ಸ್ವಾತಂತ್ರ್ಯ ಬಳಿಕ ಭಾರತ ಮಹಾಸಾಧನೆ: ಶಾಂತನಗೌಡ

KannadaprabhaNewsNetwork |  
Published : Aug 16, 2025, 12:00 AM IST
ಹೊನ್ನಾಳಿ ಫೋಟೋ 15ಎಚ್.ಎಲ್.ಐ1. ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶಾಸಕ ಡಿ.ಜಿ.ಶಾಂತನಗೌಡ  79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು. ರಾಷ್ಟ್ರಧ್ವಜಾರೋಹಣ ಮಾಡಿದ. ಎ.ಸಿ.ಅಭಿಷೇಕ್,ತಾಲೂಕು ಅಡಳಿತ ಇದ್ದರು.  | Kannada Prabha

ಸಾರಾಂಶ

ದೇಶದ ಇತಿಹಾಸದಲ್ಲಿ ಸ್ವಾತಂತ್ರ್ಯ ದಿನ ಐತಿಹಾಸಿಕವಾಗಿದೆ. ಸ್ವಾತಂತ್ರ್ಯ ಬಂದ ನಂತರ ಭಾರತ ಹತ್ತುಹಲವು ಕ್ಷೇತ್ರಗಳಲ್ಲಿ ಪ್ರಪಂಚದ ಗಮನ ಸೆಳೆದಿದೆ. ಹಲವಾರು ಕ್ಷೇತ್ರಗಳಲ್ಲಿ ಹಿನ್ನಡೆಯಲ್ಲಿದ್ದ ದೇಶ ಇಂದು ಜಗತ್ತಿನ ಎಲ್ಲ ರಾಷ್ಟ್ರಗಳಿಗೆ ಮಾರ್ಗದರ್ಶಕ ದೇಶವಾಗಿ ಕೆಲಸ ಮಾಡುತ್ತಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದ್ದಾರೆ.

ಹೊನ್ನಾಳಿ: ದೇಶದ ಇತಿಹಾಸದಲ್ಲಿ ಸ್ವಾತಂತ್ರ್ಯ ದಿನ ಐತಿಹಾಸಿಕವಾಗಿದೆ. ಸ್ವಾತಂತ್ರ್ಯ ಬಂದ ನಂತರ ಭಾರತ ಹತ್ತುಹಲವು ಕ್ಷೇತ್ರಗಳಲ್ಲಿ ಪ್ರಪಂಚದ ಗಮನ ಸೆಳೆದಿದೆ. ಹಲವಾರು ಕ್ಷೇತ್ರಗಳಲ್ಲಿ ಹಿನ್ನಡೆಯಲ್ಲಿದ್ದ ದೇಶ ಇಂದು ಜಗತ್ತಿನ ಎಲ್ಲ ರಾಷ್ಟ್ರಗಳಿಗೆ ಮಾರ್ಗದರ್ಶಕ ದೇಶವಾಗಿ ಕೆಲಸ ಮಾಡುತ್ತಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.

ಪಟ್ಟಣದ ಕ್ರೀಡಾಂಗಣದಲ್ಲಿ ಶುಕ್ರವಾರ ತಾಲೂಕು ಅಡಳಿತದಿಂದ ಹಮ್ಮಿಕೊಂಡಿದ್ದ 79ನೇ ಸ್ವಾತಂತ್ರ್ಯ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಭಾರತದ ಸಂವಿಧಾನ ದೇಶದ ಅಭಿವೃದ್ಧಿಗೆ ಬಹುದೊಡ್ಡ ಮಾರ್ಗಸೂಚಿ ಆಗಿದೆ. ಸತ್ಯಾಗ್ರಹ ಮತ್ತು ಶಾಂತಿಯುತ ಹೋರಾಟ ಕೂಡ ದೇಶದ ಸ್ವಾತಂತ್ರ್ಯದ ಮೂಲ ಬೇರಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಅಂದು ಮಹಾತ್ಮ ಗಾಂಧೀಜಿ ಮೊದಲುಗೊಂಡು ಹಲವಾರು ಜನ ತ್ಯಾಗ, ಬಲಿದಾನ ಮಾಡಿದ್ದಾರೆ. ಇದರ ಫಲವಾಗಿ ದೇಶ ಸ್ವಾತಂತ್ರ್ಯ ಕಂಡಿದೆ ಎಂದು ಹೇಳಿದರು.

ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 20 ಅಂಶಗಳ ಕಾರ್ಯಕ್ರಮಗಳು ಭಾರತದ ಸರ್ವತೋಮುಖ ಅಭಿವೃದ್ಧಿಗೆ ದಾರಿದೀಪವಾಗಿವೆ. ವಿಶೇಷವಾಗಿ ಉಳುವವನೇ ಹೊಲದೊಡೆಯ, ಬಾಂಕ್ ರಾಷ್ಟ್ರೀಕರಣ, ಹಸಿರು ಕ್ರಾಂತಿ, ವ್ಯಾಪಾರ ವಹಿವಾಟಿನಲ್ಲಿ ತನ್ನೇ ಆದ ಅಭಿವೃದ್ಧಿ ಸಾಧಿಸಿ, ದೇಶದ ಬಲಾಢ್ಯ ರಾಷ್ಟ್ರಗಳಲ್ಲಿ ಒಂದಾಗಿದೆ. ಪ್ರಸ್ತುತ ರಾಜ್ಯ ಸರ್ಕಾರ ಕೂಡ ರಾಜ್ಯದ ಪ್ರಗತಿಗೆ ಹತ್ತು ಹಲವು ಯೋಜನೆಗಳನ್ನು ನೀಡಿ ದೇಶದಲ್ಲಿಯೇ ರಾಜ್ಯದ ತಲಾ ಆದಾಯ ಹೆಚ್ಚು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸರ್ಕಾರದ ಗೃಹಲಕ್ಷ್ಮೀ, ಶಕ್ತಿ ಯೋಜನೆ, ಯುವನಿಧಿ, ಅನ್ನಭಾಗ್ಯ, ಗೃಹಜ್ಯೋತಿಯಂಥ ಯೋಜನೆಗಳು ಜನತೆಯ ಅರ್ಥಿಕ ಅಭಿವೃದ್ಧಿಗೆ ಕಾರಣವಾಗಿವೆ ಎಂದರು.

ಉಪವಿಭಾಗಾಧಿಕಾರಿ ಅಭಿಷೇಕ್ ರಾಷ್ಟ್ರಧ್ವಜಾರೋಹಣ ಮಾಡಿ, ಎಲ್ಲರಿಗೂ ಸ್ವಾತಂತ್ರ್ಯ ದಿನದ ಶಭಾಷಯಗಳನ್ನು ಕೋರಿದರು. ದೇಶದ ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದವರನ್ನು ಸ್ಮರಿಸುವ ದಿನವಿದು. ಹೋರಾಟಗಾರರ ತ್ಯಾಗ, ಬಲಿದಾನಗಳಿಂದ ದೇಶ ಸ್ವಾಯತ್ತತೆ ಪಡೆದಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಧ್ವಜವಂದನೆ, ಪಥ ಸಂಚಲನ, ಪ್ರತಿಭಾವಂತ ವಿದ್ಯಾರ್ಥಿಗಳು, ಮಾಜಿ ಸೈನಿಕರು, ನಿವೃತ್ತ ನೌಕರರನ್ನು, ಪೌರ ಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು,

ಬಿಇಒ ನಿಂಗಪ್ಪ ಸ್ವಾಗತಿಸಿದರು. ತಹಸೀಲ್ದಾರ್ ರಾಜೇಶ್ ಕುಮಾರ್, ಪುರಸಭೆ ಅಧ್ಯಕ್ಷ ಮೈಲಪ್ಪ, ಮುಖ್ಯಾಧಿಕಾರಿ ಲೀಲಾವತಿ, ಸಿಪಿಐ ಸುನೀಲ್ ಕುಮಾರ್, ಡಾ.ವಿಶ್ವನಟೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅರುಣ್, ನೌಕರರು, ಗಣ್ಯರು ಭಾಗವಹಿಸಿದ್ದರು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ಪೊಲೀಸ್, ಗೃಹರಕ್ಷಕ ದಳದವರು ಭಾಗವಹಿಸಿದ್ದರು.

- - -

-15ಎಚ್.ಎಲ್.ಐ1.ಜೆಪಿಜಿ:

ಹೊನ್ನಾಳಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶಾಸಕ ಡಿ.ಜಿ.ಶಾಂತನಗೌಡ ಸ್ವಾತಂತ್ರ್ಯ ದಿನ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರಧ್ವಜಾರೋಹಣ ಮಾಡಿದ. ಎ.ಸಿ.ಅಭಿಷೇಕ್, ತಾಲೂಕು ಅಡಳಿತ ಅಧಿಕಾರಿಗಳು, ಗಣ್ಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು
ಗ್ರಾಮೀಣ ಭಾಗದಲ್ಲೂ ವಸತಿ ಕಟ್ಟಡಗಳಿಗೆ ಒಸಿ-ಸಿಸಿ ಬೇಕಿಲ್ಲ