ಕನ್ನಡಪ್ರಭ ವಾರ್ತೆ ಕಲಬುರಗಿ
ಶರಣಬಸವ ವಿವಿ ಅನುಭವ ಮಂಟಪದಲ್ಲಿ ಪ್ರವಾಸೋದ್ಯಮ ವಿಭಾಗ ಮತ್ತು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಜಂಟಿಯಾಗಿ ಆಯೋಜಿಸಿದ್ದ ಜಾಗತಿಕ ತಾಪಮಾನದ ಜ್ವಲಂತ ಸಮಸ್ಯೆ ಮತ್ತು ಈ ಸಮಸ್ಯೆ ನಿವಾರಿಸಲು ಅಗತ್ಯವಿರುವ ಪರಿಹಾರಗಳ ಕುರಿತು ಮಾತನಾಡಲು ವಿವಿಧ ದೇಶ ಪ್ರತಿನಿಧಿಸುವ ವಿದ್ಯಾರ್ಥಿ ಪ್ರತಿನಿಧಿಗಳಿಗಾಗಿ ಯುವ ಮಂಥನ್ ಮಾದರಿ ವಿಶ್ವಸಂಸ್ಥೆ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಜಗತ್ತಿನಲ್ಲಿ ಶಾಂತಿ ಕಾಪಾಡಲು ಮತ್ತು ರಾಷ್ಟ್ರಗಳ ನಡುವಿನ ಸಂಘರ್ಷ ಕೊನೆಗೊಳಿಸಲು ಭದ್ರತಾ ಮಂಡಳಿ ಕಾಯಂ ಸದಸ್ಯರಾಗಿದ್ದ 5 ಶಕ್ತಿಶಾಲಿ ರಾಷ್ಟ್ರಗಳು ಅಳವಡಿಸಿಕೊಂಡ ಅಸಹಕಾರ ಧೋರಣೆಯಿಂದಾಗಿ ರಾಷ್ಟ್ರಗಳ ನಡುವೆ ಶಾಂತಿ ಮತ್ತು ಸಂಘರ್ಷ ಕೊನೆಗೊಳಿಸುವುದು ಈಡೇರುತ್ತಿಲ್ಲ ಎಂದರು.ಯುಎನ್‍ಒದ ಇಂತಹ ಮಾದರಿ ಸಭೆ ಆಯೋಜಿಸಲು ಎರಡೂ ವಿಭಾಗಗಳ ಈ ಕಾರ್ಯ ಶ್ಲಾಘಿಸಿದ ಅವರು, ಇದರಿಂದ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಬಹಳ ಅನುಕೂಲವಾಗುತ್ತದೆ ಮತ್ತು ಇಂತಹ ಸಭೆ ಆಯೋಜಿಸುವುದರಿಂದ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿಷಯಗಳ ಬಗ್ಗೆ ವಿದ್ಯಾರ್ಥಿಗಳನ್ನು ಸಶಕ್ತಗೊಳಿಸಲು ಮತ್ತು ಅವರ ಶೈಕ್ಷಣಿಕ ಸುಧಾರಣೆಗೆ ಸಾಕಷ್ಟು ಸಹಾಯವಾಗುತ್ತದೆ ಎಂದರು.