ಜಿಲ್ಲಾ ಮಟ್ಟದ ಸಂಘಟನಾ ಕಾರ್ಯ ದರ್ಶಿಗಳ ಪ್ರಶಿಕ್ಷಣ ವರ್ಗದ ಉದ್ಘಾಟನಾ ಕಾರ್ಯಕ್ರಮ
ಭಾರತ ವಿಶ್ವಗುರು ಆಗಬೇಕು ಎನ್ನುವುದು ಜಗತ್ತಿನ ಮೇಲೆ ಪ್ರಾಬಲ್ಯ ಸಾಧಿಸುವುದಕ್ಕಾಗಿ ಅಲ್ಲ. ಜಗತ್ತಿನ ಕಲ್ಯಾಣಕ್ಕಾಗಿ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.
ಶೃಂಗೇರಿಯಲ್ಲಿ ಸಹಕಾರ ಭಾರತಿ ಕರ್ನಾಟಕ ದಿಂದ ಆಯೋಜಿಸಿದ್ದ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಸಂಘಟನಾ ಕಾರ್ಯ ದರ್ಶಿಗಳ ಪ್ರಶಿಕ್ಷಣ ವರ್ಗದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮೆಲ್ಲರ ಗುರಿ ತಾಯಿ ಭಾರತಿಯನ್ನು ಶಕ್ತಿಶಾಲಿ ರಾಷ್ಟ್ರವನ್ನಾಗಿ ರೂಪಿಸುವುದಾಗಿದೆ. ಭಾರತ ವಿಶ್ವಗುರು ಆಗಬೇಕು ಎನ್ನುವುದು ಜಗತ್ತಿನ ಮೇಲೆ ಪ್ರಾಬಲ್ಯ ಸಾಧಿಸುವುದಕ್ಕಾಗಿ ಅಲ್ಲ. ಜಗತ್ತಿನ ಕಲ್ಯಾಣವನ್ನು ಬಯಸುವ ಭಾರತೀಯ ಚಿಂತನೆಗಳು ಜಾಗತಿಕ ಮಟ್ಟದಲ್ಲಿ ಮುನ್ನಡೆಸಿದಾಗ ವಿಶ್ವಕ್ಕೆ ಒಳಿತಾಗುತ್ತದೆ ಎಂದು ಹೇಳಿದರು.ಭಾರತದಲ್ಲಿ ಸಹಕಾರಿ ಚಳುವಳಿಗೆ ಶತಮಾನದ ಇತಿಹಾಸವಿದ್ದರೂ, ಅದರ ಮೂಲ ತತ್ವ ಭಾರತೀಯ ಜೀವನ ಪದ್ಧತಿಯಲ್ಲೇ ಅಡಗಿದೆ. ವೇದಗಳಲ್ಲೇ ‘ಸಂಘಚ್ಛಧ್ವಂ, ಸಂವದಧ್ವಂ’ ಎಂಬ ಸಂದೇಶದ ಮೂಲಕ ಒಟ್ಟಾಗಿ ನಡೆಯುವ ಜೀವನದ ಪರಿಕಲ್ಪನೆ ನೀಡಲಾಗಿದೆ. ಸಹಕಾರಿ ಚಳುವಳಿ ಎಂಬ ಹೆಸರು ಇರಲಿಲ್ಲ ಅಷ್ಟೇ, ಆದರೆ, ಅದರ ತತ್ವಗಳು ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ಜೀವಂತವಾಗಿದ್ದವು ಎಂದು ಹೇಳಿದರು.
ಸಮಾರಂಭದಲ್ಲಿ ಸಹಕಾರ ಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪ್ರಭುದೇವ್ ಆರ್ ಮಾಗನೂರ್, ಮಾಜಿ ರಾಜ್ಯಾಧ್ಯಕ್ಷ ಸತೀಶ್ ಚಂದ್ರ, ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂಜಯ್ ಪಾಚ್ಪೂರ್, ಸಹಕಾರ ಭಾರತಿ, ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಆರ್.ಎಸ್ ನಯನಾ, ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹ ನಾಯಕ್ಉ ಪಸ್ಥಿತರಿದ್ದರು.
ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ವ್ಯಕ್ತಿಗಳು ಇರುವುದರಲ್ಲಿ ತಪ್ಪಿಲ್ಲ. ಆದರೆ, ಸಹಕಾರಿ ಸಂಸ್ಥೆಗಳು ರಾಜಕೀಯದ ದುರುಪಯೋಗಕ್ಕೆ ವೇದಿಕೆಯಾಗಬಾರದು.