ಅಭಿವೃದ್ಧಿ ಪಥದೊಂದಿಗೆ ಭಾರತ ವಿವಿಧೆತೆಯಲ್ಲಿ ಏಕತೆ ಕಾಣುತ್ತಿದೆ: ದರ್ಶನ್ ಪುಟ್ಟಣ್ಣಯ್ಯ

KannadaprabhaNewsNetwork |  
Published : Aug 16, 2025, 12:00 AM IST
15ಕೆಎಂಎನ್ ಡಿ11,12 | Kannada Prabha

ಸಾರಾಂಶ

ವಿಕಲಚೇತನರಿಗೆ ಶಾಸಕರು ದ್ವಿಚಕ್ರ ವಾಹನಗಳನ್ನು ವಿತರಿಸಿದರು. ಬಳಿಕ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸಲಾಯಿತು. ಆಶಾಕಾತ್ಯಕರ್ತೆಯರಿಗೆ ಮುಟ್ಟಿನ ಕಿಟ್ ಗಳನ್ನು ವಿತರಣೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಸ್ವಾತಂತ್ರ್ಯ ನಂತರ ಭಾರತ ವಿಶ್ವದಲ್ಲಿಯೇ ಅಭಿವೃದ್ಧಿ ಪಥದಲ್ಲಿ ಸಾಗುವ ಮೂಲಕ ವಿವಿಧತೆಯಲ್ಲಿ ಏಕತೆಯನ್ನು ಕಾಣುತ್ತಿದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.

ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ನಾಡಹಬ್ಬಗಳ ಆಚರಣ ಸಮಿತಿ ಹಾಗೂ ತಾಲೂಕು ಆಡಳಿತದ ವತಿಯಿಂದ ನಡೆದ 79 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾತನಾಡಿ, ಭಾರತ ತಂತ್ರಜ್ಞಾನ ಕ್ಷೇತ್ರದಲ್ಲೂ ಸಾಕಷ್ಟು ಮುಂಚೂಣಿಯಲ್ಲಿದೆ. ದೇಶ ಮತ್ತಷ್ಟು ಅಭಿವೃದ್ಧಿ ಹೊಂದಬೇಕಾದರೆ ಯುವಕರು ಸ್ವ ಉದ್ಯೋಗ ಸೃಷ್ಟಿಸಿಕೊಳ್ಳಬೇಕು. ಹೆಚ್ಚು ಕೈಗಾರಿಕೆ, ಸಣ್ಣ ಕೈಗಾರಿಕೆಗಳು ಸೃಷ್ಟಿಯಾಗಬೇಕು. ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು.

ಧ್ವಜಾರೋಹಣ ನೆರವೇರಿಸಿದ ಉಪವಿಭಾಗಾಧಿಕಾರಿ ಕೆ.ಆರ್.ಶ್ರೀನಿವಾಸ್ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಂತಹ ಮಹಾನ್ ನಾಯಕರು ಹಾಗೂ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಹೋರಾಟಗಾರರನ್ನು ದೇಶದ ಪ್ರತಿಯೊಬ್ಬ ನಾಗರಿಕರು ಸ್ಮರಿಸಬೇಕು ಎಂದರು.

ಅಮೆರಿಕಾ ಸುಂಕ ಹೆಚ್ಚಳ ಮಾಡಿದ್ದರಿಂದಾಗಿ ಸಾಕಷ್ಟು ಭಾರತೀಯರು ಉದ್ಯೋಗ ಕಳೆದುಕೊಳ್ಳಬೇಕಾಯಿತು. ಅದಕ್ಕಾಗಿ ದೇಶದಲಿಯೇ ಹೆಚ್ಚು ಕೈಗಾರಿಕೆಗಳನ್ನು ಆರಂಭಿಸಬೇಕು. ಜತೆಗೆ ಪ್ರತಿಯೊಬ್ಬರೂ ದೇಶ ಪ್ರೇಮ ಬೆಳೆಸಿಕೊಳ್ಳಬೇಕು. ಅಭಿವೃದ್ಧಿಗಾಗಿ ಸ್ವದೇಶಿ ಉತ್ಪನ್ನಗಳನ್ನು ಹೆಚ್ಚು ಬಳಕೆ ಮಾಡಬೇಕು ಎಂದು ತಿಳಿಸಿದರು.

ಇದಕ್ಕೂ ಮುನ್ನ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಎಸಿ ಕೆ.ಆರ್.ಶ್ರೀನಿವಾಸ್ ಬ್ಯಾಂಡ್ ಸೆಟ್ ತಂಡ ಹಾಗೂ ಪಥಸಂಚಲನದ ತಂಡಗಳನ್ನು ಪರಿಚಯಿಸಿಕೊಂಡರು. ಬಳಿಕ ವೇದಿಕೆ ಮೇಲಿನ ಗಣ್ಯರಿಗೆ ಪಥಸಂಚಲನದ ಮೂಲಕ ವಂದನೆ ಸಲ್ಲಿಸಲಾಯಿತು.

ಇದೇ ವೇಳೆ ವಿಕಲಚೇತನರಿಗೆ ಶಾಸಕರು ದ್ವಿಚಕ್ರ ವಾಹನಗಳನ್ನು ವಿತರಿಸಿದರು. ಬಳಿಕ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸಲಾಯಿತು. ಆಶಾಕಾತ್ಯಕರ್ತೆಯರಿಗೆ ಮುಟ್ಟಿನ ಕಿಟ್ ಗಳನ್ನು ವಿತರಣೆ ಮಾಡಲಾಯಿತು.

ಸಮಾರಂಭದಲ್ಲಿ ಪುರಸಭೆ ಅಧ್ಯಕ್ಷೆ ಜ್ಯೋತಿಲಕ್ಷ್ಮೀ, ಉಪಾಧ್ಯಕ್ಷ ಅಶೋಕ್, ತಹಸೀಲ್ದಾರ್ ಸಂತೋಷ್ ಕುಮಾರ್, ಇಒ ವೀಣಾ, ಸರ್ಕಲ್ ಇನ್ಸ್ ಪೆಕ್ಟರ್ ಶರತ್ ಕುಮಾರ್ ಸೇರಿ ಪುರಸಭೆಯ ಎಲ್ಲಾ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ- ಸಂಸ್ಥೆ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.

PREV

Recommended Stories

79 ವರ್ಷಗಳ ನಂತ್ರ ಅಥಣಿಗೆ ಸರ್ಕಾರಿ ಪ್ರೌಢಶಾಲೆ!
ಪ್ರಜಾಪ್ರಭುತ್ವ ಉಳಿವಿಗೆ ಹೋರಾಟ ಅನಿವಾರ್ಯ