ಕನ್ನಡಪ್ರಭ ವಾರ್ತೆ ಉಡುಪಿ
ನಗರದ ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಎನ್ ಎಸ್ ಎಸ್ ಘಟಕನ ವಾರ್ಷಿಕ ವಿಶೇಷ ಶಿಬಿರದಲ್ಲಿ ಶಿಬಿರಾರ್ಥಿಗಳನ್ನು ಕುರಿತು ಮಾತನಾಡಿದರು.
ಯುವಕರಿಂದ ಮಾತ್ರ ಸಾಮಾಜಿಕ ಬದಲಾವಣೆ ಹಾಗೂ ದೇಶದ ಅಭಿವೃದ್ಧಿ ಸಾಧ್ಯ. ಆದರಿಂದ ಯುವಕರು ತಮ್ಮ ಜವಾಬ್ದಾರಿ ಅರಿತು ದೇಶವನ್ನು ಮುನ್ನೆಡೆಸಬೇಕ ಎಂದು ಅವರು ಕರೆ ನೀಡಿರು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎನ್ ಎಸ್ ಎಸ್ ಘಟಕದ ಕಾರ್ಯಕ್ರಮ ಅಧಿಕಾರಿ ಡಾ. ನವೀನ್ ಚಂದ್ರ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ ಪ್ರೊ. ಅಮೋಘ ಗಾಡ್ಕರ್ ಹಾಗೂ ಎನ್ ಎಸ್ ಎಸ್ ಕಾರ್ಯದರ್ಶಿಗಳಾದ ಅಶೋಕ ಮತ್ತು ನಂದನ್ ರೈಮಂಡ್ ಮಚಾದೋ ಉಪಸ್ಥಿತರಿದ್ದರು. ಶಿಬಿರಾರ್ಥಿ ರೂಪಾಲಿ ಸ್ವಾಗತಿಸಿದರು ಅರ್ಚನಾ ವಂದಿಸಿದರು ಪ್ರಸನ್ನ ಕಾರ್ಯಕ್ರಮ ನಿರೂಪಿಸಿದರು.