ಕನ್ನಡಪ್ರಭ ವಾರ್ತೆ ಅಥಣಿ
ಬುಧವಾರ ಇಲ್ಲಿನ ಮಿನಿ ವಿಧಾನಸೌಧ ತಹಸೀಲ್ದಾರ್ ಕಾರ್ಯಾಲಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸುವ ಹಿನ್ನೆಲೆಯಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಹರ್ ಘರ್ ತಿರಂಗಾ ಅಭಿಯಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಆ.15ರ ಸ್ವಾತಂತ್ರ್ಯ ದಿನಾಚರಣೆ ನಾವೆಲ್ಲರೂ ಅರ್ಥಪೂರ್ಣವಾಗಿ ಆಚರಿಸೋಣ. ಜೊತೆಗೆ ದೇಶದ ಸಂಸ್ಕೃತಿ, ಭದ್ರತೆ, ಐಕ್ಯತೆ ಮತ್ತು ಎಲ್ಲರೂ ಒಂದಾಗಿ ಸಾಗೋಣ ಎಂಬ ಸಂದೇಶವನ್ನು ಸಾರಲು ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ. ಈ ಜನಜಾಗೃತಿ ಮೆರವಣಿಗೆಯಲ್ಲಿ ಭಾಗವಹಿಸಲು ನನಗೂ ಹೆಮ್ಮೆ ಎನಿಸುತ್ತದೆ ಎಂದು ಹೇಳಿದರು.
ತಾಲೂಕು ತಹಸೀಲ್ದಾರ್ (ಪ್ರೊಬೇಷನರಿ ಐಎಎಸ್ ಅಧಿಕಾರಿ) ದಿನೇಶಕುಮಾರ ಮೀನಾ ಮಾತನಾಡಿ, ತಾಲೂಕಿನ ಎಲ್ಲ ಗ್ರಾಮ ಪಂಚಾಯತಿ, ಅಂಗನವಾಡಿ ಕೇಂದ್ರ, ಶಾಲಾ-ಕಾಲೇಜು, ಸರ್ಕಾರಿ ಕಚೇರಿ, ನ್ಯಾಯಬೆಲೆ ಅಂಗಡಿ, ಸಂಘ-ಸಂಸ್ಥೆಗಳು, ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು. ಕಡ್ಡಾಯವಾಗಿ ಧ್ವಜ ಸಂಹಿತೆ ಪಾಲಿಸಬೇಕು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳನ್ನು ಸ್ಮರಿಸಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಡಿವೈಎಸ್ಪಿ ಶ್ರೀಪಾದ ಜಾಲ್ದೆ, ತಾಪಂ ಇಒ ಶಿವಾನಂದ ಕಲ್ಲಾಪುರ, ಅಭಿಯಂತರ ವೀರಣ್ಣ ವಾಲಿ, ಕೃಷಿ ಸಹಾಯಕ ನಿರ್ದೇಶಕ ನಿಂಗನಗೌಡ ಬಿರಾದಾರ, ಪುರಸಭೆ ಮುಖ್ಯ ಅಧಿಕಾರಿ ಅಶೋಕ ಗುಡಿಮನಿ, ಪಿಎಸ್ಐ ಶಿವಾನಂದ ಕಾರಜೋಳ, ತಾಲೂಕು ವೈದ್ಯಾಧಿಕಾರಿ ಡಾ. ಬಸಗೌಡ ಕಾಗೆ, ಉಪತಹಸೀಲ್ದಾರ ಮಹದೇವ ಬಿರಾದಾರ, ಗ್ರಾಮ ಆಡಳಿತ ಅಧಿಕಾರಿಗಳಾದ ಎಂ.ಎಂ ಮಿರ್ಜಿ, ಎಂ.ಎಂ. ಮಲ್ಲುಖಾನ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ತ್ರಿವರ್ಣ ಧ್ವಜ ಹಿಡಿದು ಬೈಕ್ ಜಾಥಾದಲ್ಲಿ ಭಾಗವಹಿಸಿದ್ದರು.ಬೈಕ್ ಓಡಿಸಿ ಜಾಗೃತಿ ಮೂಡಿಸಿದ ಶಾಸಕ ಸವದಿ: