ಕನ್ನಡಪ್ರಭ ವಾರ್ತೆ ಮಂಡ್ಯ
ಶನಿವಾರ ನಗರದ ಪಿಇಟಿ ಕ್ರಿಕೆಟ್ ಮೈದಾನದಲ್ಲಿ ಆಯೋಜಿಸಲಾಗಿದ್ದ ೧೧ ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿ, ಯೋಗ ಎನ್ನುವುದು ದೇಶದ ಸಂಸ್ಕೃತಿಯ ಪ್ರತೀಕ. ಪ್ರತಿಯೊಬ್ಬರೂ ಯೋಗ ಕಲಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನುಡಿದರು.
ಯೋಗ ಎಂಬುದು ಕೇವಲ ದೈಹಿಕವಾದ ವ್ಯಾಯಾಮ ಮಾತ್ರವಲ್ಲ, ಪ್ರತಿಯೊಬ್ಬರ ಜೀವನ ಕ್ರಮ ಮತ್ತು ಆರಾಧನೆಯ ಭಾಗವಾಗಬೇಕು. ಜನರು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಯೋಗದ ಅವಶ್ಯಕತೆ ಇದೆ ಎಂದರು.ರೋಗ ಬರುವ ಮೊದಲು ಯೋಗವನ್ನು ರೂಢಿಸಿಕೊಳ್ಳಿ. ಯೋಗದಿಂದ ಜೀವನಶೈಲಿ ಸಹ ಬದಲಾಗುತ್ತದೆ. ವಿದ್ಯಾರ್ಥಿಗಳು ಚಿಕ್ಕಂದಿನಿಂದಲೇ ಯೋಗವನ್ನು ಅಭ್ಯಾಸ ಮಾಡಿದರೆ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬಹುದು ಎಂದರು.
ಕಾರ್ಯಕ್ರಮದಲ್ಲಿ ಚಂದ್ರವನ ಆಶ್ರಮದ ಬೇಬಿ ಮಠದ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ನಗರಸಭೆ ಅಧ್ಯಕ್ಷ ಎಂ.ವಿ.ಪ್ರಕಾಶ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಪುಷ್ಪಾ ಸೇರಿದಂತೆ ಇತರರಿದ್ದರು.