ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಜಿಲ್ಲಾ ಬಿಜೆಪಿಯಿಂದ ಭಾನುವಾರ ಶಿವಮೊಗ್ಗ ನಗರ ಜಿಲ್ಲಾ ಕಚೇರಿಯಲ್ಲಿ ಏರ್ಪಡಿಸಿದ್ದ ದೀನದಯಾಳು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದೇಶ ಸಾಕಷ್ಟು ಅಭಿವೃದ್ಧಿಯನ್ನು ಕಂಡಿದೆ. ಶತ್ರು ರಾಷ್ಟ್ರಗಳಿಗೆ ಕೂಡಲೇ ತಕ್ಕ ಉತ್ತರವನ್ನು ಕೊಡುವ ಮಟ್ಟಿಗೆ ಬೆಳೆದು ನಿಂತಿದೆ ಎಂದರು.
11 ವರ್ಷಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ, ರಾಷ್ಟ್ರೀಯ ಹೆದ್ದಾರಿ ಯೋಜನೆಗಳು, ಕೃಷಿ ಕ್ಷೇತ್ರ ಪ್ರಗತಿ, ಕೈಗಾರಿಕಾ ವಲಯ ಆಧುನೀಕರಣ, ರಾಜತಾಂತ್ರಿಕ ವ್ಯವಸ್ಥೆ ಸುಧಾರಣೆ, ಪ್ರವಾಸೋದ್ಯಮಕ್ಕೆ ಬಲ, ರಕ್ಷಣಾ ವಿಭಾಗ ಉನ್ನತಿಕರಣ, ಯುವ ಮತ್ತು ಮಹಿಳಾ ಸಬಲೀಕರಣ, ದೇಶದ ಅಮೂಲಾಗ್ರ ಆರ್ಥಿಕ ಸುಧಾರಣೆ ಸೇರಿದಂತೆ ಇನ್ನೂ ಅನೇಕ ವಿಭಾಗಗಳಲ್ಲಿ ಐತಿಹಾಸಿಕ ಬದಲಾವಣೆಯನ್ನು ದೇಶ ಕಂಡಿದೆ ಎಂದು ತಿಳಿಸಿದರು.ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಆಡಳಿತದ ಚುಕ್ಕಾಣಿ ಹಿಡಿದು 11ನೇ ವಸಂತಕ್ಕೆ ದಾಪುಗಾಲು ಇಟ್ಟಿರುವ ಈ ಐತಿಹಾಸಿಕ ಕ್ಷಣವನ್ನು ಮತದಾರರ ನಡುವೆ ಇನ್ನಷ್ಟು ಸಾಕ್ಷಿಕರಿಸಲು ಭಾರತೀಯ ಜನತಾ ಪಕ್ಷ ದೇಶದಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಆಡಳಿತದಲ್ಲಿ ಭಾರತದ ಸಮಗ್ರ ಚಿತ್ರಣವನ್ನೇ ಬದಲಾಯಿಸಿದ್ದಾರೆ. ದೇಶದ ನಾಗರಿಕರ ಜೀವನ ಮಟ್ಟವನ್ನು ಸುಧಾರಿಸುತ್ತಾ, ಭಾರತ ಇಂದು ಒಂದು ಪ್ರಮುಖ ಜಾಗತಿಕ ಶಕ್ತಿಯಾಗಿ ಹೊರಹೊಮ್ಮಿದೆ. ಜಗತ್ತಿನ 10ನೇ ಅತಿದೊಡ್ಡ ಆರ್ಥಿಕತೆಯಾಗಿದ್ದ ಭಾರತ, ಇಂದು ಜಗತ್ತಿನ 4ನೇ ಅತಿದೊಡ್ಡ ಆರ್ಥಿಕತೆಯಾಗಿ ರೂಪುಗೊಂಡಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ಬಿಜೆಪಿ ತಾಲೂಕು ಅಧ್ಯಕ್ಷರು, ಹಿರಿಯ ಮುಖಂಡರು, ಗಣ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.