ಅತಿ ಹೆಚ್ಚು ಯುವಪಡೆ ಹೊಂದಿರುವ ದೇಶ ಭಾರತ

KannadaprabhaNewsNetwork |  
Published : Sep 16, 2025, 12:03 AM IST
15 | Kannada Prabha

ಸಾರಾಂಶ

ದೇವನಹಳ್ಳಿ: ಪಕ್ಷದ ವರಿಷ್ಠರು ಸೆ.೧೭ರಿಂದ ಅ.೨ರವರೆಗೆ ಸೇವಾ ಪಾಕ್ಷಿಕ ಕಾರ್ಯಕ್ರಮಗಳನ್ನು ನೀಡಿದ್ದು ದೇವನಹಳ್ಳಿ ಮಂಡಲದ ಎಲ್ಲಾ ಕಾರ್ಯರ್ತರು ಒಗ್ಗೂಡಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಮಂಡಲ ಅಧ್ಯಕ್ಷ ಎನ್.ಎಲ್.ಅಂಬರೀಶ್‌ಗೌಡ ತಿಳಿಸಿದರು.

ದೇವನಹಳ್ಳಿ: ಪಕ್ಷದ ವರಿಷ್ಠರು ಸೆ.೧೭ರಿಂದ ಅ.೨ರವರೆಗೆ ಸೇವಾ ಪಾಕ್ಷಿಕ ಕಾರ್ಯಕ್ರಮಗಳನ್ನು ನೀಡಿದ್ದು ದೇವನಹಳ್ಳಿ ಮಂಡಲದ ಎಲ್ಲಾ ಕಾರ್ಯರ್ತರು ಒಗ್ಗೂಡಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಮಂಡಲ ಅಧ್ಯಕ್ಷ ಎನ್.ಎಲ್.ಅಂಬರೀಶ್‌ಗೌಡ ತಿಳಿಸಿದರು. ಪಟ್ಟಣದ ಬೈಪಾಸ ರಸ್ತೆಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸೇವಾ ಪಾಕ್ಷಿಕ ಕಾರ್ಯಕರ್ತರ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಧಾನಿಯಾದಾಗಿನಿಂದಲೂ ಸೇವಾ ಪಾಕ್ಷಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ. ದೇಶದಲ್ಲಿ ರಾಜಕೀಯ ಹೊರತುಪಡಿಸಿ ಸೇವಾ ಕಾರ್ಯಕ್ರಮಗಳು ಹಮ್ಮಿಕೊಳ್ಳುವ ಪಕ್ಷ ಬಿಜೆಪಿ ಮಾತ್ರ. ಅತಿ ಹೆಚ್ಚು ಯುವಪಡೆ ಹೊಂದಿರುವ ದೇಶ ಭಾರತ ಮಾತ್ರ. ಯುವಪಡೆ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಪಾಲಿಸಬೇಕು.ಅತಿ ಶೀಘ್ರದಲ್ಲೇ ಮಂಡಲದ ಸಮಿತಿಗಳ ರಚನೆ ಮಾಡಲಾಗುವುದು. ತಾಲೂಕಿನಲ್ಲಿ ೫೦೦ಕ್ಕೂ ಹೆಚ್ಚು ಹುದ್ದೆಗಳಿವೆ. ಎಲ್ಲರಿಗೂ ಜವಾಬ್ದಾರಿ ನೀಡಲಾಗುವುದು. ಸೆ.೧೭ರಿಂದ ಅ.೨ರವರೆಗೆ ಆರೋಗ್ಯ ಶಿಬಿರ, ಸ್ವಚ್ಛತಾ ಕಾರ್ಯಕ್ರಮ, ರಕ್ತದಾನ ಕಾರ್ಯಕ್ರಮ, ಸೇರಿದಂತೆ ಅನೇಕ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ನಾಲ್ಕುತಿಂಗಳಲ್ಲಿ ಗ್ರಾಪಂ ಚುನಾವಣೆ ಬರಲಿದ್ದು ತಾಲೂಕಿನಲ್ಲಿ ಬಿಜೆಪಿ ಕಾರ್ಯಕ್ರತರು ೧೦೦ಕ್ಕೂ ಹೆಚ್ಚು ಸದಸ್ಯರನ್ನು ಗೆಲ್ಲಿಸಬೇಕು. ತಾಲೂಕಿನಲ್ಲಿ ಯಾವುದೇ ಪಕ್ಷ ಸಾರ್ವಜನಿಕರ ಸಮಸ್ಯೆ ಆಲಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ನಿತ್ಯ ಸಮಸ್ಯೆಗಳನ್ನು ತಂದೊಡ್ಡುತ್ತಿದ್ದಾರೆ. ಬಿಜೆಪಿ ಪಕ್ಷದ ಪ್ರಗತಿಯನ್ನು ಕಾರ್ಯಕರ್ತರು ಜನಸಾಮಾನ್ಯರಿಗೆ ತಿಳಿಸಬೇಕು. ಚುನಾವಣೆ ಬಂದಾಗ ಮಾತ್ರ ಜಸಮಾನ್ಯರನ್ನು ಬೇಟಿಯಾಗದೆ ನಿತ್ಯ ಅವರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದರು. ಸಭೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಎಂ.ರವಿಕುಮಾರ್, ಮುಖಂಡರಾದ ನಂಜೇಗೌಡ, ಬುಳ್ಳಳ್ಳಿ ರಾಜಪ್ಪ, ಬಿ.ಕೆ.ನಾರಾಯಣಸ್ವಾಮಿ, ದೇಸುನಾಗರಾಜ್, ಪ್ರಭು, ಮಂಜುನಾಥ್, ಹೆಗಡೆ, ರವಿ, ಪುನೀತ್‌ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಶಂಕರಪ್ಪ ಕರ್ನಾಟಕ ರತ್ನಕ್ಕೆ ಅರ್ಹ : ಶ್ರೀ
ಮೈಸೂರು ಹೀಲಿಯಂ ಸಿಲಿಂಡರ್‌ ಸ್ಫೋಟ : ಎನ್‌ಐಎ ಭೇಟಿ