ಯಕ್ಷ ಚಂದ್ರಗೌಡ ಪಾಟೀಲ, ಉಮೇಶಗೌಡ ಪಾಟೀಲ, ಗ್ಯಾರಂಟಿ ಸಮಿತಿ ಅಧ್ಯಕ್ಷ ವಿವೇಕ ಯಾವಗಲ್ಲ, ಪುರಸಭೆ ಮಾಜಿ ಅಧ್ಯಕ್ಷ ಶಿವಾನಂದ ಮುತ್ತವಾಡ, ಬಾಬುಗೌಡ ತಿಮ್ಮನಗೌಡ್ರ, ಪ್ರಕಾಶಗೌಡ ತಿರಕನಗೌಡ್ರ, ಎಸ್. ಆರ್. ಪಾಟೀಲ, ಚಂದ್ರಶೇಖರ ದಂಡಿನ, ಮಲ್ಲಪ್ಪ ಮೇಟಿ, ಗುರುಪ್ಪ ಆದಪ್ಪನವರ, ರಾಚನಗೌಡ ಪಾಟೀಲ, ನಾಗರಾಜ ನೆಗಳೂರ, ಹನಮಂತ ಹವಾಲ್ದಾರ, ಅನೀಲ ಧರಿಯಣ್ಣವರ, ವಿಠಲ ಹವಾಲ್ದಾರ, ಮಂಜು ಮೆಣಸಗಿ, ಸಿದ್ದು ಹೂಗಾರ, ಕಂಠಿ, ಮಲ್ಲನಗೌಡ್ರ, ತಾಪಂ ಇಓ ಎಸ್ ಕೆ ಇನಾಮದಾರ, ಬಿಇಓ ಬಿ ಎಫ್ ಮಜ್ಜಗಿ, ಸಿಪಿಐ ಮಂಜುನಾಥ ನಡುವಿನಮನಿ, ಪುರಸಭೆ ಸದಸ್ಯರು, ರಾಜು ಮುಳಿಕ, ಶಿಕ್ಷಕ ಗಿರೀಶ ದಾಸರ, ಸೇರಿದಂತೆ ಮುಂತಾದವರು ಇದ್ದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌