ಬಿಜೆಪಿ ಯುವ ಮೋರ್ಚಾದ ಮತ್ತೊಮ್ಮೆ ಮೋದಿ ಸರ್ಕಾರ, ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ
ಭಾರತ, ವಿಶ್ವಗುರು ಆಗಬೇಕು, ನರೇಂದ್ರಮೋದಿಯವರು ಮತ್ತೆ ಪ್ರಧಾನಿ ಆಗಬೇಕು ಹಾಗಾಗಿ ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮಾಜಿ ಸಚಿವ ಸಿ.ಟಿ. ರವಿ ಕರೆ ನೀಡಿದ್ದಾರೆ.
ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿರುವ ಮತ್ತೊಮ್ಮೆ ಮೋದಿ ಸರ್ಕಾರ, ಗೋಡೆ ಬರಹ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರದ ಹಿತವನ್ನು ಸರ್ವಸ್ವ ಎಂದು ಭಾವಿಸಿ ಕೆಲಸ ಮಾಡುತ್ತಿದ್ದಾರೆ. ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಹೇಳಿದರು.ಬಡವರಿಗೆ ಜನ್ ಧನ್, ಆಯುಷ್ಮಾನ್, ಪ್ರಧಾನಮಂತ್ರಿ ಅವಾಸ್, ದೇಶದ 84 ಕೋಟಿ ಜನರಿಗೆ ನಿರಂತರವಾಗಿ ಅಕ್ಕಿ ಕೊಡ್ತಾ ಇರೋದು ಬಿಜೆಪಿ ಸರ್ಕಾರ. ಉಜ್ವಲ ಯೋಜನೆ, ಕಿಸಾನ್ ಸಮ್ಮಾನ್ ಯೋಜನೆ, ಹೀಗೆ ಹತ್ತಾರು ಯೋಜನೆಗಳ ಜತೆಗೆ 370 ವಿಧಿ ರದ್ದು ಪಡಿಸಿದ್ದು ಬಿಜೆಪಿ ಸರ್ಕಾರ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಮಧುಕುಮಾರ್ ರಾಜ್ ಅರಸ್, ನಗರಸಭೆ ಉಪಾಧ್ಯಕ್ಷ ಅಮೃತೇಶ್, ಯುವ ಘಟಕದ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್, ಹಿರೇಮಗಳೂರು ಪುಟ್ಟಸ್ವಾಮಿ ಇದ್ದರು. 15 ಕೆಸಿಕೆಎಂ 6