ಅಭಿವೃದ್ಧಿ ಕಾಮಗಾರಿಗಳಲ್ಲಿ ಭಾರತ ಮುಂಚೂಣಿ: ಹಾಲಪ್ಪ ಆಚಾರ್

KannadaprabhaNewsNetwork | Published : May 2, 2024 12:17 AM

ಸಾರಾಂಶ

ದೇಶಾದ್ಯಂತ ಜನರು ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ದಿ ಕಾರ್ಯ ಸಾಧನೆ ಗಮನಿಸಿ ಬಿಜೆಪಿ ಪಕ್ಷಕ್ಕೆ ವ್ಯಾಪಕ ಬೆಂಬಲ ನೀಡುತ್ತಿದ್ದಾರೆ.

ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಪರ ಮಾಜಿ ಸಚಿವ ಹಾಲಪ್ಪ ಆಚಾರ್ ಮತಯಾಚನೆಕನ್ನಡಪ್ರಭ ವಾರ್ತೆ ಯಲಬುರ್ಗಾ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ಹೆದ್ದಾರಿ, ರೈಲ್ವೆ, ನದಿ ಜೋಡಣೆ ಸೇರಿದಂತೆ ಸಮಗ್ರ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಇಡೀ ವಿಶ್ವದಲ್ಲಿಯೇ ನಮ್ಮ ಭಾರತ ದೇಶ ಮುಂಚೂಣಿ ಸ್ಥಾನದಲ್ಲಿದೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಹೇಳಿದರು.

ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಕೊಪ್ಪಳ ಲೋಕಸಭಾ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಪರ ಬಹಿರಂಗ ಮತಯಾಚನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶಾದ್ಯಂತ ಜನರು ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ದಿ ಕಾರ್ಯ ಸಾಧನೆ ಗಮನಿಸಿ ಬಿಜೆಪಿ ಪಕ್ಷಕ್ಕೆ ವ್ಯಾಪಕ ಬೆಂಬಲ ನೀಡುತ್ತಿದ್ದಾರೆ. ಇದನ್ನು ಅರಗಿಸಿಕೊಳ್ಳಲಾಗದೆ ಕಾಂಗ್ರೆಸ್‌ನವರಿಗೆ ನಿದ್ದೆ ಬರುತ್ತಿಲ್ಲ. ರಾಜ್ಯದಲ್ಲಿ ಕಾಂಗ್ರಸ್ ಪಕ್ಷ ಧೂಳಿಪಟವಾಗಲಿದೆ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆ ಸದಾ ಆರೋಗ್ಯವಂತರಾಗಿರಲಿ ಎನ್ನುವ ಉದ್ದೇಶದಿಂದ ಬಡವರ್ಗದವರಿಗೆ ಆಯುಷ್ಮಾನ ಯೋಜನೆ ಜಾರಿಗೆ ತಂದಿದ್ದಾರೆ. ೧೦ ಲಕ್ಷ ಕುಟುಂಬಗಳಿಗೆ ಆರ್ಥಿಕ ಸಹಾಯ ದೊರಕಿಸಿಕೊಡುವ ಮೂಲಕ ಪ್ರತಿ ಫಲಾನುಭವಿಗಳಿಗೆ ₹೫ ಲಕ್ಷ ಸಹಾಯಧನ ನೀಡುತ್ತಿರುವುದು ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲೊಂದಾಗಿದೆ. ರೈತರಿಗೆ, ಕೃಷಿ ಕಾರ್ಮಿಕರಿಗೆ, ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಮನವಿ ಮಾಡಿದರು. ಜಿಪಂ ಮಾಜಿ ಸದಸ್ಯ ಸಿ.ಹೆಚ್. ಪಾಟೀಲ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ದಿ ಹಾಗೂ ಜನಪರ ಆಡಳಿತವನ್ನು ಮೆಚ್ಚಿಕೊಂಡು ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಯಿಂದ ಅತೀ ಹೆಚ್ಚು ಸ್ಥಾನಗಳನ್ನು ಗೆದ್ದು ಕೇಂದ್ರದಲ್ಲಿ ನರೇಂದ್ರ ಮೋದಿ ೩ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷ ಮಾರುತಿ ಗಾವರಾಳ, ಶ್ರೀನಿವಾಸ ತಿಮ್ಮಾಪೂರ, ಶಂಕರಗೌಡ ಗೆದಗೇರಿ, ಎಸ್.ಎನ್. ಶ್ಯಾಗೋಟಿ, ಶಂಭು ಜೋಳದ, ಅಯ್ಯನಗೌಡ ಕೆಂಚಮ್ಮನವರ, ಕಲ್ಲೇಶ ಕರಮುಡಿ ಸೇರಿದಂತೆ ಮತ್ತಿತರರು ಇದ್ದರು.

Share this article