ವಿಕಸಿತ ಭಾರತವಾಗಿ ಪರಿವರ್ತನೆ ಹೊಂದಬೇಕು: ಯಾಳಗಿ

KannadaprabhaNewsNetwork |  
Published : Feb 12, 2024, 01:30 AM ISTUpdated : Feb 12, 2024, 01:31 AM IST
ಶಹಾಪುರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಗ್ರಾಮ ಚಲೋ ಅಭಿಯಾನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಅಮೀನ್ ರೆಡ್ಡಿ ಯಾಳಗಿ ಚಾಲನೆ ನೀಡಿ ಮಾತನಾಡಿದರು. | Kannada Prabha

ಸಾರಾಂಶ

ಮೋದಿ ಮತ್ತೊಮ್ಮೆ ಎಂಬ ವಿಚಾರವನ್ನು ಮುಂದಿಟ್ಟುಕೊಂಡು, ಮೋದಿಜೀ ಅವರು 3ನೇ ಬಾರಿಗೆ ಪ್ರಧಾನಿ ಆಗಬೇಕೆಂಬ ಆಶಯವನ್ನು ಹೊಂದಿ ಗೋಡೆ ಬರಹ ಬರೆಯಲಾಗುವುದು.

ಕನ್ನಡಪ್ರಭ ವಾರ್ತೆ ಶಹಾಪುರ

ಶಹಾಪುರ ನಗರದ ಬಿಜೆಪಿ ಕಚೇರಿಯಲ್ಲಿ ಗ್ರಾಮ ಚಲೋ ಅಭಿಯಾನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಅಮೀನ್ ರೆಡ್ಡಿ ಯಾಳಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, 2047ನೇ ಇಸವಿಗೆ ಭಾರತವು ವಿಕಸಿತ ಭಾರತವಾಗಿ ಪರಿವರ್ತನೆ ಹೊಂದಬೇಕು. ಭಾರತವು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತನೆ ಕಾಣಬೇಕೆಂಬ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಕನಸು ನನಸಾಗಲು ಗ್ರಾಮಗಳೂ ಅಭಿವೃದ್ಧಿ ಹೊಂದಬೇಕಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸವಲತ್ತುಗಳು ಸಿಗಬೇಕು ಎಂದರು.

ಈ ನಿಟ್ಟಿನಲ್ಲಿ ಗ್ರಾಮ ಚಲೋ ಅಭಿಯಾನವು ಉತ್ತಮ ಅಭಿಯಾನ ಆಗಲಿದೆ. ಈ ಅಭಿಯಾನದ ಮೂಲಕ ಪ್ರತಿ ಗ್ರಾಮ, ಪ್ರತಿ ಮನೆಗೂ ಬಿಜೆಪಿ ಕಾರ್ಯಕರ್ತರು ತಲುಪಲಿದ್ದು, ಕೇಂದ್ರ ಸರಕಾರವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೊಟ್ಟ ಜನಪರ ಯೋಜನೆಗಳನ್ನು ಮನೆಮನೆಗೆ ತಲುಪಿಸಲಾಗುತ್ತದೆ ಎಂದರು.

ಈ ಅಭಿಯಾನವು ಬಿಜೆಪಿಗೆ ದೊಡ್ಡ ಶಕ್ತಿಯಾಗಲಿದೆ. ಮೋದಿ ಮತ್ತೊಮ್ಮೆ ಎಂಬ ವಿಚಾರವನ್ನು ಮುಂದಿಟ್ಟುಕೊಂಡು, ಮೋದಿಜೀ ಅವರು 3ನೇ ಬಾರಿಗೆ ಪ್ರಧಾನಿ ಆಗಬೇಕೆಂಬ ಆಶಯವನ್ನು ಹೊಂದಿ ಗೋಡೆ ಬರಹ ಬರೆಯಲಾಗುವುದು. ಕಳೆದ 10 ವರ್ಷಗಳಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ದೇಶದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕೆಂಬ ನಿಟ್ಟಿನಲ್ಲಿ ಈ ಅಭಿಯಾನ ನಡೆಯುತ್ತಿದೆ. ದೇಶದ ಪ್ರತಿಯೊಬ್ಬ ನಾಗರಿಕರೂ ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಎಂದು ಹೇಳಿದರು.

ಸಿದ್ದಾಜಿ ಪಾಟೀಲ್ ಕಲಬುರಗಿ, ಗ್ರಾಮ ಚಲೋ’ ಅಭಿಯಾನದ ಜಿಲ್ಲಾ ಸಂಚಾಲಕ ಬಸನಗೌಡ ಯಾಡಿಯಾಪುರ, ಡಾ. ಚಂದ್ರಶೇಖರ ಸುಬೇದಾರ, ಬಸವರಾಜಪ್ಪ ವಿಭೂತಿಹಳ್ಳಿ, ನಗರ ಮಂಡಲ ಅಧ್ಯಕ್ಷ ದೇವೀಂದ್ರಪ್ಪ ಕೊನೇರ, ಸಂಗಣ್ಣ ಸಾಹು ತುಂಬಗಿ, ದೇವೀಂದ್ರಪ್ಪ ನಾಶಿ, ಶಿವರಾಜ ದೇಶಮುಖ, ಮರೆಪ್ಪ ಹಾಯ್ಯಾಳಕರ, ಮಲ್ಲಿಕಾರ್ಜುನ ಚಿಲ್ಲಾಳ ಸೇರಿದಂತೆ ಇತರರಿದ್ದರು.

PREV

Recommended Stories

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ