2036ರ ಒಲಂಪಿಕ್ಸ್‌ನಲ್ಲಿ ಭಾರತ ಅಗ್ರಸ್ಥಾನದಲ್ಲಿ ಇರಲಿ: ಶೋಭಾ ಕರಂದ್ಲಾಜೆ

KannadaprabhaNewsNetwork |  
Published : Nov 24, 2025, 02:15 AM IST
BJP 1 | Kannada Prabha

ಸಾರಾಂಶ

ಭಾರತದಲ್ಲಿ 2036ಕ್ಕೆ ನಡೆಯಲಿರುವ ಒಲಂಪಿಕ್ಸ್‌ ಕ್ರೀಡಾಕೂಟದಲ್ಲಿ ಪದಕ ಪಟ್ಟಿಯಲ್ಲಿ ಅಗ್ರ ಹತ್ತರಲ್ಲಿ ಸ್ಥಾನ ಪಡೆಯಬೇಕು. ಪದಕ ಗೆಲ್ಲಲು ಈಗಿನಿಂದಲೇ ಕಠಿಣ ತರಬೇತಿ ಪಡೆಯುವುದರ ಜೊತೆಗೆ ಕಠಿಣ ಶ್ರಮ ಪಡಬೇಕು ಎಂದು ಕೇಂದ್ರ ಎಂಎಸ್‌ಎಂಇ ಕೈಗಾರಿಕೆ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಭಾರತದಲ್ಲಿ 2036ಕ್ಕೆ ನಡೆಯಲಿರುವ ಒಲಂಪಿಕ್ಸ್‌ ಕ್ರೀಡಾಕೂಟದಲ್ಲಿ ಪದಕ ಪಟ್ಟಿಯಲ್ಲಿ ಅಗ್ರ ಹತ್ತರಲ್ಲಿ ಸ್ಥಾನ ಪಡೆಯಬೇಕು. ಪದಕ ಗೆಲ್ಲಲು ಈಗಿನಿಂದಲೇ ಕಠಿಣ ತರಬೇತಿ ಪಡೆಯುವುದರ ಜೊತೆಗೆ ಕಠಿಣ ಶ್ರಮ ಪಡಬೇಕು ಎಂದು ಕೇಂದ್ರ ಎಂಎಸ್‌ಎಂಇ ಕೈಗಾರಿಕೆ ಖಾತೆ ರಾಜ್ಯ ಸಚಿವೆ ಶೋಭ ಕರಂದ್ಲಾಜೆ ಹೇಳಿದರು.

ಜಿಕೆವಿಕೆ ಆವರಣದ ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಭಾನುವಾರ ಆಯೋಜಿಸಿದ್ದ ‘ಸಂಸದ್‌ ಕ್ರೀಡಾ ಮಹೋತ್ಸವ’ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದ ಅವರು, ಒಲಿಂಪಿಕ್ಸ್‌ಗೆ ಅಗತ್ಯವಾದ ಮೂಲ ಸೌಕರ್ಯಗಳನ್ನು ಕಲ್ಪಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದರು.

ಮುಂದಿನ ಹತ್ತು ವರ್ಷಗಳಲ್ಲಿ ದೇಶದ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡುವುದರ ಜೊತೆಗೆ ಪದಕ ಗೆಲ್ಲುವ ಕ್ರೀಡಾ ಪಟುಗಳನ್ನು ಗುರುತಿಸಿ ಅವರಿಗೆ ಸೂಕ್ತ ತರಬೇತಿ ವ್ಯವಸ್ಥೆ ಮಾಡಲು ಈ ಸಂಸದ್ ಕ್ರೀಡಾ ಮಹೋತ್ಸವ ಆಯೋಜಿಸಲಾಗಿದೆ ಎಂದು ಹೇಳಿದರು.

ಪ್ರೋತ್ಸಾಹ ಸಿಕ್ಕರೆ ಸಾಧನೆಗೆ ಅವಕಾಶ:

ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಮಾತನಾಡಿ, ಇತರೆ ಕ್ಷೇತ್ರಗಳಿಗೆ ಹೋಲಿಕೆ ಮಾಡಿದರೆ ಕ್ರೀಡಾ ಕ್ಷೇತ್ರದಲ್ಲಿ ತುಸು ಹಿಂದಿದ್ದೇವೆ. ಹೀಗಾಗಿ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಈ ಕ್ಷೇತ್ರದಲ್ಲಿಯೂ ಸಾಧನೆ ಮಾಡುವ ಅವಕಾಶವಿದೆ ಎಂದರು.

ಇದೇ ವೇಳೆ ಕ್ರೀಡಾಕೂಟದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದರಾದ ತೇಜಸ್ವಿ ಸೂರ್ಯ, ಪಿ.ಸಿ.ಮೋಹನ್‌, ಶಾಸಕ ಬೈರತಿ ಬಸವರಾಜು, ರಾಜ್ಯಸಭಾ ಸದಸ್ಯ ಲೆಹರ್‌ ಸಿಂಗ್‌ ಮತ್ತಿತರರು ಉಪಸ್ಥಿತರಿದ್ದರು.

ಜಿಕೆವಿಕೆ ಆವರಣದ ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಭಾನುವಾರ ಆಯೋಜಿಸಿದ್ದ ‘ಸಂಸದ್‌ ಕ್ರೀಡಾ ಮಹೋತ್ಸವ’ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಿಎಂ ಡಿ.ವಿ.ಸದಾನಂದಗೌಡ, ಸಂಸದ ತೇಜಸ್ವಿಸೂರ್ಯ ಉಪಸ್ಥಿತರಿದ್ದರು.

PREV

Recommended Stories

ಬಿ.ವಿ. ಶ್ರೀನಿವಾಸ್‌ಗೆ ಅದ್ಧೂರಿ ಸ್ವಾಗತ
ಸೆಕ್ಸ್‌ ಸಮಸ್ಯೆ ಪರಿಹಾರ ನೆಪದಲ್ಲಿ ₹48 ಲಕ್ಷ ವಂಚನೆ