ಭಾರತಕ್ಕೆ ಇಡೀ ಪ್ರಪಂಚದಲ್ಲೇ ಹೆಚ್ಚು ಗೌರವ; ಕೋಟ ಶ್ರೀನಿವಾಸ ಪೂಜಾರಿ

KannadaprabhaNewsNetwork |  
Published : Mar 17, 2024, 01:51 AM IST
ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರ ಸಭೆ | Kannada Prabha

ಸಾರಾಂಶ

ಬದಲಾದ ಭಾರತ ದೇಶಕ್ಕೆ ಇಡೀ ಪ್ರಪಂಚದಲ್ಲೇ ಹೆಚ್ಚು ಗೌರವ ದೊರಕಿದೆ ಎಂದು ಭಾರತೀಯ ಜನತಾ ಪಾರ್ಟಿ ಉಡುಪಿ--ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ, ತರೀಕೆರೆ

ಬದಲಾದ ಭಾರತ ದೇಶಕ್ಕೆ ಇಡೀ ಪ್ರಪಂಚದಲ್ಲೇ ಹೆಚ್ಚು ಗೌರವ ದೊರಕಿದೆ ಎಂದು ಭಾರತೀಯ ಜನತಾ ಪಾರ್ಟಿ ಉಡುಪಿ--ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಶನಿವಾರ ಭಾರತೀಯ ಜನತಾ ಪಾರ್ಟಿ ತರೀಕೆರೆ ಮಂಡಲ ವತಿಯಿಂದ ಪಕ್ಷದ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾರತ ದೇಶವನ್ನು ಬಲಿಷ್ಠ ಗೊಳಿಸಿದರು, ಜೀವನದ ಗ್ಯಾರಂಟಿ ಕೊಟ್ಟವರು ಮೋದಿ ಅವರು ಮಾತ್ರ ಎಂದ ಅವರು ಗ್ರಾಮ ಪಂಚಾಯಿತಿ ಸದಸ್ಯತ್ವದಿಂದ, ತಾಪಂ, ಜಿಪಂ, ಶಾಸಕನಾಗಿ, ಸಚಿವರಾಗಿ ಸೇವೆ ಸಲ್ಲಿಸಿದ್ದೇನೆ ಮತ್ತು ಅನೇಕ ಜವಾಬ್ದಾರಿ ನಿರ್ವಹಿಸಿ ದ್ದೇನೆ, ನಿಷ್ಠೆಯಿಂದ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಮಾಜಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಮಾತನಾಡಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಅತ್ಯಂತ ಸರಳ ವ್ಯಕ್ತಿ. ಸಂಘಟನೆ ಮಾಡಿದ್ದಾರೆ. ಅತ್ಯಂತ ಸಮರ್ಥವಾದ ವ್ಯಕ್ತಿ ಯಾಗಿದ್ದಾರೆ, ಎಲ್ಲರನ್ನು ವಿಶ್ವಾಸದಿಂದ ಕಾಣುತ್ತಾರೆ.

ಕಟ್ಟಕಡೆಯ ಮನುಷ್ಯನ ಬಗ್ಗೆ ಯೋಚನೆ ಮಾಡುತ್ತಾರೆ ಎಂದು ತಿಳಿಸಿದ ಅವರು ಇಂತಹ ಸರಳ ವ್ಯಕ್ತಿಯನ್ನು ಆಯ್ಕೆ ಮಾಡಿದ ಪಕ್ಷದ ಹೈಕಮಾಂಡ್ ಗೆ ಅಭಿನಂದನೆ ತಿಳಿಸಿದರು.

ಮಾಜಿ ಶಾಸಕ ಡಿ.ಎಸ್.ಸುರೇಶ್ ಮಾತನಾಡಿ ದೇಶದ ಚುನಾವಣೆ ನಡೆಯುತ್ತಿದೆ, ಪಕ್ಷದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಸರಳ ಸಜ್ಜನ ವ್ಯಕ್ತಿ. ಇಡೀ ಜಿಲ್ಲೆಯಲ್ಲೇ ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಅತ್ಯಂತ ಹೆಚ್ಚಿನ ಮತಗಳನ್ನು ನೀಡಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಈಗಿನ ಶಾಸಕರು ಕ್ಷೇತ್ರಕ್ಕೆ ಎಷ್ಟು ಅನುದಾನ ತಂದಿದ್ದಾರೆ. ನಮ್ಮ ಬಿಜೆಪಿ ಸರ್ಕಾರ ತಂದಿದ್ದ ಜಲಜೀವನ್ ಯೋಜನೆ ಕಾಮಗಾರಿಗೆ ಹೊಸದುರ್ಗ ಶಾಸಕರನ್ನು ಕರೆಸಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ನಮ್ಮ ಸರ್ಕಾರ ತಂದಿದ್ದ ಅನೇಕ ಯೋಜನೆಗಳಿಗೆ ಬೇರೆ ಹೆಸರಿನಲ್ಲಿ ಪೂಜೆ ಮಾಡುತ್ತಿದ್ದಾರೆ. ತಪ್ಪು ಮಾಹಿತಿ ಕೊಡುತ್ತಿದ್ದಾರೆ ಎಂದರು.

ಭಾರತೀಯ ಜನತಾ ಪಾರ್ಟಿ ತರೀಕೆರೆ ಮಂಡಲ ಅಧ್ಯಕ್ಷ ಪ್ರತಾಪ್ ಗರಗದಳ್ಳಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ಹಿರಿಯ ಮುಖಂಡ ಬಾನುಪ್ರಕಾಶ್ ಮಾತನಾಡಿದರು.ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಟಿ.ಎಲ್.ರಮೇಶ್, ನಿರ್ದೇಶಕ ಕೆ.ಆರ್.ಆನಂದಪ್ಪ, ಮುಖಂಡರಾದ ಕಲ್ಮರುಡಪ್ಪ, ಶಂಭೈನೂರು ಆನಂದಪ್ಪ, ಜಿಪಂಮಾಜಿ ಅಧ್ಯಕ್ಷೆ ಚೈತ್ರಶ್ರೀ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜೇಶ್ವರಿ ರಾಜಶೇಖರ್, ಗುಳ್ಳದಮನೆ ವಸಂತಕುಮಾರ್, ಶಶಿಕುಮಾರ್ ಮತ್ತಿತರರು ಭಾಗವಹಿಸಿದ್ದರು.

16ಕೆಟಿಆರ್.ಕೆ.1ಃ

ತರೀಕೆರೆಯಲ್ಲಿ ಭಾರತೀಯ ಜನತಾ ಪಾರ್ಟಿ ತರೀಕೆರೆ ಮಂಡಲ ವತಿಯಿಂದ ಏರ್ಪಡಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದರು. ಮಾಜಿ ಶಾಸಕ ಡಿ.ಎಸ್.ಸುರೇಶ್, ಮಾಜಿ ಸಚಿವ ಆರಗ ಜ್ಞಾನೇಂದ್ರ, ಬಿಜೆಪಿ ಜಿಲ್ಲಾಧ್ಯಕ್ಷರು ದೇವರಾಜ್ ಶೆಟ್ಟಿ, ತರೀಕೆರೆ ಮಂಡಲ ಅಧ್ಯಕ್ಷರು ಪ್ರತಾಪ್ ಗರಗದಹಳ್ಳಿ ಮತ್ತಿತರರು ಇದ್ದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಕಡಿಮೆ ಗುಣದ ಔಷಧಿ ಎರಡೇ ದಿನಕ್ಕೇ ಮಾರುಕಟ್ಟೆಯಿಂದ ವಾಪಸ್‌: ಸಚಿವ