ಕನ್ನಡಪ್ರಭ ವಾರ್ತೆ ಆಲಮಟ್ಟಿ ಜಿಲ್ಲೆಯ ರಾಯಚೂರು ಗಡಿಯಿಂದ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ಬಾಗಲಕೋಟೆ ಜಿಲ್ಲೆಯ ಗಡಿ ಭಾಗದ ಆಲಮಟ್ಟಿಯವರೆಗಿನ ಸುಮಾರು 62 ಕಿ.ಮೀ.ವರೆಗೆ ಮಾನವ ಸರಪಳಿ ಯಶಸ್ವಿಯಾಗಿ ನಿರ್ಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು. ರಾಜ್ಯ ಸರ್ಕಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನಲೆಯಲ್ಲಿ ಇಂದು ಜಿಲ್ಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಮಾನವ ಸರಪಳಿ ಕಾರ್ಯಕ್ರಮಲ್ಲಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಆಲಮಟ್ಟಿ
ಜಿಲ್ಲೆಯ ರಾಯಚೂರು ಗಡಿಯಿಂದ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ಬಾಗಲಕೋಟೆ ಜಿಲ್ಲೆಯ ಗಡಿ ಭಾಗದ ಆಲಮಟ್ಟಿಯವರೆಗಿನ ಸುಮಾರು 62 ಕಿ.ಮೀ.ವರೆಗೆ ಮಾನವ ಸರಪಳಿ ಯಶಸ್ವಿಯಾಗಿ ನಿರ್ಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು. ರಾಜ್ಯ ಸರ್ಕಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನಲೆಯಲ್ಲಿ ಇಂದು ಜಿಲ್ಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಮಾನವ ಸರಪಳಿ ಕಾರ್ಯಕ್ರಮಲ್ಲಿ ಮಾತನಾಡಿದರು. ವಿವಿಧೆತೆಯಲ್ಲಿ ಏಕತೆ ತೋರುವ ಹೆಮ್ಮೆಯ ರಾಷ್ಟ್ರ. ಭಾರತವು ಅತ್ಯಂತ ಯಶಸ್ವಿ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿದೆ. ಸಂವಿಧಾನ ಪ್ರತಿಯೊಬ್ಬರಿಗೆ ಸಮಾನ ಅವಕಾಶ ನೀಡಿದ್ದು ಅದರ ಆಶಯದಂತೆ ಎಲ್ಲರೂ ನಡೆಯೋಣ ಎಂದು ಅವರು ಕರೆ ನೀಡಿದರು.ವಿಜಯಪುರ ಜಿಲ್ಲೆಗೆ ಐತಿಹಾಸಿಕ ಹಿನ್ನಲೆಯಿದೆ. ದೇಶದ ಅಭಿವೃದ್ದಿಗೆ ಹಲವು ಕೊಡುಗೆ ನೀಡಿದ್ದು ನಾವೆಲ್ಲರೂ ಸಂವಿಧಾನದ ಆಶಯಕ್ಕನುಗುಣವಾಗಿ ನಡೆದುಕೊಳ್ಳಬೇಕು. ಈ ಮೂಲಕ ಸಂವಿಧಾನದ ಮೌಲ್ಯಗಳನ್ನು ಸಾಕಾರಗೊಳಿಸೋಣ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ ಹಾಗೂ ಸಾಮಾನ್ಯ ನಾಗರಿಕರಿಂದ ವಿವಿಧ ಕ್ಷೇತ್ರಗಳಲ್ಲಿ ಸಸಿ ನೆಡುವುದರೊಂದಿಗೆ ಆಯಾ ಕ್ಷೇತ್ರಗಳನ್ನು ಅರ್ಪಣೆ ಮಾಡುವ ಮೂಲಕ ಜಿಲ್ಲೆಯಾದ್ಯಂತ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಜಿಲ್ಲೆಯಲ್ಲಿ ಸುಮಾರು 30 ಸಾವಿರ ಸಸಿಗಳನ್ನು ನೆಡುವ ಮೂಲಕ ವನ ನಿರ್ಮಾಣಕ್ಕೆ ಕ್ರಮವಹಿಸಲಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯಕ್ರಮದ ಸ್ಥಳದಲ್ಲಿ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಮಾನವ ಸರಪಳಿ: ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ಬಾಗಲಕೋಟೆ ಜಿಲ್ಲೆಯ ಗಡಿ ಭಾಗದ ಆಲಮಟ್ಟಿವರೆಗೆ ಸುಮಾರು 62 ಕಿ.ಮೀ.ವರೆಗೆ ಮಾನವ ಸರಪಳಿ ಕಾರ್ಯಕ್ರಮದಲ್ಲಿ ವಿವಿಧ ವಸತಿ ಶಾಲೆ ವಿದ್ಯಾರ್ಥಿಗಳು, ಮಹಿಳಾ ಸ್ವಸಹಯ ಸಂಘದ ಸದಸ್ಯರು, ಶಾಲಾ ಕಾಲೇಜ್ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಜನಪ್ರತಿನಿಧಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.