ವಿಶ್ವಮಟ್ಟದಲ್ಲಿ ಯೋಗಕ್ಕೆ ಮಾನ್ಯತೆ ಭಾರತಕ್ಕೆ ಸಿಕ್ಕ ಮನ್ನಣೆ: ಜಿಗಣೇಹಳ್ಳಿ ನೀಲಕಂಠಪ್ಪ

KannadaprabhaNewsNetwork |  
Published : Aug 03, 2024, 12:43 AM IST
1ಕೆಕೆಡಿಯು1. | Kannada Prabha

ಸಾರಾಂಶ

ಕಡೂರು, ಮನುಷ್ಯನ ಆರೋಗ್ಯಕ್ಕೆ ರಾಮಬಾಣವಾದ ಯೋಗವನ್ನು ವಿಶ್ವಮಟ್ಟದಲ್ಲಿ ಗುರುತಿಸಿರುವುದು ಭಾರತಕ್ಕೆ ಸಿಕ್ಕ ಮನ್ನಣೆ ಎಂದು ಬಿಜೆಪಿ ಮಂಡಲ ಉಪಾಧ್ಯಕ್ಷ ಜಿಗಣೇಹಳ್ಳಿ ನೀಲಕಂಠಪ್ಪ ಹೇಳಿದರು.

ರಾಜ್ಯ ಮಟ್ಟದ ಯೋಗ ಚಾಂಪಿಯನ್ ಶಿಪ್ ಸಮಾರೋಪ

ಕನ್ನಡಪ್ರಭ ವಾರ್ತೆ, ಕಡೂರು

ಮನುಷ್ಯನ ಆರೋಗ್ಯಕ್ಕೆ ರಾಮಬಾಣವಾದ ಯೋಗವನ್ನು ವಿಶ್ವಮಟ್ಟದಲ್ಲಿ ಗುರುತಿಸಿರುವುದು ಭಾರತಕ್ಕೆ ಸಿಕ್ಕ ಮನ್ನಣೆ ಎಂದು ಬಿಜೆಪಿ ಮಂಡಲ ಉಪಾಧ್ಯಕ್ಷ ಜಿಗಣೇಹಳ್ಳಿ ನೀಲಕಂಠಪ್ಪ ಹೇಳಿದರು.

ತಾಲೂಕಿನ ಮಲ್ಲೇಶ್ವರದ ಶ್ರೀಮತಿ ಪುಟ್ಟಮ್ಮ ಬೆಂಕಿ ಲಕ್ಷ್ಮಯ್ಯ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಯೋಗ ಚಾಂಪಿಯನ್ ಶಿಪ್ ಸಮಾರೋಪದಲ್ಲಿ ಮಾತನಾಡಿ, ಬೆಳೆಯುತ್ತಿರುವ ಜಗತ್ತಿನಲ್ಲಿ ಮನುಷ್ಯನ ಆರೋಗ್ಯವೂ ಮುಖ್ಯ. ಭವಿಷ್ಯದ ಪ್ರಜೆ ಗಳಾದ ಯುವ ಸಮೂಹ ಯೋಗ ಅಳ‍ವಡಿಸಿಕೊಂಡು ಆರೋಗ್ಯಯುತ ಜೀವನ ನಡೆಸಬೇಕು ಎಂದರು.

ನಮ್ಮ ದೈನಂದಿನ ಜೀವನಕ್ಕೆ ಅವಶ್ಯಕವಾದ ಯೋಗ ವಿದ್ಯೆ ಇಂದು ವಿಶ್ವವ್ಯಾಪಿಯಾಗಿದೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ಕಡೂರಿನ ಶ್ರೀ ರಾಘವೇಂದ್ರ ಯೋಗ ಶಿಕ್ಷಣ ಕೇಂದ್ರ ಯೋಗ ತರಬೇತಿ ನೀಡುತ್ತಿರುವುದು ಶ್ಲಾಘನೀಯ ಎಂದರು.

ದೊಡ್ಡಬಳ್ಳಾಪುರ ಜಿಲ್ಲೆಗೆ ಸಮಗ್ರ ಪ್ರಶಸ್ತಿ: ಕಡೂರಿನಲ್ಲಿ ನಡೆದ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರ ಜಿಲ್ಲೆಗೆ ಸಮಗ್ರ ಪ್ರಶಸ್ತಿ ದೊರೆತಿದೆ. 8 - 10 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಚಿಕ್ಕಮಗಳೂರಿನ ಗೋಕುಲ್ ಪ್ರಥಮ, ಬೆಂಗಳೂರು ಗ್ರಾಮಾಂತರದ ಪ್ರಥಮ್ ಶೆಟ್ಟಿ ದ್ವಿತೀಯ. ಬಾಲಕಿಯರ ವಿಭಾಗದಲ್ಲಿ ಶಿವಮೊಗ್ಗದ ನಮನ ಪ್ರಥಮ ಮತ್ತು ಬೆಂಗಳೂರು ಗ್ರಾಮಾಂತರದ ಅಪೂರ್ವ ದ್ವಿತೀಯ ಸ್ಥಾನ ಪಡೆದಿದ್ದಾರೆ. ಒಟ್ಟು 30 ವಿಭಾಗಗಳಲ್ಲಿ ವಿವಿಧ ವಯೋಮಾನದವರಿಗೆ ಸ್ಪರ್ಧೆ ಆಯೋಜಿಸಲಾಗಿತ್ತು. 20 ಜಿಲ್ಲೆಗಳ 700 ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು ಎಂದು ಶ್ರೀ ರಾಘವೇಂದ್ರ ಯೋಗ ಶಿಕ್ಷಣ ಕೇಂದ್ರದ ಪ್ರಾಚಾರ್ಯ ಗಿರೀಶ್ ತಿಳಿಸಿದರು.

ಬಿ.ಜೆ.ಕೃಷ್ಣಮೂರ್ತಿ, ಮುಖಂಡರಾದ ಅಡಕೆ ಚಂದ್ರು, ದಾನಿ ಉಮೇಶ್, ಯೋಗ ಶಿಕ್ಷಕಿ ವಿಜಯಾ ಗಿರೀಶ್, ಬೆಂಕಿ ಶೇಖರಪ್ಪ, ಡಾ.ಪೂರ್ಣಿಮಾ ದಿನೇಶ್, ಗೀತಾ ಶ್ರೀನಾಥ್, ಮಂಜುಳಾ ಚಂದ್ರು ಮತ್ತಿತರರು ಇದ್ದರು. 1ಕೆಕೆಡಿಯು1.ಯೋಗ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿದ ವಿದ್ಯಾರ್ಥಿಗಳು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ